2021ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಟ್ರಂಪ್ ಹೆಸರು ಶಿಫಾರಸು
Team Udayavani, Sep 10, 2020, 6:02 AM IST
ವಾಷಿಂಗ್ಟನ್: ಮುಂದಿನ ವರ್ಷದ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರನ್ನು ಸೂಚಿಸಲಾಗಿದೆ. ಇಸ್ರೇಲ್ ಮತ್ತು ಸಂಯುಕ್ತ ಅರಬ್ ಗಣರಾಜ್ಯ (ಯುಎಇ) ನಡುವೆ ಐತಿಹಾಸಿಕ ಶಾಂತಿ ಒಪ್ಪಂದ ಉಂಟು ಮಾಡುವಲ್ಲಿ ಟ್ರಂಪ್ ಮುಖ್ಯ ಭೂಮಿಕೆ ವಹಿಸಿರುವ ಹಿನ್ನೆಲೆಯಲ್ಲಿ ಅವರ ಹೆಸರನ್ನು ನೊಬೆಲ್ಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ನಾರ್ವೆಯ ಸಂಸದ ಕ್ರಿಶ್ಚಿಯನ್ ಟೈಬ್ರಿಂಗ್- ಜೆಡ್ಡೆ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷರು ಉತ್ತಮ ಸಾಧನೆ ಮಾಡಿದ್ದಾರೆ. ಇದೇ ಪುರಸ್ಕಾರಕ್ಕಾಗಿ ನಾಮನಿರ್ದೇಶನಗೊಂಡ ಇತರರಿಗಿಂತ ಟ್ರಂಪ್ ಜಗತ್ತಿನಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದ ಟೈಬ್ರಿಂಗ್- ಜೆಡ್ಡೆ ಕೊಂಡಾಡಿದ್ದಾರೆ. ಅವರ ನೇತೃತ್ವದ ಸರ್ಕಾರ 2 ದೇಶಗಳ ನಡುವೆ ಶಾಂತಿ ಸ್ಥಾಪನೆಯಲ್ಲಿ ಹೆಚ್ಚಿನ ಪಾತ್ರ ವಹಿಸಿದೆ ಎಂದಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರ ವಿಚಾರವಾಗಿ ಇರುವ ಬಿಕ್ಕಟ್ಟು ಪರಿಹರಿಸುವಲ್ಲೂ ಮಧ್ಯಸ್ಥಿಕೆ ವಹಿಸುವುದಾಗಿ ಟ್ರಪ್ ಹೇಳಿದ್ದರು ಎಂದು ಜೆಡ್ಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ