ಅಮೆರಿಕಾ: ಪ್ಲೊರಿಡಾದ ಚರ್ಚ್’ನಲ್ಲಿ ಅಪರಿಚಿತನಿಂದ ಗುಂಡಿನ ದಾಳಿ; ಇಬ್ಬರು ಸಾವು
Team Udayavani, Feb 2, 2020, 8:32 AM IST
ಅಮೆರಿಕಾ: ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ ಅಪರಿಚಿತನೋರ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಬಾಲಕ ಸೇರಿದಂತೆ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪ್ಲೊರಿಡಾದ ವಿಕ್ಟರಿ ಸಿಟಿ ಚರ್ಚ್ ನಲ್ಲಿ ನಡೆದಿದೆ.
ಭಾರತೀಯ ಕಾಲಮಾನ ಮಧ್ಯಾರಾತ್ರಿ 1 ಗಂಟೆಯ ವೇಳೆ ( ಅಮೇರಿಕಾ 2:30 PM) ಅಪರಿಚಿತನಿಂದ ಈ ಗುಂಡಿನ ದಾಳಿ ನಡೆದಿದ್ದು 15 ವರ್ಷದ ಬಾಲಕ ಸೇರಿದಂತೆ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಮಹಿಳೆ ಮತ್ತು ಮತ್ತೋರ್ವ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ ಮೃತಪಟ್ಟವರ ಮತ್ತು ಗಾಯಗೊಂಡವರ ಹೆಸರುಗಳು ತಿಳಿಸದುಬಂದಿಲ್ಲ ಎಂದು ರೈವಿರಿಯಾ ಬೀಚ್ ಪೊಲೀಸರು ತಿಳಿಸಿದ್ದಾರೆ.
ಅಪರಿಚಿತ 13 ಸುತ್ತು ಗುಂಡು ಹಾರಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯ ಬಳಿಕ ಚರ್ಚ್ ನಲ್ಲಿ ಪ್ರಾರ್ಥನೆ ನಡೆಸಲಾಗುತ್ತಿತ್ತು. ಈ ವೇಳೆ ಅಪರಿಚಿತ ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಇದಕ್ಕಾಗಿ ಶೋಕ ವ್ಯಕ್ತಪಡಿಸುತ್ತಿದ್ದೇವೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಚರ್ಚ್ ನ ಸದಸ್ಯನಲ್ಲ ಎಂದು ಪಾದ್ರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?