140 ಹಾವುಗಳ ಸಂಗ್ರಹಾಲಯ; ಹೆಬ್ಬಾವು ಕುತ್ತಿಗೆಗೆ ಸುತ್ತಿಕೊಂಡು ಮಹಿಳೆ ಉಸಿರುಗಟ್ಟಿ ಸಾವು
Team Udayavani, Nov 2, 2019, 10:39 AM IST
ವಾಷಿಂಗ್ಟನ್: ಬೆನ್ ಟೋನ್ ಕೌಂಟಿ ಶರೀಫ್ ಡಾನ್ ಮುನ್ಸನ್ ಒಡೆತನಕ್ಕೆ ಸೇರಿದ್ದ 140 ಹಾವುಗಳ ಸಂಗ್ರಹಾಲಯದಲ್ಲಿ 36ರ ಹರೆಯದ ಮಹಿಳೆಗೆ ಭಾರೀ ಗಾತ್ರದ ಹೆಬ್ಬಾವು ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಕ್ಸ್ ಫೋರ್ಡ್ ನಲ್ಲಿರುವ ಮನೆಯಲ್ಲಿ ಲೌರಾ ಹರ್ಸ್ಟ್ ಶವ ಪತ್ತೆಯಾಗಿರುವುದಾಗಿ ಪೊಲೀಸ್ ವಕ್ತಾರ ಕಿಮ್ ರಿಲೈ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಬರೋಬ್ಬರಿ ಎಂಟು ಅಡಿ ಉದ್ದದ (2.4 ಮೀಟರ್) ಹೆಬ್ಬಾವು ಲೌರಾ ಕುತ್ತಿಗೆಗೆ ಸುತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಹೆಬ್ಬಾವಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದರೂ ವಿಫಲವಾಗಿರುವುದು ಘಟನಾ ಸ್ಥಳ ಪರಿಶೀಲಿಸಿದಾಗ ಕಂಡು ಬಂದಿರುವುದಾಗಿ ವರದಿ ವಿವರಿಸಿದೆ.
ಭಾರೀ ಗಾತ್ರದ ಹೆಬ್ಬಾವು ಕುತ್ತಿಗೆಗೆ ಸುತ್ತಿಕೊಂಡಿದ್ದರಿಂದ ಲೌರಾ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ರಿಲೈ ಜರ್ನಲ್ ಅಂಡ್ ಕೊರಿಯರ್ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ. ಲೌರಾ ಸಾವಿನ ಕುರಿತ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ