Video: ಬಾಗ್ದಾದಿ ಮೇಲೆ ನಡೆದ ದಾಳಿಯ ಪೋಟೋ-ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ ಸೇನೆ


Team Udayavani, Oct 31, 2019, 8:05 AM IST

americqa

ವಾಷಿಂಗ್ಟನ್ : ಸಿರಿಯಾದ ಇಡ್ಲಿಬ್ ಪ್ರಾಂತ್ಯದಲ್ಲಿ ಅಮೆರಿಕಾ ಸೇನೆ ನಡೆಸಿದ  ಕಾರ್ಯಾಚರಣೆಯಲ್ಲಿ ಹತನಾದ ಐಸಿಸ್ ಮುಖ್ಯಸ್ಥ ಅಬುಬಕರ್ ಅಲ್ ಬಗ್ದಾದಿಯನ್ನು ಅಂತರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಸಮುದ್ರದಲ್ಲಿ ಸಮಾಧಿ ಮಾಡಲಾಗಿದೆ ಎಂದು ಅಮೇರಿಕಾ ಸೇನೆ ದೃಢಪಡಿಸಿದೆ. ಜೊತೆಗೆ ದಾಳಿಯ ಸಂದರ್ಭದಲ್ಲಿ ಚಿತ್ರಿಕರಿಸಿದ ಪೋಟೋ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದೆ.

ಅಲ್ ಬಗ್ದಾದಿಯ ಉತ್ತರಾಧಿಕಾರಿ ಇನ್ನು ಕೆಲವೇ ವಾರಗಳಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಅಮೆರಿಕ ಸೇನೆಯ ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಸುಮಾರು 14 ಸಾವಿರ ಹೋರಾಟಗಾರರು ಇರಾಖ್ ಮತ್ತು ಸಿರಿಯಾದ ವಿವಿಧ ಪ್ರಾಂತ್ಯಗಳಲ್ಲಿ ಚದುರಿದ್ದಾರೆ ಎಂದು ಅಮೆರಿಕಾದ ಭಯೋತ್ಪಾದಕ ನಿಗ್ರಹ ಕೇಂದ್ರದ ನಿರ್ದೇಶಕ ರಸ್ ಟ್ರಾನ್ಸರ್ಸ್ ಹೇಳಿದ್ದಾರೆ.

ಅಮೆರಿಕಾ ಸೇನೆ ಬಿಡುಗಡೆ ಮಾಡಿದ ಚಿತ್ರವು ಕಪ್ಪು ಬಿಳುಪು ಬಣ್ಣವನ್ನು ಹೊಂದಿದ್ದು ​ ವಾಯುವ್ಯ ಸಿರಿಯಾ ಭಾಗದಲ್ಲಿ ಎತ್ತರದ ಕಾಂಪೌಂಡ್ ನಡುವಿ​ನ ಬಾಗ್ದಾದಿ ಅಡಗುತಾಣಕ್ಕೆ ಯುಎಸ್​ ಪಡೆ ಕಾಲ್ನಡಿಗೆಯಲ್ಲಿ ಶಸ್ತ್ರಾಸ್ತ್ರಧಾರಿಯಾಗಿ ಬರುತ್ತಿರುವುದನ್ನು ವಿಡಿಯೋ ಮತ್ತು ಫೋಟೋದಲ್ಲಿ ಕಾಣಬಹುದಾಗಿದೆ.ಸಿರಿಯಾ ಇಡ್ಲಿಬ್​ ಪ್ರಾಂತ್ಯದಲ್ಲಿರುವ ಬಾಗ್ದಾದಿ ಕಾಪೌಂಡ್​ನ್ನು ಹೊಡೆದುರುಳಿಸಲು ಸೇನಾ ಪಡೆಯ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್​ ಮೇಲೆ ಗುಂಡಿನ ದಾಳಿ ನಡೆಸಿದ ಬಾಗ್ದಾದಿ ಬೆಂಬಲಿಗರ ವಿರುದ್ಧ ವೈಮಾನಿಕ ದಾಳಿ ನಡೆಸಿದ ದೃಶ್ಯ ವಿಡಿಯೋದಲ್ಲಿದೆ. ಇಡ್ಲಿಬ್​ ಪ್ರಾಂತ್ಯದಲ್ಲಿ ಪ್ರತ್ಯೇಕವಾಗಿದ್ದ ಬೃಹದಾಕಾರದ ಕಾಪೌಂಡ್​ನ ದಾಳಿಯ ಮೊದಲಿನ ಚಿತ್ರ ಹಾಗೂ ದಾಳಿಯ ನಂತರದ ಚಿತ್ರವನ್ನು ಬಿಡುಗಡೆಗೊಳಿಸಿದೆ.

ಯುಎಸ್​ ವಿಶೇಷ ಪಡೆ ದಾಳಿ ಬಳಿಕ ಧ್ವಂಸಗೊಂಡ ಕಾಂಪೌಂಡ್​ ನೋಡಲು ದೊಡ್ಡದಾದ ಗುಂಡಿಯೊಂದಿಗೆ ಪಾರ್ಕಿಂಗ್​ ಸ್ಥಳದಂತೆ ಕಾಣುತ್ತಿತ್ತು ಎಂದು ಕಮ್ಯಾಂಡರ್​ ಆಫ್​ ಯುಎಸ್​ ಸೆಂಟ್ರಲ್​ ಕಮ್ಯಾಂಡ್​ನ ಮರೀನ್​ ಕಾರ್ಪ್ಸ್​ ಜನರಲ್​ ಕಿನ್ನೀತ್​ ಮೆಕೆಂಜಿ ತಿಳಿಸಿದರು.

ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೊದಲೇ ಹೇಳಿದಂತೆ ಬಾಗ್ದಾದಿ ಸುರಂಗ ಮಾರ್ಗದ ಮೂಲಕ ತಪ್ಪಿಕೊಳ್ಳಲು ಪ್ರಯತ್ನಿಸಿ ಸಾಧ್ಯವಾಗದೇ ತನ್ನನ್ನೇ ಸ್ಪೋಟಿಸಿಕೊಂಡ . ಆದರೆ, ಈ ವೇಳೆ ತನ್ನ ಮೂವರು ಮಕ್ಕಳೊಂದಿಗೆ ಆತ ಸಾಯಲಿಲ್ಲ. ಬದಲಾಗಿ ಇಬ್ಬರು ಮಕ್ಕಳು ಮಾತ್ರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಮಕ್ಕಳಿಬ್ಬರು 12 ರೊಳಗಿನ ವಯೋಮಾನದವರು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕುಖ್ಯಾತ ಐಸಿಸ್ ಉಗ್ರ ಸಂಘಟನೆಯೆ ಸಂಸ್ಥಾಪಕ ಅಬುಬಕರ್ ಅಲ್ ಬಾಗ್ದಾದಿಯನ್ನು ರವಿವಾರ ಅಮೇರಿಕಾ ಸೇನೆಯು ಸರಿಯಾದಲ್ಲಿ ಆತನ ರಹಸ್ಯ ಅಡಗುತಾಣದಲ್ಲಿ ನುಗ್ಗಿ ಬಲಿ ಪಡೆದಿತ್ತು.

 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.