ಇದು ಸೂಕ್ಷ್ಮ ವಿಚಾರ; ಕಾಶ್ಮೀರ ವಿಚಾರದಲ್ಲಿ ಮತ್ತೆ ಮಧ್ಯಸ್ಥಿಕೆ ವಹಿಸುವೆ ಎಂದ ಟ್ರಂಪ್!

Team Udayavani, Aug 21, 2019, 12:07 PM IST

ನವದೆಹಲಿ: ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಎರಡು ದೇಶಗಳು ದ್ವಿಪಕ್ಷೀಯ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಬ್ರಿಟನ್ ಸಲಹೆ ನೀಡಿದೆ. ಮತ್ತೊಂದೆಡೆ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಕಾಶ್ಮೀರದ ಸಮಸ್ಯೆಗೆ ಸಂಬಂಧಿಸಿದಂತೆ ಹಿಂದೂ ಮತ್ತು ಮುಸ್ಲಿಮ ಎಂಬ ಭಿನ್ನಾಭಿಪ್ರಾಯವಿದೆ. ಈ ನಿಟ್ಟಿನಲ್ಲಿ ನಾನು ಮಧ್ಯಸ್ಥಿಕೆ ವಹಿಸಿ ಸಹಾಯ ಮಾಡಬಲ್ಲೆ ಇಲ್ಲವೇ ಏನಾದರು ಪರಿಹಾರ ಕೊಡಿಸಬಲ್ಲೆ ಎಂಬುದಾಗಿ ಟ್ರಂಪ್ ಭಾರತಕ್ಕೆ ಸಲಹೆ ನೀಡಿದ್ದಾರೆ.

ಫ್ರಾನ್ಸ್ ನಲ್ಲಿ ಈ ವಾರಾಂತ್ಯದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರ ಜತೆ ಸಭೆ ನಡೆಸುವುದಾಗಿ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ನಿಮ್ಮಲ್ಲಿ ಹಿಂದೂಗಳೂ ಇದ್ದಾರೆ, ಮುಸ್ಲಿಮರೂ ಇದ್ದಾರೆ. ಹೀಗಾಗಿ ಈ ಸಮಸ್ಯೆಯನ್ನು ಇನ್ನೂ ದೊಡ್ಡದಾಗಲು ಬಿಡಬಾರದು ಎಂಬುದು ತನ್ನ ಅಭಿಪ್ರಾಯ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಇದೊಂದು ತುಂಬಾ ಸಂದಿಗ್ಧ ಪರಿಸ್ಥಿತಿಯಾಗಿದೆ. ಯಾಕೆಂದರೆ ಇದರಲ್ಲಿ ಧರ್ಮದ ವಿಚಾರವೂ ಸೇರಿದೆ ಎಂದರು. ಡೊನಾಲ್ಡ್ ಟ್ರಂಪ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ