ಏರ್ಪೋರ್ಟ್ ಅಧಿಕಾರಿಗಳ ಬಗ್ಗೆ ಮಹಿಳೆಯರು ಗರಂ
Team Udayavani, Nov 16, 2021, 5:30 AM IST
ದೋಹಾ: ಕತಾರ್ನ ದೋಹಾ ವಿಮಾನ ನಿಲ್ದಾಣದಲ್ಲಿ ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರ ಕುರಿತಾಗಿ ಇದೀಗ ಮಹಿಳೆಯರು ಧ್ವನಿ ಎತ್ತಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುವುದಾಗಿ ಹೇಳಿಕೊಂಡಿದ್ದಾರೆ.
ಕಳೆದ ವರ್ಷ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ನವಜಾತ ಶಿಶುವೊಂದು ಸಿಕ್ಕ ಹಿನ್ನೆಲೆಯಲ್ಲಿ ಅಲ್ಲಿನ ಅಧಿಕಾರಿಗಳು ಒಟ್ಟು 10 ಏರ್ಲೈನ್ಗಳಲ್ಲಿ ಪ್ರಯಾಣಿಸಲು ಹೊರಟಿದ್ದ ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಅದರಲ್ಲಿ ವಿದೇಶಿ ಮಹಿಳೆಯರೂ ಇದ್ದಿದ್ದು, ಈ ಘಟನೆಯಿಂದ ಅವರೆಲ್ಲರೂ ಮಾನಸಿಕ ಹಿಂಸೆಗೆ ಒಳಗಾಗಿದ್ದಾಗಿ ವರದಿಯಾಗಿದೆ.
ಇದನ್ನೂ ಓದಿ:ದಾಂಪತ್ಯಕ್ಕೆ ಕಾಲಿಟ್ಟ ರಾಜ್ಕುಮಾರ್ ರಾವ್-ಪತ್ರಲೇಖಾ
ಈ ಘಟನೆಯ ಬಗ್ಗೆ ಕತಾರ್ನ ಪ್ರಧಾನಿ ಕ್ಷಮೆ ಯಾಚಿಸಿ, ಆ ಅಧಿಕಾರಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಆದರೆ ಆ ತಪ್ಪಿಗೆ ಅಧಿಕೃತ ಕ್ಷಮಾಪಣೆ, ಪರಿಹಾರ, ಮಹಿಳೆಯರಿಗೆ ರಕ್ಷಣೆಯ ಗ್ಯಾರಂಟಿ ಬೇಕೆಂದಿರುವ ಏಳು ಮಹಿಳೆಯರು ಇದರ ಬಗ್ಗೆ ಕಾನೂನಾತ್ಮಕ ಹೋರಾಟ ಮಾಡುವುದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ