CONNECT WITH US  

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಅತಿ ಕಡಿಮೆ

ದೇಶದ ಶೈಕ್ಷಣಿಕ ಸಂಸ್ಥೆಗಳ ಪೈಕಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲೇ ವಿದ್ಯಾರ್ಥಿನಿಯರು ಕಡಿಮೆ ಪ್ರಮಾಣದಲ್ಲಿ ನೋಂದಣಿ ಯಾಗುತ್ತಿದ್ದಾರೆ ಎಂದು ಅಖೀಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಈ ವರದಿ ಬಿಡುಗಡೆ ಮಾಡಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ನೋಂದಣಿ ಶೇ. 25.4 ಆಗಿದೆ ಎಂದಿದ್ದಾರೆ.

ಪಿಎಚ್‌ಡಿಯಲ್ಲಿ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದರೆ, ಇಂಜಿನಿಯರಿಂಗ್‌ ಮತ್ತು ತಂತ್ರಜ್ಞಾನದ ವಿದ್ಯಾರ್ಥಿಗಳು ನಂತರದ ಸ್ಥಾನದಲ್ಲಿದ್ದಾರೆ

ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದರೆ, ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳು ನಂತರದ ಸ್ಥಾನದಲ್ಲಿವೆ.

ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಅನುಕ್ರಮವಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ

46,114 ವಿದೇಶಿ ವಿದ್ಯಾರ್ಥಿಗಳು ಭಾರತೀಯ ಶೈಕ್ಷಣಿಕ ಸಂಸ್ಥೆಗಳಲ್ಲಿ ನೋಂದಣಿಯಾಗಿದ್ದಾರೆ


Trending videos

Back to Top