ನಾರಾಯಣಗುರು ವಿಚಾರಧಾರೆ ತಿಳಿದುಕೊಳ್ಳಿ

ದೇವನಹಳ್ಳಿ: ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ ಧಾರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164 ಜಯಂತಿ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಹೋಗಬೇಕು. ದಾರ್ಶನಿಕರ ಕೊಡುಗೆ ಸಮಾಜಕ್ಕೆ ಅಪಾರವಾಗಿದ್ದು ಅವರ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಎಸ್.ರಮ್ಯಾ ಉಪವಿಭಾಗಾಧಿಕಾರಿ ಮಹೇಶ್ಬಾಬು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾತಂಡ ಗಾಯನ ಪ್ರಸ್ತುತ ಪಡಿಸಿತು.