ಟೆಸ್ಟ್‌ ಸರಣಿ: ಡೇವಿಡ್‌ ವಾರ್ನರ್‌ ಜೋಡಿ ಯಾರು?

Team Udayavani, Feb 21, 2017, 10:36 AM IST

dvid.jpg

ಉಸ್ಮಾನ್‌ ಖ್ವಾಜಾ, ಮ್ಯಾಟ್‌ ರೆನ್‌ಶಾ

ಪುಣೆ: ಭಾರತದ ನೆಲದಲ್ಲಿ ಟೆಸ್ಟ್‌ ಸರಣಿಯ ಕಠಿನ ಸವಾಲು ಎದುರಿಸಲು ಆಸ್ಟ್ರೇಲಿಯ ಸಜ್ಜಾಗುತ್ತಿದೆ. ಗುರುವಾರದಿಂದ ಪುಣೆಯಲ್ಲಿ ಸರಣಿಯ ಮೊದಲ ಟೆಸ್ಟ್‌ ಆರಂಭಗೊಳ್ಳಲಿದ್ದು, ಆಡುವ ಬಳಗವನ್ನು ಅಂತಿಮಗೊಳಿಸುವ ಬಗ್ಗೆ ಆಸೀಸ್‌ ನಾನಾ ಸಾಧ್ಯತೆಗಳ ಬಗ್ಗೆ ಯೋಚಿಸುತ್ತಿದೆ.

ಆಸ್ಟ್ರೇಲಿಯದ ಮುಂದಿರುವುದು ಆರಂಭಿಕ ಜೋಡಿ ಯಾರಾಗಬಹುದೆಂಬ ಪ್ರಶ್ನೆ. ಡೇವಿಡ್‌ ವಾರ್ನರ್‌ ಅವರಿಗೆ ಜತೆಗಾರನಾಗಿ ಉಸ್ಮಾನ್‌ ಖ್ವಾಜಾ ಅವರನ್ನು ಆಡಿಸುವುದೋ ಅಥವಾ ಮ್ಯಾಟ್‌ ರೆನ್‌ಶಾ ಅವರನ್ನೋ ಎಂಬುದು ಇನ್ನೂ ಇತ್ಯರ್ಥವಾಗಿಲ್ಲ ಎಂದಿದ್ದಾರೆ ಕೋಚ್‌ ಡ್ಯಾರನ್‌ ಲೇಹ್ಮನ್‌. ಆದರೆ ಶಾನ್‌ ಮಾರ್ಷ್‌ ಮತ್ತು ನಾಯಕ ಸ್ಟೀವನ್‌ ಸ್ಮಿತ್‌ 3ನೇ ಹಾಗೂ 4ನೇ ಕ್ರಮಾಂಕದಲ್ಲಿ ಆಡುತ್ತಾರೆ ಎಂಬುದಾಗಿ ಲೇಹ್ಮನ್‌ ಹೇಳಿದರು. ಇವರಿಬ್ಬರೂ ಭಾರತ “ಎ’ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಶತಕ ಬಾರಿಸಿದ್ದರು. 

ಭಾರೀ ಭರವಸೆ ಮೂಡಿಸಿರುವ ಯುವ ಬ್ಯಾಟ್ಸ್‌ಮನ್‌ ಪೀಟರ್‌ ಹ್ಯಾಂಡ್ಸ್‌ಕಾಂಬ್‌ 5ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಟೆಸ್ಟ್‌ ತಂಡಕ್ಕೆ ವಾಪಸಾಗಿರುವ ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ 6ನೇ ಕ್ರಮಾಂಕದಲ್ಲಿ ಆಡಬಹುದು.

ಮುಂದಿನದು ಕೀಪರ್‌ ಮ್ಯಾಥ್ಯೂ ವೇಡ್‌ ಸರದಿ. ಬೌಲಿಂಗ್‌ ವಿಭಾಗದಲ್ಲಿ ಮಿಚೆಲ್‌ ಸ್ಟಾರ್ಕ್‌, ಸ್ಟೀವ್‌ ಓ’ಕೀಫ್, ಜೋಶ್‌ ಹ್ಯಾಝಲ್‌ವುಡ್‌ ಮತ್ತು ನಥನ್‌ ಲಿಯೋನ್‌ ದಾಳಿಗಿಳಿಯುವುದು ಬಹುತೇಕ ಖಚಿತ.

ಮ್ಯಾಟ್‌ ರೆನ್‌ಶಾ ಪ್ರತಿಭಾನ್ವಿತ ಆರಂಭಕಾರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅಭ್ಯಾಸ ಪಂದ್ಯದಲ್ಲಿ ಗಳಿಸಿದ್ದು ಕೇವಲ 11 ಮತ್ತು 10 ರನ್‌ ಮಾತ್ರ. ಆದರೆ ಇದು ಏಶ್ಯದಲ್ಲಿ ರೆನ್‌ಶಾ ಆಡಿದ ಮೊದಲ ಪಂದ್ಯ. ಆದರೆ ರೆನ್‌ಶಾ ಪಾಕಿಸ್ಥಾನ ವಿರುದ್ಧ ಆಡಲಾದ ಕಳೆದ ಸಿಡ್ನಿ ಟೆಸ್ಟ್‌ನಲ್ಲಿ ಅಮೋಘ 184 ರನ್‌ ಬಾರಿಸುವ ಮೂಲಕ ತಮ್ಮ ಸಾಮರ್ಥ್ಯದ ಪರಿಚಯವಿತ್ತಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.