ಬಿ.ಎಸ್. ವೈ ಪ್ರಮಾಣ ವಚನ ಸಮಾರಂಭದ ವಿಶೇಷ ಚಿತ್ರಗ್ಯಾಲರಿ

38

ಬಿ. ಎಸ್. ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಶುಕ್ರವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಯಡಿಯೂರಪ್ಪನವರು ನೂತನ ಸರಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದರು. ಬಳಿಕ ಅಲ್ಲಿಂದ ಅವರು ಬೆಂಗಳೂರಿನಲ್ಲಿರುವ ಯುದ್ಧ ಸ್ಮಾರಕಕ್ಕೆ ತೆರಳಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ದೇವಸ್ಥಾನಗಳ ಭೇಟಿ, ಪಕ್ಷದ ಕಛೇರಿಯಲ್ಲಿ ನಾಯಕರೊಂದಿಗೆ ಸಮಾಲೋಚನೆಯ ಬಳಿಕ ಸಾಯಂಕಾಲ ರಾಜಭವನದಲ್ಲಿ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸಮಾರಂಭಕ್ಕೆ ತೆರಳಿದರು. ಬಿ.ಎಸ್.ವೈ. ಅವರು ಸರಕಾರ ರಚನೆಗೆ ಹಕ್ಕು ಮಂಡಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು..

ಹೊಸ ಸೇರ್ಪಡೆ