ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ; ಹಲವೆಡೆ ಪ್ರವಾಹ ಪರಿಸ್ಥಿತಿ
ಮಹಾರಾಷ್ಟ್ರ, ಬಿಹಾರ, ಕರ್ನಾಟಕ, ತಮಿಳುನಾಡು, ಈಶಾನ್ಯ ಭಾಗ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮುಂಬಯಿಯಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜುಲೈ ತಿಂಗಳ ಮೊದಲ 16 ದಿನಗಳ ಕಾಲ ಇಲ್ಲಿ 1,024 ಮಿ.ಮೀ. ಮಳೆಯಾಗಿದ್ದು, ಮಾಸಿಕ ಸರಾಸರಿಗಿಂತ ಶೇ.122ರಷ್ಟು ಹೆಚ್ಚು ಮಳೆಯಾದಂತಾಗಿದೆ. ಅಲ್ಲದೆ, ಬುಧವಾರದಿಂದ ಗುರುವಾರದವರೆಗೆ 24 ಗಂಟೆಗಳಲ್ಲಿ 191.2 ಮಿ.ಮೀ. ಮಳೆ ಸುರಿಯುವ ಮೂಲಕ, 2015ರ ಬಳಿಕ ಒಂದೇ ದಿನದ ಗರಿಷ್ಠ ಮಳೆ ಎಂಬ ದಾಖಲೆ ಸೃಷ್ಟಿಯಾಗಿದೆ. ಗುರುವಾರವೂ ಕೊಂಕಣ ಪ್ರದೇಶ, ರಾಯಗಡ, ರತ್ನಗಿರಿ, ಥಾಣೆ ಸೇರಿದಂತೆ ಬಹುತೇಕ ಕಡೆ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯ ಮುನ್ಸೂಚನೆ ಇದ್ದ ಕಾರಣ ಮುಂಬಯಿಯಲ್ಲಿ ರೆಡ್ ಅಲರ್ಟ್ ಘೋಷಿಸಿ ಬುಧವಾರವೇ ಹವಾಮಾನ ಇಲಾಖೆಯು ಆದೇಶ ಹೊರಡಿಸಿತ್ತು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?