ಮುಂಬಯಿಯಲ್ಲಿ ವರುಣನ ಆರ್ಭಟ ; ರಸ್ತೆಗಳು, ತಗ್ಗುಪ್ರದೇಶಗಳು ಜಲಾವೃತ
ಮುಂಬಯಿ: ಕೋವಿಡ್ 19 ಸೋಂಕಿನ ಹೊಡೆತಕ್ಕೆ ಸಿಲುಕಿ ನಲುಗುತ್ತಿರುವ ಮುಂಬಯಿಗೆ ಶುಕ್ರವಾರ ಮಳೆ ಆಘಾತ ನೀಡಿದೆ. ಗುರುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿದೆ.