ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ರೇವಣ್ಣ ಧರಣಿ ತಂತ್ರಕ್ಕೆ ಅಶ್ವತ್ಥನಾರಾಯಣ ಎದಿರೇಟು

Team Udayavani, Jan 18, 2022, 6:20 PM IST

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕಬೇಕೆನ್ನುವುದೇ ಸರಕಾರದ ಸಂಕಲ್ಪವಾಗಿದೆ. ಈ ವಿಷಯದಲ್ಲಿ ವ್ಯವಸ್ಥೆಯ ಸುಧಾರಣೆಯ ಕಡೆಗೆ ಆದ್ಯತೆ ಕೊಡಬೇಕೇ ವಿನಾ ವೈಯಕ್ತಿಕ ಪ್ರತಿಷ್ಠೆಯಿಂದ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಇದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಧರಣಿಗೆ ಮುಂದಾಗಿದ್ದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತ್ಯುತ್ತರ ಕೊಟ್ಟಿದ್ದಾರೆ.

ತಾವು ಪ್ರತಿನಿಧಿಸುತ್ತಿರುವ ಹೊಳೆನರಸೀಪುರದಲ್ಲಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನೋವಿಜ್ಞಾನ ಮತ್ತು ಫುಡ್ & ನ್ಯೂಟ್ರಿಷನ್ ವಿಷಯಗಳಲ್ಲಿ ಎಂ.ಎಸ್ಸಿ ಪದವಿ ಆರಂಭಿಸಲು ಉನ್ನತ ಶಿಕ್ಷಣ ಸಚಿವರು ಅಡ್ಡಗಾಲು ಹಾಕುತ್ತಿದ್ದಾರೆಂದು ಆರೋಪಿಸಿ ರೇವಣ್ಣ ಅವರು ಮುಖ್ಯಮಂತ್ರಿಗಳ ಗೃಹಕಚೇರಿ ಎದುರು ಧರಣಿ ನಡೆಸಲು ಮಂಗಳವಾರ ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಸಚಿವರು ಮೇಲ್ಕಂಡಂತೆ ಮಾರುತ್ತರ ಕೊಟ್ಟರು.

ರಾಜ್ಯದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಇನ್ನೂ 8-10 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಒಂದು ಕಾಲೇಜೂ ಇಲ್ಲ. ಈಗಿರುವ ಕಾಲೇಜುಗಳಲ್ಲೇ ಮೂಲಸೌಲಭ್ಯ, ಪ್ರಯೋಗಾಲಯ ಮತ್ತು ಸಿಬ್ಬಂದಿ ಕೊರತೆ ತೀವ್ರವಾಗಿದೆ. ಮೂಲಸೌಲಭ್ಯ ಸುಧಾರಣೆಗೆ 3,000 ಕೋಟಿ ರೂ. ಅಗತ್ಯವಿದೆ. ಜತೆಗೆ, ಈಗಿರುವ ಸ್ನಾತಕೋತ್ತರ ಕೇಂದ್ರಗಳನ್ನೇ ಸುಧಾರಿಸಬೇಕಾದ ತುರ್ತಿದೆ. ಹೀಗಾಗಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎರಡು ವರ್ಷಗಳಿಂದ ಸ್ನಾತಕೋತ್ತರ ಕೋರ್ಸುಗಳನ್ನು ಆರಂಭಿಸಲು ಅನುಮತಿ ನೀಡುತ್ತಿಲ್ಲ. ಸ್ವತಃ ಸಚಿವರಾಗಿ ಅನುಭವವಿರುವ ರೇವಣ್ಣನವರಿಗೆ ಇದು ಗೊತ್ತಿಲ್ಲವೇ?’ ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಹೊಳೆನರಸೀಪುರ ಕ್ಷೇತ್ರವೊಂದರಲ್ಲೇ 8 ಸರಕಾರಿ ಪ್ರಥಮ ದರ್ಜೆ, 6 ಸ್ನಾತಕೋತ್ತರ, 3 ಪಾಲಿಟೆಕ್ನಿಕ್, 1 ಸರಕಾರಿ ಎಂಜಿನಿಯರಿಂಗ್ ಮತ್ತು ಐದು‌ ಐಟಿಐ ಕಾಲೇಜುಗಳಿವೆ. ಕಳೆದ ಐದು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಿಗೆ 65.40 ಕೋಟಿ ರೂ. ಮತ್ತು ಸಾಧನ-ಸಲಕರಣೆಗಳ ಖರೀದಿಗೆ 93.26 ಲಕ್ಷ ರೂ.ಗಿಂತ ಹಣ ಕೊಡಲಾಗಿದೆ. ಇಲ್ಲಿನ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ 84 ಕೋಟಿ ರೂ. ಹಾಗೂ ಸಾಧನ-ಸಲಕರಣೆಗಳಿಗೆಂದು 1.80 ಕೋಟಿ ರೂ. ಕೊಡಲಾಗಿದೆ. ಅಂದಮೇಲೆ, ತಾರತಮ್ಯದ ಪ್ರಶ್ನೆ ಎಲ್ಲಿ ಬಂತು?’ ಎಂದು ಅವರು ಅಂಕಿಅಂಶಗಳ ಸಮೇತ ಉತ್ತರಿಸಿದರು.

ಸ್ನಾತಕೋತ್ತರ ಕೋರ್ಸುಗಳು ವಿಶ್ವವಿದ್ಯಾಲಯದ ಮಟ್ಟದಲ್ಲೇ ಇರುವುದು ಶೈಕ್ಷಣಿಕವಾಗಿ ಒಳ್ಳೆಯದು. ಪದವಿ ಮತ್ತು ಸ್ನಾತಕೋತ್ತರ ಪದವಿ ಮಟ್ಟಗಳಲ್ಲಿ ಒಬ್ಬರೇ ಬೋಧಕರಿದ್ದರೆ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತದೆ ಎನ್ನುವುದು ಅಧ್ಯಯನಗಳಿಂದ ದೃಢಪಟ್ಟಿದೆ ಎಂದು ಸಚಿವರು ಪ್ರತಿಪಾದಿಸಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 9 ಸಾವಿರ ತರಗತಿಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ಕ್ಲಾಸ್ ರೂಮುಗಳನ್ನಾಗಿ ಮಾಡಲಾಗಿದೆ. ಉಳಿದ 6,500 ಕೊಠಡಿಗಳನ್ನೂ ಸ್ಮಾರ್ಟ್ ಕ್ಲಾಸ್ ರೂಮ್ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ’ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.