ಗುಂಪುಗಾರಿಕೆ ನಡುವೆಯೂ ಕಾಂಗ್ರೆಸ್‌ದೇ ಪ್ರಾಬಲ್ಯ!


Team Udayavani, Apr 29, 2022, 6:10 AM IST

ಗುಂಪುಗಾರಿಕೆ ನಡುವೆಯೂ ಕಾಂಗ್ರೆಸ್‌ದೇ ಪ್ರಾಬಲ್ಯ!

ಕೋಲಾರ: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ರಂಗೇರು ತ್ತಿದೆ. ಹಾಲಿ, ಮಾಜಿ ಶಾಸಕರು ಮತ್ತು ಶಾಸಕ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹೊಸಬರು ಜನರ ನಡುವೆ ಕಾಣಿಸಿಕೊಂಡು ಸಮಾಜ ಸೇವಾ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಕಾಂಗ್ರೆಸ್‌ನಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಬಣಗಳ ನಡುವೆ ವೈಮನಸ್ಯ ಮುಂದು ವರಿದಿದೆ. ಕೋಲಾರ ಜೆಡಿಎಸ್‌ ಶಾಸಕ ಕೆ.ಶ್ರೀನಿ ವಾಸಗೌಡ, ಕಾಂಗ್ರೆಸ್‌ನ ರಮೇಶ್‌ ಕುಮಾರ್‌ ಬಣದಲ್ಲಿ ಗುರುತಿಸಿಕೊಂಡಿರುವುದ ರಿಂದ ಜಾತ್ಯತೀತ ಜನತಾ ದಳಕ್ಕೆ ನಾಯ ಕತ್ವದ ಕೊರತೆ ಎದುರಾಗಿದೆ. ಬಿಜೆಪಿ ಸಂಸದರ ನೇತೃತ್ವದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ.

ಕೋಲಾರ ಕ್ಷೇತ್ರ: ಕಾಂಗ್ರೆಸ್‌ ಟಿಕೆಟ್‌ ಮೇಲೆ ಹಾಲಿ ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡ ಸೇರಿ ಡಜನ್‌ಗೂ ಅಧಿಕ ಮಂದಿ ಕಣ್ಣಿಟ್ಟು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ನಗರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಮುಬಾರಕ್‌, ಅರಿಕೆರೆ ಮಂಜುನಾಥ ಗೌಡ, ಕೊತ್ತೂರು ಮಂಜುನಾಥ್‌, ಲಕ್ಷ್ಮಣ ಗೌಡ, ಕೆಜಿಎಫ್ ಬಾಬು, ಚಂದನ ಗೌಡ, ರಾಮಚಂದ್ರಗೌಡ ಹೀಗೆ ಪಟ್ಟಿ ಬೆಳೆಯುತ್ತದೆ.

ಜೆಡಿಎಸ್‌ನಲ್ಲಿ ಸಿಎಂಆರ್‌ ಶ್ರೀನಾಥ್‌, ಕುರ್ಕಿ ರಾಜೇಶ್ವರಿ ಟಿಕೆಟ್‌ ಕೇಳಿದ್ದಾರೆ. ಹೈಕಮಾಂಡ್‌ ಯಾರಿಗೂ ಹಸುರು ನಿಶಾನೆ ತೋರಿಲ್ಲ. ಅಗೋಚರ, ಅತೃಪ್ತ ಹಾಗೂ ತೂಕದ ಅಭ್ಯರ್ಥಿಗಳಿಗೆ ಪಕ್ಷವು ಕಾಯುತ್ತಿರುವಂತಿದೆ. ಬಿಜೆಪಿ ಗೆಲ್ಲಲೇ ಬೇಕೆಂಬ ಹಠ ತೊಟ್ಟು ಹಿಂದುತ್ವವನ್ನು ಕೆರಳಿಸುತ್ತಿದೆ. ಇದರ ಲಾಭ ಪಡೆಯಲು ಮಾಜಿ ಸಚಿವ ವರ್ತೂರು ಪ್ರಕಾಶ್‌ ಬಿಜೆಪಿ ಹೊಸ್ತಿಲಲ್ಲಿದ್ದಾರೆ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕೋಚಿಮುಲ್‌ ನಿರ್ದೇಶಕ ವಡಗೂರು ಹರೀಶ್‌ ಬಿಜೆಪಿ ಟಿಕೆಟ್‌ ನಿರೀಕ್ಷಿಸುತ್ತಿದ್ದಾರೆ.

ಬಂಗಾರಪೇಟೆ: ಕೋಲಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಕೆ.ಚಂದ್ರಾರೆಡ್ಡಿ ಬಿಜೆಪಿ ಸೇರ್ಪಡೆಯಾದ ಮೇಲೆ ಬಿಜೆಪಿಗೆ ಆನೆಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಚಟುವಟಿಕೆ ಚುರುಕುಗೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಲು ಬಿ.ಪಿ. ಮಹೇಶ್‌ ಸನ್ನದ್ಧರಾಗುತ್ತಿದ್ದಾರೆ. ಜೆಡಿಎಸ್‌ ಅಭ್ಯರ್ಥಿಯಾಗಿ ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಮಲ್ಲೇಶ್‌ ಬಿಂಬಿತರಾಗುತ್ತಿದ್ದಾರೆ. ಹಾಲಿ ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿಯ ಮೂರನೇ ಗೆಲುವಿಗೆ ಬಿಜೆಪಿ ಅಡ್ಡಿ, ಆತಂಕ ಸೃಷ್ಠಿಸುತ್ತಿದೆ.

ಮಾಲೂರು: ಹಾಲಿ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡರ ಮುಂದೆ ಕ್ಷೇತ್ರ ಉಳಿಸಿಕೊಳ್ಳುವ ಸವಾಲಿದೆ. ಜೆಡಿಎಸ್‌ ಮಾಜಿ ಶಾಸಕ ಮಂಜುನಾಥಗೌಡ ಬಿಜೆಪಿ ಕದ ತಟ್ಟುತ್ತಿದ್ದಾರೆ. ಜೆಡಿಎಸ್‌ ಈಗಾಗಲೇ ರಾಮೇಗೌಡರನ್ನು ಅಭ್ಯರ್ಥಿಯನ್ನಾಗಿ ಘೋಷಿ ಸಿದೆ. ಬಿಜೆಪಿಯನ್ನು ಇಲ್ಲಿ ಗೆಲ್ಲಿಸಲೇಬೇಕೆಂದು ಸಂಸದ ಮುನಿಸ್ವಾಮಿ ಪಣ ತೊಟ್ಟಂತೆ ಕಾಣಿಸುತ್ತಿದೆ.

ಕೆಜಿಎಫ್: ಕಾಂಗ್ರೆಸ್‌ ಶಾಸಕಿ ರೂಪಕಲಾ ಕ್ಷೇತ್ರದಲ್ಲಿ ಭದ್ರವಾಗಿ ಬೇರೂರಿ ಸ್ವಂತ ಗುಂಪು ಕಟ್ಟಿಕೊಂಡಿದ್ದಾರೆ. ಬಿಜೆಪಿಯಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮಾಜಿ ಶಾಸಕ ವೈ.ಸಂಪಂಗಿ ಮತ್ತು ಸಂಸದ ಮುನಿಸ್ವಾಮಿ ಗುಂಪು ಬಹಿರಂಗ ಪೈಪೋಟಿ ಗಿಳಿದಿವೆ. ಸಂಸದ ಮುನಿಸ್ವಾಮಿ ತಮ್ಮ  ಪತ್ನಿಯನ್ನು ಕೆಜಿಎಫ್ನಿಂದ ಕಣಕ್ಕಿಳಿಸುವ ಇರಾದೆ ಹೊಂದಿದ್ದಾರೆ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ಶ್ರೀನಿವಾಸ್‌ ಟಿಕೆಟ್‌ ಬಯಸಿದ್ದಾರೆ. ಭಕ್ತ ವತ್ಸಲಂ ನಿಧನದ ಅನಂತರ ಜೆಡಿಎಸ್‌ ಬಲ ಹೀನವಾಗಿದೆ. ಕೋಲಾರ ಕೇಶವ ಜೆಡಿಎಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ. ಮಾಜಿ ಶಾಸಕ ಎಸ್‌.ರಾಜೇಂದ್ರನ್‌ ಮತ್ತೆ ಫೀಲ್ಡಿಗಿಳಿದಿದ್ದಾರೆ.

ಮುಳಬಾಗಿಲು: ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಶಾಸಕ ಎಚ್‌. ನಾಗೇಶ್‌ ಬಿಜೆಪಿಯಲ್ಲಿ ಸುಭದ್ರವಾಗಿದ್ದಾರೆ. 2ನೇ ಬಾರಿ ಬಿಜೆಪಿಯಿಂದಲೇ ಸ್ಪರ್ಧಿಸುತ್ತಾರೆಂಬ ಸುಳಿವು ಸಿಕ್ಕಿಲ್ಲ. ಕಾಂಗ್ರೆಸ್‌ ಈ ಬಾರಿ ತನ್ನದೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳು ವತ್ತ ಚಿತ್ತ ಹರಿಸಿದೆ. ಕೆ.ಎಚ್‌.ಮುನಿಯಪ್ಪ ಇಲ್ಲಿನ ಅಭ್ಯರ್ಥಿ ಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ ಹಿಂದಿನ ಪರಾಭವದ ಅನುಕಂಪ ಹೊಂದಿ ಕ್ಷೇತ್ರಾದ್ಯಂತ ಒಲವು ಸಂಪಾದಿಸುತ್ತಿದ್ದಾರೆ. ಬಿಜೆಪಿ ಇಲ್ಲಿಯೂ ಹಿಂದುತ್ವದ ಚಟುವಟಿಕೆ ತೀವ್ರಗೊಳಿಸಿದೆ.

ಶ್ರೀನಿವಾಸಪುರದಲ್ಲಿ ಜಿದ್ದಾಜಿದ್ದಿ ಪೈಪೋಟಿ :

ಶ್ರೀನಿವಾಸಪುರ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಮತ್ತು ಜೆಡಿಎಸ್‌ ಅಧ್ಯಕ್ಷ ಜಿ.ಕೆ.ವೆಂಕಟ ಶಿವಾರೆಡ್ಡಿಯದ್ದೇ ಪ್ರಾಬಲ್ಯ. ಇಲ್ಲಿ ಪಕ್ಷಗಳ ಬಲಾಬಲಕ್ಕಿಂತಲೂ ಇವರಿಬ್ಬರ ವರ್ಚಸ್ಸು ದೊಡ್ಡದು. ರಮೇಶ್‌ಕುಮಾರ್‌ಗೆ ಪಾಠ ಕಲಿಸುತ್ತೇನೆಂದು ಈಗಾಗಲೇ ಮುನಿಯಪ್ಪ ಘೋಷಿಸಿದ್ದಾರೆ. ಇದರ ಲಾಭ ಸಹಜವಾಗಿ ಜೆಡಿಎಸ್‌ನ ವೆಂಕಟಶಿವಾರೆಡ್ಡಿಗೆ ಆಗುತ್ತದೆ. ಆದರೂ ಜಿದ್ದಾಜಿದ್ದಿ ಪೈಪೋಟಿ ನಿರೀಕ್ಷಿಸಬಹುದು. ಇವರ ನಡುವೆ ಗುಂಜೂರು ಶ್ರೀನಿವಾಸ್‌ ರೆಡ್ಡಿ ಎಂಬವರು ಕ್ಷೇತ್ರಾದ್ಯಂತ ಸಂಚರಿಸುತ್ತಿದ್ದಾರೆ. ಯಾವ ಪಕ್ಷದಿಂದ ಎಂದು ಹೇಳಿಕೊಳ್ಳುತ್ತಿಲ್ಲ. ಬಿಜೆಪಿ ಇಲ್ಲಿ ನೆಪ ಮಾತ್ರ. ಆದರೂ ಬಿಜೆಪಿ ಮೇಲೆ ಎಸ್‌ಎಲ್‌ಎನ್‌ ಮಂಜು ಕಣ್ಣಿಟ್ಟಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಡಾ| ವೇಣುಗೋಪಾಲ್‌ ಸರದಿಯಲ್ಲಿದ್ದಾರೆ.

 

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.