ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸರಕಾರದ ವಿರುದ್ಧವೇ ಸಿಂಹ ಘರ್ಜನೆ !
ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ?
Team Udayavani, Jan 19, 2022, 12:51 PM IST
ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಪ್ರಚಾರ ರ್‍ಯಾಲಿ ನಡೆಯುತ್ತದೆ ತಾನೇ? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು.
ಇದನ್ನೂ ಓದಿ :ಗುಣಮಟ್ಟದ ಆಧಾರದಲ್ಲಿ ಸ್ತಬ್ಧ ಚಿತ್ರ ಆಯ್ಕೆ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು
ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ ಜೀವನ, ಜೀವ ಎರಡು ಮುಖ್ಯ.ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಾ ವರ್ಗದ ಜನರಿಗೂ ಕರ್ಫ್ಯೂ, ಲಾಕ್ ಡೌನ್ ನಿಂದ ತೊಂದರೆ ಆಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು
ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್ ಮಿತ್ರ’ರು
ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್
ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್