ಆಪ್‌ನಿಂದ ಆಹ್ವಾನ: ಯಾವ ಪಕ್ಷ ಸೇರಲಿದ್ದಾರೆ ಪರ್ರಿಕರ್ ಪುತ್ರ ?
Team Udayavani, Jan 20, 2022, 5:52 PM IST
ಪಣಜಿ : ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಮಾಜಿ ಸಿಎಂ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಯಾವ ಪಕ್ಷ ಸೇರಲಿದ್ದಾರೆ ?ಇಂಥದೊಂದು ಕುತೂಹಲ ಈಗ ಗೋವಾ ಚುನಾವಣಾ ಅಖಾಡದಲ್ಲಿ ಸೃಷ್ಟಿಯಾಗಿದೆ.
ಬಿಜೆಪಿಯಿಂದ ಚುನಾವಣಾ ಕಣಕ್ಕೆ ಇಳಿಯಲು ಬಯಸಿದ್ದ ಉತ್ಪಲ್ ಅವರಿಗೆ ಈ ಬಾರಿ ಪಕ್ಷ ಟಿಕೆಟ್ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಅವರು ಯಾವ ಪಕ್ಷದಿಂದ ಸೆಣೆಸಬಹುದು ಎಂಬ ಪ್ರಶ್ನೆ ಉದ್ಭವವಾಗಿದೆ. ಆಮ್ ಆದ್ಮಿ, ಕಾಂಗ್ರೆಸ್ ನಿಂದಲೂ ಆಹ್ವಾನ ಬಂದಿದೆ. ಆದರೆ ಉತ್ಪಲ್ ಯಾವುದೇ ಪ್ರತಿಕ್ರಿಯೆ ಇದುವರೆಗೆ ನೀಡಿಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ , ಬಿಜೆಪಿ ಯೂಸ್ ಆಂಡ್ ಥ್ರೋ ನೀತಿಯಿಂದ ಗೋವನ್ನರು ಬೇಸರಗೊಂಡಿದ್ದಾರೆ. ಪರಿಕ್ಕರ್ ಕುಟುಂಬದ ಜತೆಗೂ ಬಿಜೆಪಿ ಈ ರೀತಿ ವರ್ತಿಸುತ್ತದೆ ಎಂದು ನಾನು ಭಾವಿಸಿರಲಿಲ್ಲ. ಪರ್ರಿಕರ್ ಬಗ್ಗೆ ನನಗೆ ಗೌರವ ಇದೆ. ಉತ್ಪಲ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ ಉತ್ಪಲ್ ಪರ್ರಿಕರ್ ಮನವೊಲಿಕೆಗೆ ಪ್ರಯತ್ನಗಳು ನಡೆಯುತ್ತಿದೆ. ಅವರಿಗೆ ಬೇರೆ ಕ್ಷೇತ್ರದಿಂದ ಟಿಕೆಟ್ ನೀಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ