ಮೋದಿ, ಯೋಗಿ ಅಬ್ಬರದ ನಡುವೆ ಅಖಿಲೇಶ್ ಹವಾ
ಉತ್ತರ ಪ್ರದೇಶದಲ್ಲಿನ ಸ್ಥಿತಿಗತಿಯತ್ತ ಬೆಳಕು ಚೆಲ್ಲಿ ಜನರನ್ನು ಪಕ್ಷದತ್ತ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.
Team Udayavani
-ಹರೀಶ್ ಕೆ.
ಕಳೆದ ಮೂರು ದಶಕಗಳಿಗಿಂತಲೂ ಅಧಿಕ ಸಮಯದಿಂದ ರಾಜ್ಯದಲ್ಲಿ ಅಧಿಕಾರದಿಂದ ದೂರವೇ ಉಳಿದಿರುವ ಕಾಂಗ್ರೆಸ್‌ನ ಸ್ಥಿತಿ ಈ ಬಾರಿಯೂ ಅಷ್ಟೇನೂ ಉತ್ತೇಜನಕಾರಿಯಾಗಿಲ್ಲ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಮುಂದಿಟ್ಟುಕೊಂಡು ಈ ಬಾರಿಯ ಚುನಾವಣೆ ಯನ್ನು ಎದುರಿಸಲು ಕಾಂಗ್ರೆಸ್ ಸನ್ನದ್ಧವಾಗಿದೆ. ಪ್ರಿಯಾಂಕಾ ವಾದ್ರಾ ಅವರಂತೂ ಆರಂಭದಿಂದಲೂ ಮಹಿಳಾ ಮಂತ್ರವನ್ನು ಜಪಿಸುತ್ತಿದ್ದು ಈ ಚುನಾವಣೆಯಲ್ಲಿ ಶೇ.40ರಷ್ಟು ಟಿಕೆಟ್‌ಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡುವುದಾಗಿ ಘೋಷಿಸಿ, ಮಹಿಳಾ ಪರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದಾರೆ. ರಾಜ್ಯ ಮಟ್ಟದಲ್ಲಿ ಪಕ್ಷದಲ್ಲಿ ಪ್ರಬಲ ಸಂಘಟನೆಯಾಗಲೀ ನಾಯಕರಾಗಲೀ ಇಲ್ಲದಿರುವುದು ಕಾಂಗ್ರೆಸ್ ಪಾಲಿಗೆ...