
Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ
Team Udayavani, Jun 4, 2023, 7:22 AM IST

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ. ಸ್ಥಾನ ಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.
ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳಲ್ಲಿ ಪ್ರೀತಿ.
ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ.
ಕರ್ಕ: ಸಣ್ಣ ಹಾಗೂ ದೀರ್ಘ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಸಹಾಯ ದೊರಕಿದರೂ ನಿಮ್ಮ ಶ್ರಮಕ್ಕೆ ಆಲೋಚನೆಗೆ ಆದ್ಯತೆ ನೀಡಿ.
ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.
ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ವಿದ್ಯಾರ್ಥಿಗಳಿಗೆೆ ಸಾಹಸ ಪರಿಶ್ರಮದಿಂದ ಪ್ರಗತಿ.
ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದೇ ದೂರದ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ.
ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಅಧಿಕೃತ ಸಹಾಯ.
ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಆರೋಗ್ಯ ಸ್ಥಿರ.
ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರ ತೋರದಿರಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ.
ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಸಾಂಸಾರಿಕ ಸುಖ ತೃಪ್ತಿದಾಯಕ. ದೇವತಾ ಸ್ಥಳ ಸಂದರ್ಶನ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Theft: ಶೂ ಬಾಕ್ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ