ಇಂದಿನಿಂದ ಚುನಾವಣ ಮಾಸ: ಅಧಿಸೂಚನೆ ಪ್ರಕಟ, ನಾಮಪತ್ರ ಸಲ್ಲಿಕೆಯೂ ಪ್ರಾರಂಭ


Team Udayavani, Apr 13, 2023, 8:15 AM IST

ಇಂದಿನಿಂದ ಚುನಾವಣ ಮಾಸ: ಅಧಿಸೂಚನೆ ಪ್ರಕಟ, ನಾಮಪತ್ರ ಸಲ್ಲಿಕೆಯೂ ಪ್ರಾರಂಭ

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆ ಚುನಾವಣೆಗೆ ಗುರುವಾರ (ಎ. 13) ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಭರಾಟೆಗೆ ಕರುನಾಡ ಕಣ ಸಜ್ಜಾಗಿದೆ.

ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ರೀತಿ ಸರಿಯಾಗಿ 30 ದಿನ ಗಳ ಕಾಲ ಚುನಾವಣ ಪ್ರಕ್ರಿಯೆಗಳು ನಡೆಯುವುದರಿಂದ ಇದೊಂದು “ಚುನಾವಣ ಮಾಸ’ ಆಗಿರಲಿದೆ. ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಅಪರಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಎ. 14ರಂದು ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತಿ ಮತ್ತು 16ರಂದು ರವಿವಾರ ರಜಾ ದಿನವಾಗಿರುವುದರಿಂದ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಸಲು ಕೇವಲ 6 ದಿನ ಮಾತ್ರ ಸಮಯ ಸಿಗಲಿದೆ.

ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಗುರುವಾರ ಅಧಿಸೂಚನೆ ಪ್ರಕಟಿಸಲಿದ್ದಾರೆ. ಆ ಮೂಲಕ ಚುನಾವಣ ಪ್ರಕ್ರಿಯೆಗಳಿಗೆ ಅಧಿಕೃತ ಚಾಲನೆ ಸಿಗ ಲಿದೆ. ಇದೇ ದಿನ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ರಾಜಕೀಯ ಚಟುವಟಿಕೆಗಳು ಹೆಚ್ಚಾಗುವು ದರ ಜತೆಗೆ ಚುನಾವಣ ಆಯೋಗ ನೀತಿ ಸಂಹಿತೆ ಜಾರಿಯನ್ನು ಇನ್ನಷ್ಟು ಬಿಗಿಗೊಳಿಸಲಿದೆ. ಕೇಂದ್ರ ಚುನಾವಣ ಆಯೋಗ ಮಾ. 29ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಅಧಿಸೂಚನೆ ಹೊರಬಿದ್ದ ಬಳಿಕ ನೀತಿ ಸಂಹಿತೆ ಜಾರಿಗೆ ಒಂದು ಚೌಕಟ್ಟು ಸಿಗಲಿದೆ.

ಕರಾವಳಿ: ಬಿಜೆಪಿ ಪ್ರಕಟ; ಕಾಂಗ್ರೆಸ್‌ ಬಾಕಿ
ಮಣಿಪಾಲ: ವಿಧಾನಸಭೆ ಚುನಾವಣೆಯ ಮೊದಲ ಹಂತವಾಗಿ ನಾಮಪತ್ರ ಸಲ್ಲಿಕೆ ಗುರುವಾರ ಆರಂಭ ಗೊಳ್ಳಲಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್‌ ಸಹಿತ ಎಲ್ಲ ಪಕ್ಷಗಳೂ ಸಿದ್ಧತೆ ನಡೆಸಿವೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು 13 ಕ್ಷೇತ್ರಗಳಲ್ಲಿ ಒಂಬತ್ತು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ ಯಾಗಿವೆ. ಬಿಜೆಪಿ ಯಿಂದ ಬೈಂದೂರಿನ ಒಂದು ಕ್ಷೇತ್ರದ ಅಭ್ಯರ್ಥಿಯ ಹೆಸರು ಬುಧವಾರ ತಡರಾತ್ರಿ ಪ್ರಕಟ ವಾಗಿದ್ದು, ಎಲ್ಲ ಕ್ಷೇತ್ರ ಗಳಿಗೂ ಹೆಸರು ಘೋಷಣೆಯಾದಂತಾಗಿದೆ.

ಕಾಂಗ್ರೆಸ್‌ ಮೊದಲ ಪಟ್ಟಿ ಯನ್ನು ಮಾ. 25ರಂದೇ ಬಿಡುಗಡೆ ಮಾಡಿ ಎಲ್ಲರಿಗಿಂತಲೂ ಮೊದಲೇ ಪ್ರಚಾರ ಆರಂಭಿಸಿತ್ತು. ಅನಂತರ ಎರಡನೇ ಪಟ್ಟಿ ಎ. 6ರಂದು ಬಿಡುಗಡೆ ಮಾಡಿದರೂ ಕರಾವಳಿಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ದ.ಕ. ಜಿಲ್ಲೆಯ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಪುತ್ತೂರು ಕ್ಷೇತ್ರಗಳಿಗೆ ಇನ್ನೂ ಟಿಕೆಟ್‌ ಘೋಷಿಸಿಲ್ಲ. 3ನೇ ಪಟ್ಟಿ ಗುರುವಾರ ಪ್ರಕಟವಾಗುವ ಸಂಭವವಿದೆ.

ಕರಾವಳಿಯಲ್ಲಿ ಎಲ್ಲರಿಗಿಂತ ಮೊದಲು ಪ್ರಚಾರಕ್ಕೆ ಚಾಲನೆ ನೀಡಿದ್ದ ಕಾಂಗ್ರೆಸ್‌ ಈಗ ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆಯಾಗದೆ ಹಿಂದೆ ಬಿದ್ದಿದೆ. ಇದರ ನಡುವೆ ಬಿಜೆಪಿ ಟಿಕೆಟ್‌ ಘೋಷಣೆಯಾದ ಮರುದಿನವೇ 12 ಕ್ಷೇತ್ರಗಳಲ್ಲೂ ಪ್ರಚಾರದ ಹವಾ ಸೃಷ್ಟಿಸಿದೆ.

ಟಿಕೆಟ್‌ ವಿಳಂಬವಾದಷ್ಟು ಆಯಾ ಪಕ್ಷಗಳ ಪ್ರಚಾರಕ್ಕೆ ಕಡಿಮೆ ಅವಧಿ ದೊರಕಿ ಪ್ರಚಾರದಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆ ಅಧಿಕವಾಗಿದೆ.

ಈ ನಡುವೆ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿತ ಕೆಲವರು ಅಸಮಾ ಧಾನಗೊಂಡಿದ್ದು, ಪಕ್ಷೇತರರಾಗಿ ಕಣಕ್ಕೆ ಇಳಿಯುವ ಸೂಚನೆ ನೀಡಿದ್ದಾರೆ. ಆದರೆ ಇದ್ಯಾವುದೂ ಈಗ ಅಂತಿಮವಾಗಿಲ್ಲ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಎ. 20ರ ವೇಳೆಗೆ ಒಂದು ಹಂತದ ಕಣ ಚಿತ್ರಣ ಲಭ್ಯವಾಗಲಿದೆ. ಎ. 24 ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನವಾಗಿದ್ದು, ಅಂದು ಕಣದ ಸ್ಪಷ್ಟ ಚಿತ್ರಣ ರೂಪುಗೊಳ್ಳಲಿದೆ.

ಅಭ್ಯರ್ಥಿ ಸುಳಿವಿಲ್ಲ !
ನಾಮಪತ್ರ ಸಲ್ಲಿಕೆ ಇಂದು ಆರಂಭವಾಗುತ್ತಿದ್ದರೂ ಇನ್ನೂ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆಯಾಗದಿರುವುದು ಆ ಪಕ್ಷದ ಕಾರ್ಯಕರ್ತರಲ್ಲಿ ತಳಮಳ ಸೃಷ್ಟಿಸಿದೆ.
ಕಾರ್ಕಳ ಕ್ಷೇತ್ರದಿಂದ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಪೂಜಾರಿ ತನಗೆ ಟಿಕೆಟ್‌ ಖಚಿತ ಎಂದು ಹೇಳುತ್ತಿದ್ದಾರೆ. ಇವರಿಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿಯವರ ಅಭಯವೂ ಇದೆ. ಗುತ್ತಿಗೆದಾರ, ಉದ್ಯಮಿ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರೂ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದಾರೆ.

ಮಂಗಳೂರು ದಕ್ಷಿಣದಿಂದ ಜೆ. ಆರ್‌.ಲೋಬೊ, ಐವನ್‌ ಡಿಸೋಜಾ ಮತ್ತು ಬಿಲ್ಲವ ಮುಖಂಡ ಪದ್ಮರಾಜ್‌ ಆರ್‌. ಅವರ ನಡುವೆ ಟಿಕೆಟ್‌ಗಾಗಿ ನಿಕಟ ಸ್ಪರ್ಧೆ ಇದೆ. ಮಂಗಳೂರು ಉತ್ತರದಲ್ಲಿ ಇನಾಯತ್‌ ಅಲಿ ಮತ್ತು ಮೊದಿನ್‌ ಬಾವಾ ನಡುವೆ ಸ್ಪರ್ಧೆ ಇದ್ದರೆ, ಪುತ್ತೂರಿನಲ್ಲಿ ಅಶೋಕ್‌ ಕುಮಾರ್‌ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಟಿಕೆಟ್‌ಗಾಗಿ ಭಾರೀ ಪ್ರಯತ್ನ ನಡೆಸುತ್ತಿದ್ದಾರೆ.

ಬಿಜೆಪಿ ಈಗಾಗಲೇ ದ.ಕ.ದಲ್ಲಿ ಇಬ್ಬರು ಮಹಿಳೆಯರಿಗೆ ಟಿಕೆಟ್‌ ನೀಡಿರುವುದರಿಂದ ಕಾಂಗ್ರೆಸ್‌ನಿಂದ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್‌ ತಪ್ಪಿದರೆ ಮಂಗಳೂರು ದಕ್ಷಿಣದಲ್ಲಿ ಮಾಜಿ ಮೇಯರ್‌ ಕವಿತಾ ಸನಿಲ್‌ ಅವರ ಹೆಸರು ಮುನ್ನೆಲೆಗೆ ಬರುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.