
ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ
Team Udayavani, Mar 30, 2023, 5:24 AM IST

ಹಾವೇರಿ: ಕಾಂಗ್ರೆಸ್ ಪಕ್ಷ ಹಾವೇರಿ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಅಂತಿಮಗೊಳಿಸಿರುವ ಹಿನ್ನೆಲೆಯಲ್ಲಿ ಇನ್ನುಳಿದ ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ.
ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಬುಧವಾರ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಆಕಾಂಕ್ಷಿಗಳು ಸಭೆ ಸೇರಿ ಒಮ್ಮತದ ಅಭ್ಯರ್ಥಿಯಾಗಿ ಎಂ.ಎಂ.ಹಿರೇಮಠ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸಲು ನಿರ್ಣಯಿಸಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವನ್ನು ಗುತ್ತಿಗೆ ಪಡೆದವರಂತೆ ಕೆಲವರು ವರ್ತಿಸುತ್ತಿದ್ದಾರೆ. ನಮಗೆ ಸ್ಥಳೀಯ ಅಭ್ಯರ್ಥಿಯಾದ ಎಂ.ಎಂ. ಹಿರೇಮಠ ಅವರು ಬೇಕು. ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ಪಕ್ಷೇತರರಾಗಿ ಸ್ಪ ರ್ಧಿಸಬೇಕು. ನಾವೇ ಚುನಾವಣೆ ಖರ್ಚು ಹಾಕಿ ಗೆಲ್ಲಿಸುತ್ತೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಸ್ಥಳೀಯರಿಗೆ ಟಿಕೆಟ್ ನೀಡಿ
ಇದೇ ವೇಳೆ ಮಾತನಾಡಿದ ಎಂ.ಎಂ. ಹಿರೇಮಠ, ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂಬುದು ಎಲ್ಲರ ಒತ್ತಾಯವಾಗಿತ್ತು. ಈ ಕಾರಣಕ್ಕೆ ನಮ್ಮ ಕಾರ್ಯಕರ್ತರ ಅಭಿಪ್ರಾಯ ಪಡೆಯಲೆಂದು ಸಭೆ ಕರೆಯಲಾಗಿತ್ತು. ಚುನಾವಣೆಯಲ್ಲಿ ಸ್ಪ ರ್ಧಿಸುವಂತೆ ಎಲ್ಲರೂ ಒತ್ತಾಯ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?