ಕಾಪು ವಿಧಾನಸಭಾ ಕ್ಷೇತ್ರ: ಬಿಜೆಪಿಗೆ ಆಯ್ಕೆ ಕಗ್ಗಂಟು, ಕೈಗೆ ಸೊರಕೆ ಒಬ್ಬಂಟಿ


Team Udayavani, Mar 16, 2023, 6:05 AM IST

ಕಾಪು ವಿಧಾನಸಭಾ ಕ್ಷೇತ್ರ: ಬಿಜೆಪಿಗೆ ಆಯ್ಕೆ ಕಗ್ಗಂಟು, ಕೈಗೆ ಸೊರಕೆ ಒಬ್ಬಂಟಿ

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯಬಹುದಾದ ಉಡುಪಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಪು ಕೂಡ ಒಂದಾಗಿದೆ. ಬೈಂದೂರಿನಲ್ಲೂ ಇದೇ ರೀತಿಯ ಬಲಾಬಲ ಕಾಣಿಸುತ್ತಿದೆ.

ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ತೀರಾ ಕಡಿಮೆ­ಯಿದೆ. 2013ರ ಚುನಾವಣೆಯಲ್ಲಿ ಬಿಜೆಪಿಯ ಲಾಲಾಜಿ ಮೆಂಡನ್‌ ವಿರುದ್ಧ ಕಾಂಗ್ರೆಸ್‌ನ ವಿನಯ ಕುಮಾರ್‌ ಸೊರಕೆ­ಯವರು 1,855 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರೆ, 2018ರಲ್ಲಿ ವಿನಯ ಕುಮಾರ್‌ ಸೊರಕೆ ವಿರುದ್ಧ ಲಾಲಾಜಿ ಆರ್‌. ಮೆಂಡನ್‌ ಅವರು 11,917 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸಲು ಹಾಲಿ ಶಾಸಕ ಲಾಲಾಜಿ ಮೆಂಡನ್‌ ಉತ್ಸುಕರಾಗಿದ್ದರೆ, ನಾಯಕ­­ರಾದ ಗುರ್ಮೆ ಸುರೇಶ ಶೆಟ್ಟಿ, ಯಶಪಾಲ್‌ ಸುವರ್ಣ, ಕುಯಿಲಾಡಿ ಸುರೇಶ ನಾಯಕ್‌ ಮೊದಲಾದವರ ಹೆಸರು ಕೇಳಿಬರುತ್ತಿದೆ.

ಬಿಜೆಪಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಈ ಕ್ಷೇತ್ರದಲ್ಲಿ ದಿನೇದಿನೆ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ಹಾಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೆಸರು ಮೊದಲಿದ್ದು ಕ್ಷೇತ್ರದಲ್ಲಿ ವ್ಯಾಪಕ ಸಂಚಾರ ನಡೆಸುವುದರ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿಯವರು ಆಕಾಂಕ್ಷಿ ಪಟ್ಟಿಯಲ್ಲಿದ್ದಾರೆ.

ಟಿಕೆಟ್‌ ಪಡೆಯಲು ಬೇಕಾದ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಬೈಂದೂರು ಅಥವಾ ಕುಂದಾಪುರ ಕ್ಷೇತ್ರದಲ್ಲಿ ಬಂಟ ಸಮುದಾಯಕ್ಕೆ ಟಿಕೆಟ್‌ ತಪ್ಪಿದಲ್ಲಿ ಇಲ್ಲೊಂದು ಬಂಟ ಸಮುದಾಯಕ್ಕೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ಆಗ ಗುರ್ಮೆಯವರ ಹೆಸರು ಪ್ರಮುಖವಾಗಿ ಪರಿಗಣಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯ­ದರ್ಶಿ ಯಶ್‌ಪಾಲ್‌ ಎ. ಸುವರ್ಣ ಹಿಂದೂ ಸಂಘಟನೆ­ಗಳಲ್ಲೂ ಸಕ್ರಿಯವಾಗಿರುವ ಜತೆಗೆ ಹಿಜಾಬ್‌ ಗಲಾಟೆಯ ಅನಂತರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಮುನ್ನೆಲೆಗೆ ಬಂದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ಕ್ಷೇತ್ರದ ಉಸ್ತುವಾರಿಯೂ ಇವರ ಹೆಗಲ ಮೇಲಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ‌ ಶ್ರೀಶ ನಾಯಕ್‌, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಮೊದಲಾದವರು ಟಿಕೆಟ್‌ಗೆ ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಜೆಡಿಎಸ್‌ನಿಂದ ಜಿಲ್ಲಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಹಾಗೂ ಮುಖಂಡ­ರಾದ ಸಂಕಪ್ಪ ಸ್ಪರ್ಧೆಯಲ್ಲಿದ್ದಾರೆ. ಎಸ್‌ಡಿಪಿಐನಿಂದ ಹನೀಫ್ ಮೂಳೂರು ಪ್ರಚಾರ ಪ್ರಕ್ರಿಯೆ ಆರಂಭಿಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಯ ಆಯ್ಕೆಯೇ ತುಸು ತ್ರಾಸ­ವಾಗ­ಬಹುದು. ಅಚ್ಚರಿಯ ಆಯ್ಕೆಯಿಂದ ಬಂಡಾಯದ ಬಿಸಿಯೂ ಎದುರಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಮಾರ್‌ ಸೊರಕೆ ಎಂಬುದು ಪಕ್ಷದ ಕಾರ್ಯಕರ್ತರಲ್ಲಿ ಅಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಸದ್ಯ ಎಲ್ಲರ ಲ್ಲೂ ಗೊಂದಲವಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಕಾಪು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ವಿಳಂಬವಾಗಿತ್ತು. ಈ ಬಾರಿಯೂ ಅದೇ ತಂತ್ರವನ್ನು ಬಿಜೆಪಿ ವರಿಷ್ಠರು ಅನು ಸರಿಸಿದರೂ ಅಚ್ಚರಿಯಿಲ್ಲ ಎಂದು ಹೇಳಲಾಗುತ್ತಿದೆ.

ಸೊರಕೆಯವರೇ ಮುಂಚೂಣಿ
ಸದ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರು ಅಭ್ಯರ್ಥಿ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಸೊರಕೆಯವರು ಈಗಾಗಲೇ ಕ್ಷೇತ್ರಾದ್ಯಂತ ಪ್ರಚಾರ ಆರಂಭಿಸಿದ್ದಾರೆ. ಪ್ರಜಾಧ್ವನಿ ಯಾತ್ರೆ, ಕರಾವಳಿ ಪ್ರಜಾಧ್ವನಿ ಯಾತ್ರೆಯನ್ನು ನಡೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಪಕ್ಷದ ವರಿಷ್ಠರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಕಾಂಗ್ರೆಸ್‌ನಿಂದ ಇವರ ಹೆಸರು ಮಾತ್ರ ಕೇಳಿಬರುತ್ತಿದೆ. ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ್‌ ಕೋಟ್ಯಾನ್‌ ಅವರೂ ಇದೇ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿನಯ ಕುಮಾರ್‌ ಅವರು ತಾವೇ ಕಾಂಗ್ರೆಸ್‌ ಅಭ್ಯರ್ಥಿ ಎಂಬ ನೆಲೆಯಲ್ಲಿ ಪ್ರಚಾರವನ್ನೂ ಆರಂಭಿಸಿದ್ದಾರೆ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.