ಟಿಕೆಟ್‌ ತಪ್ಪಿಸಿ ಸವದಿ ಬುಡಕ್ಕೆ ಕೈ ಹಾಕಿದ ಜಾರಕಿಹೊಳಿ

ಕೊನೆಗೂ ಹಠ ಸಾಧಿಸಿದ ರಮೇಶ್‌ ಜಾರಕಿಹೊಳಿ

Team Udayavani, Apr 12, 2023, 7:45 AM IST

ಟಿಕೆಟ್‌ ತಪ್ಪಿಸಿ ಸವದಿ ಬುಡಕ್ಕೆ ಕೈ ಹಾಕಿದ ಜಾರಕಿಹೊಳಿ

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ ವಿಚಾರದಲ್ಲಿ ರಮೇಶ್‌ ಜಾರಕಿಹೊಳಿ ತಾವು ಹಿಡಿದ ಹಠ ಸಾಧಿಸಿದ್ದಾರೆ. ಕಳೆದ ಐದು ವರ್ಷ ಗಳಿಂದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ್‌ ಸವದಿ ವಿರುದ್ಧ ನೇರವಾಗಿ ತಿರುಗಿ ಬಿದ್ದಿದ್ದ ರಮೇಶ್‌ ಜಾರಕಿಹೊಳಿ ಈಗ ಟಿಕೆಟ್‌ ಸಿಗುವುದನ್ನೇ ತಪ್ಪಿಸುವ ಮೂಲಕ ಅವರ ಬುಡಕ್ಕೆ ಕೈ ಹಾಕಿದ್ದಾರೆ. ಪಕ್ಷದ ವರಿಷ್ಠರ ಮೇಲೆ ರಮೇಶ್‌ ಹಾಕಿದ್ದ ಒತ್ತಡ ಫಲ ಕೊಟ್ಟಿದೆ.

2018ರ ಚುನಾವಣೆಯಿಂದಲೂ ರಮೇಶ್‌ ಜಾರಕಿಹೊಳಿ ಅವರೇ ನನ್ನ ರಾಜಕೀಯ ಗುರು ಎಂದು ಹೇಳಿಕೊಂಡೇ ಬಂದಿದ್ದ ಹಾಲಿ ಶಾಸಕ ಮಹೇಶ ಕುಮಟಳ್ಳಿ ಮತ್ತೂಮ್ಮೆ ಗುರುಗಳ ಕೃಪಾ ಕಟಾಕ್ಷದಿಂದ ಟಿಕೆಟ್‌ ಪಡೆಯುವ ಸನಿಹದಲ್ಲಿದ್ದಾರೆ. ತಮ್ಮನ್ನೇ ಸಂಪೂರ್ಣ ನಂಬಿಕೊಂಡಿದ್ದ ಮಹೇಶ ಕುಮಟಳ್ಳಿ ಅವರನ್ನು ರಮೇಶ್‌ ಕೈಬಿಟ್ಟಿಲ್ಲ. ಈ ಮೂಲಕ ರಮೇಶ್‌ ಜಾರಕಿಹೊಳಿ ಮತ್ತು ಮಹೇಶ ಕುಮಟಳ್ಳಿ ಚುನಾವಣೆಯ ಒಂದು ಹಂತವನ್ನು ಯಶಸ್ವಿಯಾಗಿ ಗೆದ್ದಿದ್ದಾರೆ ಎಂದರೆ ತಪ್ಪಿಲ್ಲ.

ರಮೇಶ್‌ ಜಾರಕಿಹೊಳಿ ಪ್ರಭಾವ ಮತ್ತು ಲಾಬಿ ಮುಂದೆ ತಮಗೆ ಟಿಕೆಟ್‌ ಸಿಗುವುದು ಅನುಮಾನ ಎಂಬುದನ್ನು ಮೊದಲೇ ಸೂಕ್ಷ್ಮವಾಗಿ ಅರಿತಿದ್ದ ಲಕ್ಷ್ಮಣ್‌ ಸವದಿ ತಮ್ಮ ಮುಂದಿನ ಅವಕಾಶಗಳನ್ನು ಮುಕ್ತವಾಗಿ ತೆರೆದಿಟ್ಟಿದ್ದಾರೆ. ಅನಿವಾರ್ಯವಾಗಿ ಒಂದು ಪ್ರಯತ್ನ ಇರಲಿ ಎಂದು ಕಾಂಗ್ರೆಸ್‌ ಕಡೆ ಮುಖ ಮಾಡಿದ್ದರು. ಈ ನಿಟ್ಟಿನಲ್ಲಿ ಮಾತುಕತೆ ಸಹ ನಡೆದಿತ್ತು. ಈಗ ಈ ಎಲ್ಲ ಅನುಮಾನಗಳು ನಿಜವಾಗಿವೆ ಎಂಬ ಮಾತುಗಳು ಕೇಳಿ ಬಂದಿವೆ.

ಪುತ್ರ ಚಿದಾನಂದ ಕಣಕ್ಕೆ?: ಇದರ ನಡುವೆ ಲಕ್ಷ್ಮಣ್‌ ಸವದಿ ತಾವು ಚುನಾವಣೆಗೆ ಇಳಿಯುವ ಬದಲು ತಮ್ಮ ಮಗ ಚಿದಾನಂದನನ್ನು ಕಣಕ್ಕಿಳಿ ಸಲು ಚಿಂತನೆ ನಡೆಸಿದ್ದಾರೆಂಬ ಸುದ್ದಿ ಹೊಸ ರಾಜ ಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ರಾಜ್ಯ ರಾಜ ಕಾರಣದಲ್ಲಿ ಎಲ್ಲರ ಗಮನ ತಮ್ಮ ಕಡೆಗೆ ಮಾಡಿ ಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಹಾಗೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅಥಣಿ ಕ್ಷೇತ್ರದ ಟಿಕೆಟ್‌ ವಿಚಾರವನ್ನು ಅತ್ಯಂತ ವೈಯಕ್ತಿಕವಾಗಿ ತೆಗೆದುಕೊಂಡು ಪಕ್ಷವನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿದ್ದರು. ರಮೇಶ್‌ ಅಥಣಿಯಲ್ಲಿ ಮಹೇಶ ಕುಮಟಳ್ಳಿಗೆ ಅವರಿಗೆ ಟಿಕೆಟ್‌ ಕೊಡದಿ ದ್ದರೆ ನಾನು ಸ್ಪರ್ಧೆ ಮಾಡಲ್ಲ ಎಂಬ ಬೆದರಿಕೆ ಹಾಕಿದ್ದರು. ಇದರ ಜತೆಗೆ ಟಿಕೆಟ್‌ ಪಡೆ ಯುವ ವಿಷಯದಲ್ಲಿ ಸಂಘ ಪರಿವಾರದವರ ಪ್ರಭಾವವನ್ನು ಎಳೆದು ತಂದಿದ್ದರು. ಹಾಗಾಗಿ ನಿಜವಾಗಿಯೂ ಅಥಣಿ ಕ್ಷೇತ್ರದ ಟಿಕೆಟ್‌ ಹಂಚಿಕೆ ಅಷ್ಟೊಂದು ಸಮಸ್ಯೆ ಉಂಟು ಮಾಡಿದೆಯಾ ಎಂಬ ಪ್ರಶ್ನೆ ಮತ್ತು ಅನುಮಾನ ಸಹಜವಾಗಿ ಬಂದಿತ್ತು.

ಕಾಂಗ್ರೆಸ್‌ ನಾಯಕರು ಜಾಗೃತ: ಲಕ್ಷ್ಮಣ್‌ ಸವದಿ ಅವರಿಗೆ ಟಿಕೆಟ್‌ ಸಿಗುವುದು ಅನುಮಾನ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಕಾಂಗ್ರೆಸ್‌ ನಾಯಕರು ಜಾಗೃತರಾಗಿದ್ದಾರೆ. ಇದಕ್ಕೆ ಪೂರಕವಾಗಿ ಅಥಣಿ ಕ್ಷೇತ್ರದಲ್ಲಿ ಸವದಿ ಅವರು ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ವದಂತಿಗಳು ವ್ಯಾಪಕವಾಗಿ ಹರಡುತ್ತಿವೆ.

ಸವದಿ, ರಮೇಶ್‌ ತಿಕ್ಕಾಟಕ್ಕೆ ಕಾರಣ ಏನು?
ಲಕ್ಷ್ಮಣ್‌ ಸವದಿ ಅವರಿಗೆ ಟಿಕೆಟ್‌ ಕೊಡಬಾರದು ಎಂಬುದಕ್ಕೆ ಡಿಸಿಸಿ ಬ್ಯಾಂಕ್‌ ರಾಜಕಾರಣ, ಇನ್ನೊಂದು ಕ್ಷೇತ್ರದಲ್ಲಿ ಹಸ್ತಕ್ಷೇಪ ಸಹಿತ ಒಂದೆರಡು ಬಲವಾದ ಕಾರಣಗಳಿದ್ದವು. ಕಳೆದ ಚುನಾವಣೆ ಸಂದರ್ಭದಲ್ಲಿ ಲಕ್ಷ್ಮಣ್‌ ಸವದಿ ಗೋಕಾಕ್‌ಕ್ಷೇತ್ರದಲ್ಲಿ ಪಕ್ಷದ ಪರ ಪ್ರಚಾರ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ಹರಿ ಹಾಯ್ದಿದ್ದರು. ಚುನಾವಣೆ ಬಳಿಕವೂ ಸವದಿ ಗೋಕಾಕ್‌ ಕ್ಷೇತ್ರದಲ್ಲಿ ತಮ್ಮ ಹಸ್ತಕ್ಷೇಪ ಬಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗಲೊಮ್ಮೆ ಗೋಕಾಕ್‌ ಕ್ಷೇತ್ರ, ರಾಜ್ಯಮಟ್ಟದಲ್ಲಿ ಹಾಗೂ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಲೇ ಬಂದಿದ್ದರು ಎಂಬ ಆರೋಪಗಳು ಬಂದಿದ್ದವು. ಈ ಸಿಟ್ಟು ಜಾರಕಿಹೊಳಿ ಸಹೋದರರ ಮನಸ್ಸಿನಲ್ಲಿ ಬಲವಾಗಿ ಬೇರೂರಿತ್ತು. ಅದರ ಫಲ ಈಗ ಟಿಕೆಟ್‌ ಕೈತಪ್ಪುವ ಮೂಲಕ ಬಂದಿದೆ. ಇನ್ನೊಂದು ಕಡೆ ಈಗ ಸವದಿ ಹೇಗೂ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಇನ್ನೂ ಐದು ವರ್ಷ ಅವಧಿ ಇದೆ. ಹೀಗಿರುವಾಗ ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಹೇಶ ಕುಮಟಳ್ಳಿಗೆ ಅವಕಾಶ ಕೊಡಬೇಕು ಎಂಬುದು ರಮೇಶ್‌ ಜಾರಕಿಹೊಳಿ ವಾದವಾಗಿತ್ತು. ಇದೇ ವಾದಕ್ಕೆ ವರಿಷ್ಠರ ಮನ್ನಣೆ ಸಿಕ್ಕಿದೆ.

ನಾಳೆ ಬೆಂಬಲಿಗರ ಸಭೆಯಲ್ಲಿ ನಿರ್ಧಾರ
ವಿಧಾನ ಪರಿಷತ್‌ ಸದಸ್ಯರಾಗಿರುವ ಸವದಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಆಲೋಚನೆ ಮಾಡಲಿಕ್ಕಿಲ್ಲ. ಆದರೆ ರಾಜಕೀಯದಲ್ಲಿ ನಿರೀಕ್ಷೆಯಂತೆ ನಡೆಯುವ ಪ್ರಸಂಗಗಳು ಬಹಳ ಕಡಿಮೆ. ಯಾವಾಗ ಏನೂ ಬೇಕಾದರೂ ಆಗಬಹುದು. ಅದರಂತೆ ಸವದಿ ಕಾಂಗ್ರೆಸ್‌ನಿಂದ ಕಣಕ್ಕಿಳಿದರೂ ಅಚ್ಚರಿ ಪಡಬೇಕಿಲ್ಲ ಎಂಬುದು ಅವರ ಅಭಿಮಾನಿಗಳ ಅಭಿಪ್ರಾಯ. ಟಿಕೆಟ್‌ ಸಿಗದೆ ಇರುವುದಕ್ಕೆ ತೀವ್ರ ನೊಂದಿರುವ ಲಕ್ಷ್ಮಣ ಸವದಿ ತಮ್ಮ ನಿರ್ಧಾರ ಇನ್ನೂ ಪ್ರಕಟ ಮಾಡಿಲ್ಲ. ಎಲ್ಲವನ್ನೂ ಬೆಂಬಲಿಗರ ಮೇಲೆ ಬಿಟ್ಟಿದ್ದಾರೆ. ತಮ್ಮ ಮತ್ತು ತಮ್ಮ ಪುತ್ರ ಚಿದಾನಂದನ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ದುಡುಕಿನ ನಿರ್ಧಾರ ಕೈಗೊಳ್ಳಲು ಸವದಿ ಹಿಂದೇಟು ಹಾಕಿದ್ದಾರೆ. ಆದರೆ ಚುನಾವಣೆಗೆ ಇಳಿಯಬೇಕೋ ಅಥವಾ ಬೇಡವೋ. ಸ್ಪರ್ಧೆ ಮಾಡಿದರೆ ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಇಲ್ಲವೇ ತಮ್ಮ ಪುತ್ರ ಚಿದಾನಂದನನ್ನು ಕಣಕ್ಕಿಳಿಸಬೇಕೇ ಬೇಡವೇ ಎಂಬುದರ ಬಗ್ಗೆ ನಿರ್ಧರಿಸಲು ಲಕ್ಷ್ಮಣ ಸವದಿ ಎ.13ರಂದು ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ. ಈಗ ಈ ಸಭೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಸವದಿ ತೆಗೆದುಕೊಳ್ಳುವ ನಿರ್ಧಾರ ಕುತೂಹಲ ಮೂಡಿಸಿದೆ.

– ಕೇಶವ ಆದಿ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.