ಸಿದ್ದರಾಮನಹುಂಡಿ ಗಲಾಟೆ; 10 ಮಂದಿಯ ಮೇಲೆ ಪ್ರಕರಣ ದಾಖಲು
Team Udayavani, Apr 28, 2023, 10:20 PM IST
ಮೈಸೂರು : ವರುಣಾ ಕ್ಷೇತ್ರದ ಸಿದ್ದರಾಮನಹುಂಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಗಲಾಟೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯ ಮೇಲೆ ಪ್ರಕರಣ ದಾಖಲಿಸಿರುವುದಾಗಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಘಟನೆ ಸಂಬಂಧ 10 ಜನರ ಮೇಲೆ 107 ಕಾಯ್ದೆ ಅಡಿ ಕೇಸ್ ದಾಖಲಾಗಿದೆ.ಅವರ ಮೇಲೆ ಯಾವುದಾದರೂ ಕ್ರಿಮಿನಲ್ ಹಿನ್ನೆಲೆ ಇದ್ದರೆ ಅಂತವರನ್ನು ಗಡಿಪಾರು ಮಾಡಲಾಗುವುದು.ಸದ್ಯಕ್ಕೆ ಪ್ರಕರಣದ ತನಿಖೆಯಾಗುತ್ತಿದೆ.ವಿಡಿಯೋ ದೃಶ್ಯಾವಳಿ ಪರಿಶೀಲನೆ ಮಾಡಲಾಗುತ್ತಿದೆ. ಮೇಲ್ನೋಟಕ್ಕೆ ಘರ್ಷಣೆಯಾಗಿರುವುದು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಸದ್ಯಕ್ಕೆ ಈ ಎಲ್ಲದರ ಬಗ್ಗೆಯೂ ತನಿಖೆಯಾಗುತ್ತಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ತನಿಖೆಯಾಗುತ್ತಿದೆ. ತನಿಖೆ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ವರುಣಾ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಜಿಪಂ ಮಾಜಿ ಅಧ್ಯಕ್ಷ ಪುಟ್ಟಬುದ್ಧಿ ಅವರ ಅಣ್ಣನ ಮಗ ಕೀಳನಪುರದ ನಾಗೇಶ್ (26)ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ