
ಕೋಲಾರದಲ್ಲೂ ಸಿದ್ದರಾಮಯ್ಯ ಸ್ಪರ್ಧೆ ?
Team Udayavani, Apr 2, 2023, 7:03 AM IST

ಕೋಲಾರ/ಬೆಂಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಎ. 9ಕ್ಕೆ ಕೋಲಾರಕ್ಕೆ ಭೇಟಿ ನೀಡುವ ಮುನ್ನವೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದಲೂ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಪ್ರಕಟನೆ ಹೊರಬೀಳಲಿದೆ.
ವರುಣಾ ಜತೆಗೆ ಕೋಲಾರದಿಂದಲೂ ಸ್ಪರ್ಧಿಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಇದಕ್ಕೆ ಪಕ್ಷದ ವರಿಷ್ಠರು ಸಹ ಸಮ್ಮತಿ ನೀಡಿದ್ದಾರೆ. ಬಾಕಿ ಉಳಿದಿರುವ 100 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಇತ್ತೀಚೆಗೆ ಸೇರಿದ್ದ ಸ್ಕ್ರಿನಿಂಗ್ ಕಮಿಟಿ ಸಭೆಯಲ್ಲೂ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರು ವರಿಷ್ಠರ ನಿರ್ಧಾರಕ್ಕೆ ಬಿಟ್ಟರೆ- ವರಿಷ್ಠರು ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಬಿಟ್ಟಿದ್ದರು. ಅಂತಿಮವಾಗಿ ಅವರು ಈ ಸಲವೂ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ಧಾರೆ.
ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮುನ್ನವೇ ಕೋಲಾರಕ್ಕೆ ತಮ್ಮ ಹೆಸರು ಘೋಷಿಸಿದರೆ ರಾಹುಲ್ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿ ಕಾರ್ಯಕ್ರಮದ ಮೂಲಕ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
