‘ಕೈʼ ಟಿಕೆಟ್ ತಪ್ಪಿದ ಹಿನ್ನೆಲೆ: ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಕಣಕ್ಕೆ- SK Basavarajan
Team Udayavani, Apr 9, 2023, 11:53 AM IST
ಚಿತ್ರದುರ್ಗ: ಕಾಂಗ್ರೆಸ್ ನಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸ್ವಪಕ್ಷದ ವಿರುದ್ದವೇ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಸೌಭಾಗ್ಯ ಬಸವರಾಜನ್ ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್ ಹರಾಜಾಗಿದೆ. ನಾವೇನು ಹರಾಜು ನೋಡಿಲ್ಲ, ಕೆಪಿಸಿಸಿಯಲ್ಲೇ ಹೇಳುತ್ತಾರೆ. ಚುನಾವಣೆ ಮಾಡುವಷ್ಟೇ ಹಣ ನೀಡಿದ್ದಾರೆ ಅಂತಾರೆ. ಎಷ್ಟು ಹಣವೆಂಬುದು ನಮಗೆ ಖಚಿತವಾಗಿ ಗೊತ್ತಿಲ್ಲ. ನಾವು ಆ ಹಣ ಎಣಿಸಿದವರಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: KPCC: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ
ಮಾಜಿ ಜಿ.ಪಂ ಅಧ್ಯಕ್ಷೆಯಾಗಿದ್ದ ಪತ್ನಿ ಸೌಭಾಗ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇನೆ. ಎಲ್ಲಾ ವರ್ಗದ ಜನರ ಬೆಂಬಲ ಭರವಸೆಯ ನಿರೀಕ್ಷೆಯಿದೆ ಎಂದರು.
ರಘು ಆಚಾರ್ ನಿನ್ನೆ ನಮ್ಮ ಮನೆಗೆ ಬಂದಿದ್ದರು. ಜಿಲ್ಲಾ ಜೆಡಿಎಸ್ ಉಸ್ತುವಾರಿ ನೀಡುತ್ತಾರೆಂದು ಹೇಳಿಕೊಂಡರು. ಹಿರಿಯೂರು, ಹೊಸದುರ್ಗದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದರು. ಚುನವಣೆಗೆ ಹಣ ನೀಡುವುದಾಗಿಯೂ ಹೇಳಿದರು. ಆದರೆ ನಾವು ಚಿತ್ರದುರ್ಗದಿಂದಲೇ ಪಕ್ಷೇತರವಾಗಿ ಸ್ಪರ್ಧೆಗೆ ನಿರ್ಧರಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ