ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ


Team Udayavani, Mar 22, 2023, 9:25 AM IST

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಹುದ್ದೆಗಾಗಿ ಜಗಳ ನಡೆಯುತ್ತಿಲ್ಲ, ಬದಲಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ರಚಿಸಲು ಇಬ್ಬರು ಒಗ್ಗಟ್ಟಿನಿಂದ ಹೋರಾಟ ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಪ್ರತಿಪಾದಿಸಿದ್ದಾರೆ.

“ಉದಯವಾಣಿ’ ಕಚೇರಿಯಲ್ಲಿ ಮಂಗಳವಾರ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಯಾವುದೇ ಹಂತದಲ್ಲೂ ಭಿನ್ನಾಭಿಪ್ರಾಯ ಬಂದೇ ಇಲ್ಲ. ಎಲ್ಲವೂ ಬಿಜೆಪಿ ಹರಡುತ್ತಿರುವ ಕಥೆಯಷ್ಟೇ ಎಂದು ಹೇಳಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸಹಿತ ರಾಜ್ಯದ ಎಲ್ಲ ಕಾಂಗ್ರೆಸ್‌ ನಾಯಕರು ಜತೆಗೂಡಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್‌ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ, ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಒಕ್ಕಲಿಗರು ಬಿಜೆಪಿ ಜತೆ ಇಲ್ಲ, ಅದು ರೈತ ವಿರೋಧಿ ಪಕ್ಷವಾಗಿದೆ. ಮೀಸಲಾತಿ ವಿಚಾರದಲ್ಲಿ ಎರಡೂ ಸಮುದಾಯಗಳಿಗೂ ಅನ್ಯಾಯ ಮಾಡಲಾಗಿದೆ, ಅರೆಬೆಂದ ಮೀಸಲಾತಿ ನೀತಿಯಿಂದ ಈ ಸಮುದಾಯಗಳ ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ ಅವರು ಲಿಂಗಾಯತರಿಗೆ ಬಿಜೆಪಿ ದ್ರೋಹ ಬಗೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಬಿಜೆಪಿಯಿಂದ ಬಿಎಸ್‌ವೈಗೆ ಅವಮಾನ: ಬಿ.ಎಸ್‌. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜಕೀಯವಾಗಿ ಏನೇ ವ್ಯತ್ಯಾಸ ಇದ್ದರೂ ಅವರ ಬಗ್ಗೆ ನಮಗೆಲ್ಲ ಗೌರವವಿದೆ. ಆದರೆ ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ ಬೆನ್ನಿಗೆ ಚೂರಿ ಹಾಕಿದ್ದು, ಅದಕ್ಕೂ ಮುಂಚೆ ತಿಂಗಳಾನುಗಟ್ಟಲೆ ಭೇಟಿಗೆ ಅವಕಾಶ ಕೊಡದೇ ಅವಮಾನ ಮಾಡಿ ನಡೆಸಿಕೊಂಡ ರೀತಿ ನಿಜಕ್ಕೂ ದುರದೃಷ್ಟಕರ ಎಂದು ಹೇಳಿದರು.

ಯಡಿಯೂರಪ್ಪ ಅವರ ಕುಟುಂಬದ ಮೇಲೆ ಇಡಿ ದಾಳಿ ನಡೆಸಲಾಗುತ್ತದೆ. ಒಂದು ರೀತಿ ಬೆದರಿಸಿ ಅವರನ್ನು ಸುಮ್ಮನಾಗಿಸಲಾಗಿದೆ. ಈಗ ಚುನಾವಣೆ ಬಂದಿದೆ ಎಂದು ಹೊಗಳುತ್ತಿದ್ದಾರೆ, ಅವರನ್ನು ಪ್ರಚಾರ ಸಮಿತಿ ಸದಸ್ಯರನ್ನಾಗಿ ಮಾಡಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಅವರ ಕೈ ಕೆಳಗೆ ಕೆಲಸ ಮಾಡುವ ಸ್ಥಿತಿ ಅವರದು. ಸಿ.ಟಿ.ರವಿ ಅಂತಹವರು ಅವರ ವಿರುದ್ಧ ಮಾತನಾಡುತ್ತಾರೆ. ಆದರೂ ಯಡಿಯೂರಪ್ಪ ಮೌನವಾಗಿರು ವಂತಾಗಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರನ್ನು ಬಿಜೆಪಿ ಬೇಕಾದಾಗ ಬಳಸಿ ಬೇಡದಿದ್ದಾಗ ನಿರ್ಲಕ್ಷ್ಯ ಮಾಡುವುದು ಹೊಸದಲ್ಲ. ಯಡಿಯೂರಪ್ಪ ವಿರುದ್ಧ ಸಣ್ಣ ಪುಟ್ಟ ನಾಯಕರು ಬಹಿರಂಗ ಟೀಕೆ ಮಾಡಿದರೂ ಆ ಪಕ್ಷದ ವರಿಷ್ಠರು ಜಾಣ ಮೌನ ವಹಿಸುತ್ತಾರೆ. ಇದೆಲ್ಲವೂ ರಾಜ್ಯದ ಜನತೆಗೆ ಗೊತ್ತಿರುವುದೇ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಬೆಂಗಳೂರು ಸಹಿತ ಹಳೇ ಮೈಸೂರಿನಲ್ಲಿ ನಾವು ಹೆಚ್ಚು ಸ್ಥಾನ ಪಡೆಯುತ್ತೇವೆ. ಕರಾವಳಿ, ಮಲೆನಾಡು ಭಾಗದಲ್ಲೂ ಕಳೆದ ಬಾರಿ ಸೋತಿದ್ದ ಹಲವು ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲಲಿದ್ದೇವೆ ಎಂದು ಹೇಳಿದರು.

ಕರಾವಳಿಗೆ ಪ್ರತ್ಯೇಕ ಬಜೆಟ್‌: ರಾಜ್ಯದ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗಾಗಿಯೇ ಕಾಂಗ್ರೆಸ್‌ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದು, ಈ ಭಾಗದಲ್ಲೇ ಉದ್ಯೋಗ ಸೃಷ್ಟಿ ಮಾಡುವ ಸ್ಪಷ್ಟ ಗುರಿಯನ್ನು ನಾವು ಹೊಂದಿ ದ್ದೇವೆ ಎಂದು ಸುರ್ಜೇವಾಲಾ ಭರವಸೆ ನೀಡಿದರು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಸಹಿತ ಹಲವು ಸಾಧ್ಯತೆಗಳು ಇವೆ. ಆದರೆ ಅದರ ಸದ್ಬಳಕೆಯಾಗಿಲ್ಲ. ಕರಾವಳಿ ಬಿಜೆಪಿಯ ಕೋಮು ರಾಜಕಾರಣದ ಕಾರ್ಖಾನೆಯಾಗಿರುವುದರಿಂದ ಇಲ್ಲಿ ಸದಾ ಕಾನೂನು-ಸುವ್ಯವಸ್ಥೆ ಸಮಸ್ಯೆ ಇದೆ. ವಾಣಿಜ್ಯೋದ್ಯಮಿಗಳು ಇಲ್ಲಿ ತಮ್ಮ ಘಟಕ ತೆರೆಯಲು ಹಿಂಜರಿಯುತ್ತಿದ್ದಾರೆ. ಧರ್ಮ ದ್ವೇಷದ ನಶೆಯಲ್ಲಿ ಅಭಿವೃದ್ಧಿ ಹಿಂದೆ ಉಳಿದಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ವ್ಯವಸ್ಥೆಯನ್ನು ಬದಲಾಯಿಸುತ್ತದೆ ಎಂದು ಹೇಳಿದರು.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾವು ಪ್ರತ್ಯೇಕ ಪ್ರಣಾಳಿಕೆ ಸಿದ್ದಪಡಿಸುತ್ತಿದ್ದೇವೆ. 13 ಅಂಶಗಳನ್ನು ಪರಿಗಣಿಸಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಕಳೆಯುವವರೆಗೆ ನಾರಾಯಣಗುರು ಅಭಿವೃದ್ಧಿ ನಿಗಮದ ಬಗ್ಗೆ ಸೊಲ್ಲೆತ್ತದ ಬಿಜೆಪಿ ಈಗ ಕಣ್ಣೊರೆಸುವ ಕೆಲಸ ಮಾಡುತ್ತಿದೆ. ಕರಾವಳಿಯ ಪ್ರತಿಯೊಂದು ಸಮುದಾಯಕ್ಕೂ ಅನ್ವಯವಾಗುವಂಥ ನೀತಿಯನ್ನು ನಾವು ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

ಹಣಕಾಸು ಹೊಂದಾಣಿಕೆ ಕಷ್ಟವೇನಲ್ಲ
ಕಾಂಗ್ರೆಸ್‌ ಘೋಷಣೆ ಮಾಡಿರುವ ಗ್ಯಾರೆಂಟಿಗ ಳಿಗೆ ಹಣ ಹೊಂದಿಸಬಹುದು. ಇದಕ್ಕೆ ನಮ್ಮ ಬಳಿ ಪರಿಹಾರಗಳೂ ಇವೆ. ಕರ್ನಾಟಕದಲ್ಲಿ ಈ ವರ್ಷ ಸುಮಾರು 42 ಸಾವಿರ ಕೋಟಿ ರೂ. ಹಣ ವಿವಿಧ ಯೋಜನೆಗಳಿಗೆ ಬಳಕೆಯಾಗದೇ ಹಿಂತಿರುಗಿಸಲಾಗಿದೆ. ಪ್ರತಿ ವರ್ಷ ಸುಮಾರು 35 ರಿಂದ 40 ಸಾವಿರ ಕೋಟಿ ರೂ. ಹಣ ಬಳಕೆಯಾ ಗುತ್ತಿಲ್ಲ. ನಾವು ಘೋಷಣೆ ಮಾಡಿದ ಯೋಜನೆಗಳ ಮೊತ್ತ ಇದಕ್ಕಿಂತಲೂ ಕಡಿಮೆ. ಜಿಎಸ್‌ಟಿ ಸೋರಿಕೆಯೇ ಕರ್ನಾಟಕದಲ್ಲಿ ಸುಮಾರು 75 ಸಾವಿರ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅದನ್ನು ತಡೆಗಟ್ಟಿದರೆ ಹಣಕಾಸು ಹೊಂದಿಕೆಯೇನೂ ಕಷ್ಟವಲ್ಲ ಎಂದು ಅಭಿಪ್ರಾಯಪಟ್ಟರು.

ತಮಿಳುನಾಡು ಸಿಎಂ ಸ್ಟಾಲಿನ್‌ ಅವರು 2 ದಿನಗಳ ಹಿಂದೆ ಗೃಹಲಕ್ಷ್ಮೀ ಯೋಜನೆಯ ಮಾಹಿತಿ ತರಿಸಿ ಕೊಂಡಿದ್ದು, ಅನುಷ್ಠಾನಕ್ಕೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ದೇಶದ ಪ್ರತೀ ರಾಜ್ಯವೂ ಈ ಯೋಜನೆ ಜಾರಿಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಅನುಮಾನ ಬೇಡ. ಹಿಮಾ ಚಲ ಪ್ರದೇಶ, ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ ಕೊಟ್ಟ ಭರವಸೆ ಈಡೇರಿ ಸಿಲ್ಲ ಎಂಬುದು ಬಿಜೆಪಿ ಸೃಷ್ಟಿಸುತ್ತಿರುವ ಕುತ್ಸಿತ ಪ್ರಚಾರತಂತ್ರಎಂದು ಟೀಕಿಸಿದರು. ನಾವು ಕೊಟ್ಟಿರುವ ಭರವಸೆಗಳು “ಹಂಚಿಕೆ ನ್ಯಾಯ’ ಸಿದ್ಧಾಂತವನ್ನು ಆಧರಿಸಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಸೃಷ್ಟಿಯಾದ ಬೆಲೆ ಏರಿಕೆಯಿಂದ ಬಡವರು ಬದುಕಲಾಗದಂಥ ಸ್ಥಿತಿ ನಿರ್ಮಾಣವಾಗಿದೆ. ಗೃಹಿಣಿಯರಿಗೆ ನಾವು ನೀಡುವ 2000 ರೂ. ಮತ್ತೆ ರಾಜ್ಯದ ಆರ್ಥಿಕ ಚಕ್ರಕ್ಕೆ ಮರಳುತ್ತದೆ. ಹೀಗಾಗಿ ಇದು ವ್ಯರ್ಥ ಎಂಬ ವ್ಯಾಖ್ಯಾನ ಬೇಡ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು