ಕರ್ನಾಟಕ ಬಜೆಟ್ 2021: ಈ ಬಾರಿ ಕೃಷಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ.
Team Udayavani, Mar 8, 2021, 5:02 PM IST
ಮಣಿಪಾಲ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ 2021-22ನೇ ಸಾಲಿನ ಮುಂಗಡ ಪತ್ರದಲ್ಲಿ ಹೊಸ ತಂತ್ರಜ್ಞಾನ, ಹೊಸ ಬೆಳೆ ತಳಿ, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಪ್ರಾತ್ಯಕ್ಷಿಕಾ ಕ್ಷೇತ್ರಗಳ ಅಭಿವೃದ್ಧಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.
*ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ಬ್ರಾಂಡ್ ವ್ಯಾಲ್ಯೂ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸಲು.
*ರೈತನು ವರ್ಷವಿಡೀ ವರಮಾನ ಪಡೆಯಲು ಸಮಗ್ರ ಕೃಷಿ ಪದ್ಧತಿ ಕಾರ್ಯಕ್ರಮ ಅನುಷ್ಠಾನ
*ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಿಸಲು 25 ಕೋಟಿ ರೂಪಾಯಿ.
*ಹೊಸ ಹೈಬ್ರೀಡ್ ಬೀಜ ನೀತಿ ಜಾರಿಗೆ ಕ್ರಮ
* ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪನೆ, ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ.
*ಹಣ್ಣು ಮತ್ತು ತರಕಾರಿ ಬೆಳೆಗಳ ಮೌಲ್ಯ ವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಬೆಳೆಗಾರರಿಗೆ ತರಬೇತಿ ಮತ್ತು ತಾಂತ್ರಿಕ ಬೆಂಬಲ.
*ದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ.
ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯದ ಹಾಗೂ 100 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕಗಳನ್ನು 60 ಕೋಟಿ ವೆಚ್ಚದಲ್ಲಿ ಕಾರ್ಯಗತಗೊಳಿಸಲು ಕ್ರಮ.
*ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲು ಕ್ರಮ.
*ಎರಡು ಕೋಟಿ ರೂ.ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ.
*ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆ್ಯಂಟಿ ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭ.
*ನವಜಾತ ಶಿಶುಗಳಲ್ಲಿ ಅನುವಂಶೀಯ ಮೆಟಾಬಾಲಿಕ್ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಲು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ ಸ್ಥಾಪನೆ.
*ರಾಜ್ಯದ ನಾಲ್ಕು ವಿಭಾಗಗಳಲ್ಲಿ ಒಟ್ಟು 2.5ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಸ್ಥಾಪನೆ.
*ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ರೂ.ವೆಚ್ಚದಲ್ಲಿ ಚಿಗುರು ಕಾರ್ಯಕ್ರಮಕ್ಕೆ ಚಾಲನೆ. ಟೆಲಿ ಐಸಿಯು ಬಲಪಡಿಸಲು 2 ಕೋಟಿ ರೂ.ಅನುದಾನ.
*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ.
*ಅಪೌಷ್ಠಿಕತೆಯಿಂದ ತಾಯಿ ಮತ್ತು ಮಗುವನ್ನು ರಕ್ಷಿಸಲು 5 ಕೋಟಿ ರೂ.ವೆಚ್ಚದಲ್ಲಿ ಭಾರತೀಯ ವೈದ್ಯ ಪದ್ಧತಿ ಆಧರಿಸಿದ ಪೋಷಣೆ ಮತ್ತು ಜೀವನೋಪಾಯ ಕಾರ್ಯಕ್ರಮ ಜಾರಿ.
*ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ.ವೆಚ್ಚದಲ್ಲಿ ತುರ್ತು ಚಿಕಿತ್ಸಾ ವಿಭಾಗ ಪ್ರಾರಂಭ. ಮೈಸೂರು ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭ.
*ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್
ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್
ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ
ಜಗದೀಶ್ ಶೆಟ್ಟರ್ ಗೆ ಮಾತನಾಡುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ: ಸತೀಶ್ ಜಾರಕಿಹೊಳಿ
ಚಂದನವನದ ನವದಂಪತಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್’ಗೆ ಕೋವಿಡ್ ಸೋಂಕು ದೃಢ