ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಪಡಿಸಲು ಯೋಜನೆ


Team Udayavani, Jul 7, 2023, 3:23 PM IST

ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಪಡಿಸಲು ಯೋಜನೆ

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒಟ್ಟು ನೀಡಿದ್ದಾರೆ ಅಲ್ಲದೆ ಧಾರ್ಮಿಕ ಕೇಂದ್ರ, ಪ್ರವಾಸಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ಬಜೆಟ್ ನಲ್ಲಿ ಬಂಡವಾಳ ವಿನಿಯೋಗಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಯಾವೆಲ್ಲ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಬಂಡವಾಳ ವಿನಿಯೋಗಿಸಿದ್ದಾರೆ ಎಂಬುದನ್ನು ನೋಡೋಣ…

1. ನಮ್ಮ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

2. ʻಒಂದು ರಾಜ್ಯ ಹಲವು ಜಗತ್ತುʼ ಎಂಬ ಘೋಷವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ, ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್‌ ಪ್ಲಾನ್‌ ಅನ್ನು ತಯಾರಿಸಲಾಗುವುದು.

3. ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು.

4. ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

5. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯನ್ನು ತಯಾರಿಸಲಾಗುವುದು.

6. ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲಾಗುವುದು.

7. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ/ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲಾಗುವುದು.

8. ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು.

9. ರಾಜ್ಯದಲ್ಲಿರುವ 16 ವಸ್ತುಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ.

10. ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ ಮಾಡಲಾಗುವುದು.

11. ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Budget:ಅನುಗ್ರಹ ಯೋಜನೆ ಮತ್ತೆ ಜಾರಿಗೆ; ಆಕಸ್ಮಿಕವಾಗಿ ಸಾವನ್ನಪ್ಪಿದ ಜಾನುವಾರುಗಳಿಗೆ ಪರಿಹಾರ

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.