ಕುಡ್ಲದಲ್ಲಿ ಇನ್ನು ಮುಂದೆ “ದರ್ಬಾರ್‌’!

Team Udayavani, Feb 13, 2020, 6:04 AM IST

Darbur

ಕೋಸ್ಟಲ್‌ವುಡ್‌ನ‌ಲ್ಲಿ ಸಿನೆಮಾಗಳ ಸಂಖ್ಯೆ ಮತ್ತೆ ಏರಿಕೆ ಹಂತದಲ್ಲಿದೆ. ಗಿರಿಗಿಟ್‌ ಮಾಡಿದ ಕಮಾಲ್‌ನಿಂದಾಗಿ ಬಹಳಷ್ಟು ನಿರ್ಮಾಪಕ-ನಿರ್ದೇಶಕರು ತುಳು ಸಿನೆಮಾದಲ್ಲಿ ಭರವಸೆ ಇರಿಸಿದ್ದಾರೆ. ಉತ್ತಮ ಸಿನೆಮಾ ನೀಡಿದರೆ ತುಳುವಿನ ಪ್ರೇಕ್ಷಕರು ದೇಶ-ವಿದೇಶದಲ್ಲಿಯೂ ಕೈಹಿಡಿಯುತ್ತಾರೆ ಎಂಬ ಆಶಯಕ್ಕೆ ಬಂದಿರುವ ಅವರು ಹೊಸ ಸಿನೆಮಾಗಳ ಬಗ್ಗೆ ಉತ್ಸುಕರಾಗಿದ್ದಾರೆ. ಹೀಗಾಗಿ ಒಂದೊಂದೇ ಸಿನೆಮಾಗಳು ಇದೀಗ ಸೆಟ್ಟೇರುವ ತವಕದಲ್ಲಿವೆ.

ಅಂದಹಾಗೆ, ಕೆಲವೇ ದಿನದ ಹಿಂದೆ ಮುಹೂರ್ತ ಕಂಡಿರುವ “ದರ್ಬಾರ್‌’ ಸಿನೆಮಾ ಸದ್ಯ ಕುಡ್ಲದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಹೊಸ ಸಿನೆಮಾ ತಂಡ ರೆಡಿ ಮಾಡಲಿರುವ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌ ಹಾಗೂ ಭೋಜರಾಜ್‌ ವಾಮಂಜೂರು ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಆಶಾಭಾವ ಮೂಡಿಸಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್‌ ಅವರ ಗರಡಿಯಲ್ಲಿ ಪಳಗಿದ ಅರ್ಜುನ್‌ ಬಿ. ಅವರು “ದರ್ಬಾರ್‌’ ಸಿನೆಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ. ಬೆಂಗಳೂರಿನ ರಾಜು, ತಮ್ಮಣ್ಣ ಸಿನೆಮಾ ನಿರ್ಮಾಣದ ಜವಾಬ್ದಾರಿ ವಹಿಸಿದ್ದಾರೆ. ನವೀನ್‌ ಕುಡ್ಲ ಸಂಭಾಷಣೆಯ ಹೊಣೆ ಹೊತ್ತಿದ್ದಾರೆ. ಧಾರಾವಾಹಿಯಲ್ಲಿ ನಟಿಸಿದ್ದ ಕಲಾವಿದ ಪ್ರೀತಮ್‌ ಪುತ್ತೂರು ಮುಖ್ಯಭೂಮಿಕೆಯಲ್ಲಿದ್ದರೆ, ಹೀರೋಯಿನ್‌ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ವಿನುತ್‌ ಪುತ್ತೂರು, ಪ್ರಕಾಶ್‌ ಗಟ್ಟಿ, ವಾಸುದೇವ ಕೊಣಾಜೆ ಸೇರಿದಂತೆ ಕಲಾವಿದರು ಸಿನೆಮಾದಲ್ಲಿದ್ದಾರೆ. ಸಂಗೀತ ಆ್ಯಲೆನ್‌ ಕ್ರಾಸ್ತಾ ಪುತ್ತೂರು ನೀಡಲಿದ್ದು, ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಕಂಡಿರುವ ಈ ಸಿನೆಮಾದ ಶೂಟಿಂಗ್‌ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಪಾಣೆಮಂಗಳೂರು ಸಮೀಪದ ಮೊಗರ್ನಾಡು ವ್ಯಾಪ್ತಿಯಲ್ಲಿಯೇ ಶೂಟಿಂಗ್‌ ನಡೆಯಲಿದೆ. ಹಾಡಿನ ಚಿತ್ರೀಕರಣಕ್ಕೆ ಮಡಿಕೇರಿ, ಚಿಕ್ಕಮಗಳೂರು ಪ್ಲ್ಯಾನ್‌ ಹಾಕಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಎರಡು ತಿಂಗಳೊಳಗೆ “ದರ್ಬಾರ್‌’ ರೆಡಿ ಆಗಲಿದೆ.

ಅಂದಹಾಗೆ ದರ್ಬಾರ್‌ನಲ್ಲಿ ಏನಿದೆ ಅಂದರೆ ಎಲ್ಲವೂ ಇದೆ ಎನ್ನುತ್ತದೆ ಚಿತ್ರತಂಡ. ಕಾಮಿಡಿ ಹಾಗೂ ಇಂದಿನ ಸಾಮಾಜಿಕ ಜನಜೀವನದ ಬದುಕಿನ ಚಿತ್ರಣ ದರ್ಬಾರ್‌ನಲ್ಲಿದೆ ಎನ್ನುತ್ತಾರೆ. ನೋಟ್‌ ಬಂದ್‌ ಆದ ಬಳಿಕದ ಸಂಗತಿಯೂ ಇಲ್ಲಿ ಕಾಣಿಸಲಿದೆ ಎಂಬ ಮಾತೂ ಇದೆ. ಅಂತೂ, ಕರಾವಳಿಯಲ್ಲಿ ಸೆಟ್ಟೇರಲಿರುವ ಹೊಸ ಸಿನೆಮಾ “ದರ್ಬಾರ್‌’ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು ಸತ್ಯ.

-ದಿನೇಶ್‌ ಇರಾ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.