ಕದ್ರಿಯ ಜಿಂಕೆ ಪಾರ್ಕ್‌ನಲ್ಲಿ ಸಂಗೀತ ಕಾರಂಜಿ ವೈಭವ

Team Udayavani, Apr 19, 2017, 12:39 AM IST

Karanji-18-4.jpg

ಕದ್ರಿ: ಕದ್ರಿಯ ಜಿಂಕೆ ಪಾರ್ಕ್‌ ಎಂದೇ ಖ್ಯಾತಿಯಾಗಿದ್ದ ಹಳೆ ಮೃಗಾಲಯದಲ್ಲಿ ಇನ್ನು ಮುಂದೆ ಸಂಗೀತ ಕಾರಂಜಿಯ ಝಗಮಗಿಸುವಿಕೆ ಶುರುವಾಗಲಿದೆ. ಬಹುತೇಕ ಎಪ್ರಿಲ್‌ ಅಂತ್ಯಕ್ಕೆ ಸಂಗೀತ ಕಾರಂಜಿಯು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ. ಸಂಗೀತ ಕಾರಂಜಿಯಲ್ಲಿ ನೀರಿನ ನರ್ತನದ ಜತೆಗೆ ಲೇಸರ್‌ ಪ್ರದರ್ಶನದ ಮೂಲಕ ಜಿಲ್ಲೆಯ ಇತಿಹಾಸವನ್ನು ಪ್ರದರ್ಶಿಸಲು ಯೋಜನೆ ರೂಪಿಸಲಾಗಿದೆ. ಅದರ ಪ್ರಯೋಗವನ್ನು ಸೋಮವಾರ ಶಾಸಕ ಜೆ. ಆರ್‌. ಲೋಬೋ ಅವರೊಂದಿಗೆ ಮೇಯರ್‌ ಕವಿತಾ ಸನಿಲ್‌, ಮುಡಾ ಆಯುಕ್ತ ಶ್ರೀಕಾಂತ್‌ ರಾವ್‌, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಯೋಗೀಶ್‌ ಮತ್ತಿತರರ ಸಮ್ಮುಖದಲ್ಲಿ ನಡೆಸಲಾಯಿತು. ಸುಮಾರು 30 ನಿಮಿಷಗಳ ಪ್ರಾಯೋಗಿಕ ಪ್ರದರ್ಶನಕ್ಕೆ ಮುನ್ನ ಜಿಲ್ಲಾಧಿಕಾರಿ ಡಾ| ಕೆ. ಜಿ. ಜಗದೀಶ್‌ ಅಧ್ಯಕ್ಷತೆಯಲ್ಲಿ ಸಂಗೀತ ಕಾರಂಜಿಯ ನಿರ್ವಹಣೆ ಕುರಿತಂತೆ ಪರಿಶೀಲನೆ ಸಭೆ ನಡೆಯಿತು. 

ಶಾಸಕ ಜೆ.ಆರ್‌. ಲೋಬೋ ಅವರ ಮುತುವರ್ಜಿಯಲ್ಲಿ ಎರಡು ವರ್ಷಗಳ ಹಿಂದೆ ಸಂಗೀತ ಕಾರಂಜಿ ನಿರ್ಮಾಣದ ರೂಪುರೇಷೆ ಸಿದ್ಧಗೊಂಡಿತ್ತು. ಈಗ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಹಳೆ ಜಿಂಕೆ ಪಾರ್ಕನ್ನು ಅಭಿವೃದ್ಧಿಪಡಿಸಿ ಅಲ್ಲಿ ಸಂಗೀತ ಕಾರಂಜಿ, ಲೇಸರ್‌ ಪ್ರದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ. ಯಕ್ಷಗಾನ, ಭೂತಾರಾಧನೆ ಹಾಗೂ ಜಿಲ್ಲೆಯ ಇತರ ಸಂಸ್ಕೃತಿಗೆ ಪೂರಕವಾದ ಅಂಶಗಳನ್ನು ಈ ಸಂಗೀತ ಕಾರಂಜಿ ಪಾರ್ಕ್‌ ಪ್ರತಿಬಿಂಬಿಸಲಿದೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಂಗೀತ ಪಾರ್ಕ್‌ ಇರುವಂತೆಯೇ, ಮಂಗಳೂರಿನ ಈ ಪಾರ್ಕ್‌ಗೆ ರಾಜೀವ ಗಾಂಧಿ ಸಂಗೀತ ಪಾರ್ಕ್‌ ಹೆಸರನ್ನು ಅಂತಿಮಗೊಳಿಸಲಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.