ಭತ್ತದ ತಳಿ ಸಂರಕ್ಷಣೆಗೆ ಬತ್ತದ ಉತ್ಸಾಹ

110 ದೇಸೀ ಭತ್ತದ ತಳಿ ಸಂರಕ್ಷಿಸಿದ ರೈತ ಬಾಬಾಲಾಲ್‌

Team Udayavani, Jan 5, 2020, 5:51 AM IST

babulal-1

ಆಧುನಿಕತೆಯ ನಾಗಾಲೋಟದಲ್ಲಿ ಪಾರಂಪರಿಕ ಕೃಷಿ, ತಳಿಗಳ ವೈವಿಧ್ಯತೆಗಳನ್ನು ನಾವು ಬಹುತೇಕ ಮರೆತು ಬಿಟ್ಟಿದ್ದೇವೆ. ಆದರೆ ಇಲ್ಲೊಬ್ಬರು ಸಾಂಪ್ರದಾಯಿಕ ಕೃಷಿ ಮಹತ್ವವನ್ನು ಸಾರುವುದರೊಂದಿಗೆ ಅಪರೂಪದ ಭತ್ತದ ತಳಿ ಸಂರಕ್ಷಣೆಗೆ ಟೊಂಕಕಟ್ಟಿದ್ದಾರೆ.

ಬಾಬುಲಾಲ್‌ ದಹಿಯಾ (72) ಅವರು ಮಧ್ಯಪ್ರದೇಶದ ಸತ್ನ ಜಿಲ್ಲೆಯ ಮೈಹಾರ್‌ ಎಂಬ ಪುಟ್ಟ ಗ್ರಾಮದಲ್ಲಿ ಕೃಷಿಯ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುತ್ತಿರುವ ರೈತ. ಇವರು ಅಪ್ರತಿಮ ಕಲಾಪ್ರೇಮಿಯೂ ಹೌದು. ಆದರೆ ಇವರಿಗೆ ಹೆಸರು ಪ್ರಖ್ಯಾತಿ ತಂದು ಕೊಟ್ಟಿದ್ದು ಕೃಷಿ ಕ್ಷೇತ್ರ. ಕಳೆದ 15 ವರ್ಷಗಳಿಂದ ಕೇವಲ 2 ಎಕರೆ ಜಾಗದಲ್ಲಿ 110 ವಿಭಿನ್ನ ಬಗೆಯ ದೇಸೀ ಭತ್ತದ ತಳಿಗಳ ಸಂರಕ್ಷಣೆಯೊಂದಿಗೆ ಬೆಳೆಯನ್ನೂ ಬೆಳೆದು ಸೈ ಎನಿಸಿಕೊಂಡಿದ್ದಾರೆ.

ಕಲೆಯಿಂದ ಪ್ರಕೃತಿಯ ಮಡಿಲಿಗೆ
ಬಾಬುಲಾಲ್‌ಗೆ ಕಥೆ, ಬರವಣಿಗೆ, ಹಾಡು ವುದು ಎಂದರೆ ಅಚ್ಚುಮೆಚ್ಚು. ಬಾಲ್ಯದಿಂದಲೇ ಅತ್ಯಂತ ಕ್ರಿಯಾಶೀಲರಾಗಿದ್ದ ಇವರಿಗೆ ಸಾಹಿತ್ಯದ ಕುರಿತು ಎಲ್ಲಿಲ್ಲದ ಒಲವು. ಅವರಲ್ಲಿನ ಬರಹದ ನೈಪುಣ್ಯತೆ ನವಭಾರತ್‌ ಟೈಮ್ಸ್‌ ನ ಹೆಸರಾಂತ ಅಂಕಣಕಾರನ್ನಾಗಿ ಮಾಡಿತ್ತು. ಜಾನಪದ ಕಲೆ ಬಗ್ಗೆ ಇರುವ ಒಲವು ಸಾಂಪ್ರ ದಾಯಿಕ ಕೃಷಿಯನ್ನು ಉಳಿಸಬೇಕು ಎನ್ನುವ ಕಡೆ ಹೊರಳಿತ್ತು. ದೇಶಿಯ ಸಂಸ್ಕೃತಿಯ ಮತ್ತೂಂದು ಭಾಗವಾಗಿರುವ ವೈವಿಧ್ಯಮಯ ಸಾಂಪ್ರದಾಯಿಕ ಬೆಳೆಗಳನ್ನು ರಕ್ಷಿಸಬೇಕೆಂಬ ಅವರ ಹಂಬಲ ಕಾರ್ಯರೂಪ ಪಡೆದುಕೊಂಡಿತ್ತು. ಅದರ ಫ‌ಲವಾಗಿ ಇಂದು ಬಾಬು ಲಾಲ್‌ 2 ಎಕರೆ ಭೂಮಿಯಲ್ಲಿ 110ಕ್ಕೂ ಹೆಚ್ಚು ದೇಶಿಯ ಭತ್ತದ ಬೆಳೆಗಳನ್ನು ಬೆಳೆದಿದ್ದಾರೆ.

6 ಎಕರೆಗಳಲ್ಲಿ 100 ಬಗೆಯ ದ್ವಿದಳ ಧಾನ್ಯಗಳು
6 ಎಕರೆಗಳಲ್ಲಿ, ಬಾಬುಲಾಲ್‌ 100 ಬಗೆಯ ದ್ವಿದಳ ಧಾನ್ಯಗಳು ಮತ್ತು ತರಕಾರಿಗಳನ್ನು ಬೆಳೆದಿದ್ದಾರೆ. 2005ರಿಂದ ವಿವಿಧ ಬಗೆಯ ತಳಿ ಗಳನ್ನು ಸಂಗ್ರಹಿಸುತ್ತಾ ಬಂದಿರುವ ಬಾಬು ಲಾಲ್‌ ದೇಶದ ಮೂಲೆ ಮೂಲೆಗೂ ತೆರಳಿ ಅಲ್ಲಿನ ಸಾಂಪ್ರದಾಯಿಕ ಬೆಳೆಗಳ ಬಗ್ಗೆ ತಿಳಿದು ಕೊಳ್ಳುವು ದರೊಂದಿಗೆ ಅವುಗಳ ಬೀಜಗಳನ್ನು ಸಂಗ್ರಹಿಸಿ ತಮ್ಮ ಜಮೀನಿನಲ್ಲಿ ಬೆಳೆಯುವ ಮೂಲಕ ಅವುಗಳ ಸಂರಕ್ಷಣೆಯಲ್ಲಿ ತೊಡಗಿದ್ದಾರೆ.

ರಾಸಾಯನಿಕ ಬಳಕೆಯಿಲ್ಲ
ಸುಮಾರು 8 ಎಕರೆಗಳಲ್ಲಿ ಕಳೆದ 15 ವರ್ಷಗಳಿಂದ ಕೃಷಿ ಮಾಡುತ್ತಿರುವ ಬಾಬುಲಾಲ್‌ ಇದುವರೆಗೂ ಯಾವುದೇ ರಾಸಾಯನಿಕಗಳನ್ನು ಸಿಂಪಡಿಸುತ್ತಿಲ್ಲ. ಸಂಪೂರ್ಣ ಸಾವಯವ ವಿಧಾನದಲ್ಲೇ ಅವರು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರ ಅಪ್ರತಿಮ ಕೃಷಿ ಕಾರ್ಯಕ್ಕೆ ಪದ್ಮಶ್ರೀ ಪ್ರಶಸ್ತಿಯೂ ಸಿಕ್ಕಿದೆ.

ನಿರಂತರವಾಗಿ ಸಂರಕ್ಷಿಸುತ್ತೇನೆ
ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳಿದ್ದವು. ಈಗ ಅವುಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದೆ. ಇವುಗಳ ಪೈಕಿ ಸದ್ಯ ನಾನು 110 ಪ್ರಭೇದಗಳನ್ನು ಸಂಗ್ರಹಿಸಿದ್ದೇನೆ, ಮುಂಬರುವ ದಿನಗಳಲ್ಲಿ ಈ ಪ್ರವೃತ್ತಿಯನ್ನು ಮುಂದುವರಿಸಿಕೊಂಡು ಹೋಗುವ ಇರಾದೆ ನನ್ನಲ್ಲಿದ್ದು, ನಿರಂತರವಾಗಿ ಬೆಳೆಗಳನ್ನು ಸಂರಕ್ಷಿಸುತ್ತೇನೆ.
-ಬಾಬುಲಾಲ್‌

-ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.