ಪ್ರೇಮಾ ರಾಮಪ್ಪ ನಡಪಟ್ಟಿ


Team Udayavani, Oct 22, 2018, 12:57 PM IST

22-october-10.gif

ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಜಾಣ್ಮೆಯಿಂದ ಎದುರಿಸುವ ಕಲೆ ಕರಗತ ಮಾಡಿಕೊಂಡರೆ ಯಾವುದು ಕೂಡ ಅಸಾಧ್ಯವಲ್ಲ ಎಂಬುವುದಕ್ಕೆ ಪ್ರೇಮಾ ರಾಮಪ್ಪ ನಡಪಟ್ಟಿ ಉತ್ತಮ ಉದಾಹರಣೆ. ಪತಿಯ ನಿಧನದ ಅನಂತರ 11 ವರ್ಷದ ಮಗನನ್ನು ಸಾಕುವ ಹೊಣೆ ನನ್ನ ಮೇಲೆ ಬಿತ್ತು. ಮಗನ ಭವಿಷ್ಯದ ದೃಷ್ಟಿಯಿಂದ ನನಗೆ ಒಂದು ಕೆಲಸ ಅನಿವಾರ್ಯವಾಯಿತು. ಈ ಸಂದರ್ಭ ನನ್ನ ಕೈ ಹಿಡಿದದ್ದು ಬಿಎಂಟಿಸಿ ಬಸ್‌ ಡ್ರೈವರ್‌ ಕೆಲಸ ಎಂದು ಹೆಮ್ಮೆಯಿಂದಲೇ ತಮ್ಮ ಜೀವನದ ಬಗ್ಗೆ ಹೇಳಿಕೊಳ್ಳುತ್ತಾರೆ ಪ್ರೇಮಾ ರಾಮಪ್ಪ ನಡಪಟ್ಟಿ.

ಪ್ರೇಮಾ ರಾಮಪ್ಪ ನಡಪಟ್ಟಿ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಭೈರ್ನಡ್ಡಿಯವರು. ಜೀವನದಲ್ಲಿ ಬರುವ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದರೆ ಎಂತಹ ಕಷ್ಟಗಳನ್ನೂ ಸುಲಭವಾಗಿ ಮೆಟ್ಟಿ ನಿಲ್ಲಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ. ನರ್ಸ್‌ ಕೆಲಸ ಮಾಡಿಕೊಂಡಿದ್ದ ಇವರ ಬಳಿ ನಾಲ್ಕು ಚಕ್ರ ವಾಹನ ಚಾಲನೆಯ ಪರವಾನಿಗೆಯಿತ್ತು. ಆದರೆ ಇದಾವುದರ ಗೋಜಿಗೆ ಹೋಗದ ಅವರನ್ನು ಪತಿಯ ನಿಧನ ಸಂಕಷ್ಟದ ಪರಿಸ್ಥಿತಿಗೆ ತಂದು ನಿಲ್ಲಿಸಿತ್ತು. ಇಂತಹ ಪರಿಸ್ಥಿತಿಯಲ್ಲಿಯೂ ಧೃತಿಗೆಡದ ಪ್ರೇಮಾ ಅವರು ಬಿಎಂಟಿಸಿಗೆ ಕೆಲಸಕ್ಕಾಗಿ ಅರ್ಜಿ ಹಾಕಿದ್ದರು. ಅವರಿಗೆ ಅಲ್ಲಿ ಕೆಲಸವೂ ದೊರೆಯಿತು. ತಿಂಗಳುಗಳ ಕಾಲ ತರಬೇತಿಯ ಬಳಿಕ ರೂಟ್‌ ನಂ. 171ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಈ ಮೂಲಕ 2009ರ ವೇಳೆಗೆ ಬಿಎಂಟಿಸಿಯಲ್ಲಿ ಕೆಲಸ ಮಾಡುವ ಮೊದಲ ಮಹಿಳಾ ಬಸ್‌ ಚಾಲಕಿ ಎಂಬ ಬಿರುದಿಗೆ ಪ್ರೇಮಾ ಪಾತ್ರರಾದರು.

ಇದಾದ ಕೆಲ ದಿನಗಳ ಬಳಿಕ ಬೇರೆ ಆರು ಮಂದಿ ಮಹಿಳೆಯರು ಬಿಎಂಟಿಸಿಗೆ ಡ್ರೈವರ್‌/ ಕಂಡಕ್ಟರ್‌ ಆಗಿ ಆಯ್ಕೆಯಾದರೂ ಕೂಡ ಅವರು ಆಯ್ದುಕೊಂಡದ್ದು ಮಾತ್ರ ಕಂಡಕ್ಟರ್‌ ಕೆಲಸವನ್ನು. ಇದರಿಂದಾಗಿ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳಾ ನೌಕರರು ದುಡಿದರೂ ಮಹಿಳಾ ಚಾಲಕಿ ಎಂಬ ಹೆಗ್ಗಳಿಕೆ ಮಾತ್ರ ಇವರಲ್ಲಿಯೇ ಉಳಿಯಿತು. ಅನಿವಾರ್ಯ ಸಂದರ್ಭಗಳಲ್ಲಿ ಅವಧಿಗೂ ಹೆಚ್ಚು ಕೆಲಸ, ಬಹಳ ಸುರಕ್ಷಿತವಾದ ಬಸ್‌ ಚಾಲನೆ, ಸದಾ ನಗುಮೊಗ ಮುಂತಾದ ಗುಣಗಳಿಗೆ ಹೆಸರಾಗಿದ್ದ ಪ್ರೇಮಾ ಪ್ರಯಾಣಿಕರ ಅಚ್ಚುಮೆಚ್ಚಿನ ಬಸ್‌ ಚಾಲಕಿ ಕೂಡ ಹೌದು. ಕಷ್ಟಗಳು ಬಂತೆಂದಾಗ ಆಕಾಶವೇ ತಲೆ ಮೇಲೆ ಬಿತ್ತೆಂದು ಕುಳಿತುಕೊಳ್ಳುವ ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಮಾದರಿ ಈ ಗಟ್ಟಿಗಿತ್ತಿ.

 ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.