ಬೆಳ್ಳಾರೆ ಬಸ್‌ ನಿಲ್ದಾಣಕ್ಕೆ ಕೊನೆಗೂ ದುರಸ್ತಿ ಭಾಗ್ಯ

Team Udayavani, Apr 2, 2019, 11:56 AM IST

3103BLUM1
ಬೆಳ್ಳಾರೆ : ಬೆಳೆಯುತ್ತಿರುವ ಬೆಳ್ಳಾರೆ ಪಟ್ಟಣದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿರುವ ಬೆಳ್ಳಾರೆ ಬಸ್‌ ನಿಲ್ದಾಣಕ್ಕೆ ಕೊನೆಗೂ ದುರಸ್ತಿ ಭಾಗ್ಯ ದೊರೆತಿದೆ. ಟಿ.ಸಿ. ಕೊಠಡಿ ತೆರವು ಮಾಡಿ ಪ್ರಯಾಣಿಕರ ವಿಶ್ರಾಂತಿ ಕೊಠಡಿಯನ್ನು ವಿಸ್ತರಿಸಿ, ಟೈಲ್ಸ್‌ ಅಳವಡಿಸುವುದೂ ಸಹಿತ ಬಣ್ಣ ಬಳಿದು ಬಸ್‌ ನಿಲ್ದಾಣವನ್ನು ನವೀಕರಿಸಲಾಗಿದೆ. ಪುತ್ತೂರು ಸುಳ್ಯ ತಾಲೂಕಿನ ಪ್ರಮುಖ ಕೇಂದ್ರಗಳಿಗೆ ಸಂಪರ್ಕ ಕೊಂಡಿಯಾಗಿರುವ ಬೆಳ್ಳಾರೆಗೆ ನಿತ್ಯ ಸಾವಿರಾರು ಪ್ರಯಾಣಿಕರು ಬರುತ್ತಾರೆ.
 ಬಹುತೇಕ ಜನ ಸರಕಾರಿ ಬಸ್‌ಗಳನ್ನೇ ಅವಲಂಬಿಸಿರುವುದರಿಂದ ಬಸ್‌ ನಿಲ್ದಾಣದಲ್ಲಿ ಕಾಯುವುದು ಸಾಮಾನ್ಯವಾಗಿದೆ. ಈಗ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ವಿಶ್ರಾಂತಿ ಕೊಠಡಿ ವಿಸ್ತರಿಸಿ ಟೈಲ್ಸ್‌ ಅಳವಡಿಸಿ ಆಸನದ ವ್ಯವಸ್ಥೆ ಮಾಡಲಾಗಿದೆ. ಸಂಚಾರ ನಿಯಂತ್ರಕರ ಕೊಠಡಿಯನ್ನೂ ನವೀಕರಿಸಲಾಗಿದೆ. ಸುಮಾರು 4.5 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿ ನಡೆಸಲಾಗಿದ್ದು, ಬಸ್‌ ನಿಲ್ದಾಣದ ಎದುರಿನ ಚರಂಡಿಗೆ ಮೋರಿ ಹಾಗೂ ಇಂಟರ್‌ಲಾಕ್‌ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ.
ಇನ್ನೂ ಆಗಬೇಕಿದೆ ವ್ಯವಸ್ಥೆ ಬಸ್‌ ನಿಲ್ದಾಣದ ನವೀಕರಣ ಕಾರ್ಯ ನಡೆದರೂ ನಿಲ್ದಾಣದಲ್ಲಿ ಬಸ್‌ ನಿಲ್ಲಲು ಸ್ಥಳಾವಕಾಶದ ಕೊರತೆ ಎದ್ದು ಕಾಣುತ್ತಿದೆ. ಪ್ರಯಾಣಿಕರಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆಆಗಬೇಕಿದೆ. ಇಲ್ಲಿ ರಾತ್ರಿಯ ವರೆಗೂ ಬಸ್‌ ಸಂಚಾರವಿದ್ದರೂ ಸಂಚಾರ ನಿಯಂತ್ರಕರು ಸಂಜೆ ವೇಳೆಯಲ್ಲಿ ಹಾಗೂ ರವಿವಾರ ಬಾಗಿಲು ಹಾಕಿ ತೆರಳುವುದರಿಂದ ಪ್ರಯಾಣಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಇಲಾಖೆ ಗಮನ ಹರಿಸಬೇಕಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸಮಸ್ಯೆಗಳು ಜೀವಂತ
ಬೆಳ್ಳಾರೆ ಗ್ರಾ.ಪಂ. ವತಿಯಿಂದ 12 ವರ್ಷಗಳ ಹಿಂದೆ ಬಸ್‌ ನಿಲ್ದಾಣ ನಿರ್ಮಿಸಲಾಗಿತ್ತಾದರೂ ಇಲ್ಲಿನ ಸಮಸ್ಯೆಗಳು ಜೀವಂತವಾಗಿಯೇ ಇತ್ತು. ಬಸ್‌ ನಿಲ್ದಾಣದಲ್ಲಿ ದಿನಪ್ರಂತಿ ನೂರಾರು ಬಸ್‌ ಪ್ರಯಾಣಿಕರು ವಿಶ್ರಾಂತಿ ಪಡೆದು ಪ್ರಯಾಣ ಮಾಡುತ್ತಾರೆ. ಆದರೆ ಕಿರಿದಾದ ವಿಶ್ರಾಂತಿ ಕೊಠಡಿ ನಿರ್ವಹಣೆ ಇಲ್ಲದ ಬಸ್‌ ನಿಲ್ದಾಣ ಸಮಸ್ಯೆಯಾಗಿ ಪರಿಣಮಿಸಿತ್ತು. ಈ ಬಗ್ಗೆ “ಉದಯವಾಣಿ’ ಈ ಹಿಂದೆಯೇ ವರದಿ ಮಾಡಿತ್ತು.
 ಇನ್ನೂ ಅಭಿವೃದ್ಧಿ ಆಗಲಿದೆ
ಇದ್ದ ಅನುದಾನದಲ್ಲಿ ಬಸ್‌ ನಿಲ್ದಾಣದ ನವೀಕರಣ ಕಾರ್ಯ ನಡೆಸಲಾಗಿದ್ದು, ಇಂಟರ್‌ಲಾಕ್‌ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಬಸ್‌ ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲಿ ಫ್ಯಾನ್‌, ಮೊಬೈಲ್‌ ಚಾರ್ಜರ್‌ ವ್ಯವಸ್ಥೆ ಮಾಡಲಾಗುವುದು. ಪ್ರಯಾಣಿಕರಿಗೆ ಕುಡಿಯುವ ನೀರು ಸೇರಿದಂತೆ ಬಸ್‌ ತೆರಳುವ ಸಮಯದ ವೇಳಾಪಟ್ಟಿ ಅಳವಡಿಸಲಾಗುವುದು. ಮುಂದೆ ಸಂತೆ ಮಾರುಕಟ್ಟೆಯನ್ನು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಿ ಬಸ್‌ ನಿಲ್ದಾಣ ವಿಸ್ತರಿಸಲಾಗುವುದು.
 - ಧನಂಜಯ್‌ ಕೆ.ಆರ್‌., ಗ್ರಾ.ಪಂ. ಪಿಡಿಒ
ಉಮೇಶ್‌ ಮಣಿಕ್ಕಾರ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.