ವಯಸ್ಸು ಮರೆಮಾಚಲು ತೆಂಗಿನೆಣ್ಣೆ

Team Udayavani, Oct 22, 2019, 4:19 AM IST

ಎಲ್ಲರಿಗೂ ಒಂದಲ್ಲ ಒಂದು ದಿನ ವಯಸ್ಸಾಗುತ್ತದೆ ಅದನ್ನು ತಡೆಯಲು ಪ್ರತಿದಿನ ಹಲವಾರು ರೀತಿಯ ಕಸರತ್ತನ್ನು ಮಾಡುತ್ತಲೇ ಇರುತ್ತೇವೆ. ಅದಕ್ಕಿಂತ ಸುಲಭವಾಗಿ ಮನೆಯಲ್ಲೇ ಸಿಗುವ ತೆಂಗಿನೆಣ್ಣೆಯಿಂದ ಮುಖದಲ್ಲಿ ಮೂಡುವ ನೆರಿಗೆ ಹಾಗೂ ಗೆರೆಗಳನ್ನು ನಿವಾರಿಸಬಹುದು.

ಚರ್ಮಕ್ಕೆ ಪೋಷಣೆ ನೀಡಲು ತೆಂಗಿನೆಣ್ಣೆ ಅದ್ಭುತವಾದ ಸಾಮಗ್ರಿಯಾಗಿದ್ದು ಚರ್ಮವನ್ನು ಮೋಶ್ಚರೈಸ್‌ ಆಗಿ ಇರಲು ಸಹಾಯ ಮಾಡುತ್ತದೆ. ಅದಲ್ಲದೆ ಇದು ಚರ್ಮವನ್ನು ತೇವಾಂಶದಿಂದ ಕೂಡಿರುವಂತೆ ಮಾಡಿ ನಯ ಹಾಗೂ ಸುಂದರವಾಗಿಸುವುದು. ಇದರಲ್ಲಿರುವಂತಹ ಆ್ಯಂಟಿ ಆಕ್ಸಿಡೆಂಟ್‌ ಗುಣಗಳು ಫ್ರೀ ಯಾರ್ಡಿಕಲ್‌ ವಿರುದ್ಧ ಹೋರಾಡುವುದು ಮತ್ತು ನೆರಿಗೆ ಹಾಗೂ ಗೆರೆಗಳ ನಿವಾರಣೆ ಮಾಡಿ, ಚರ್ಮಕ್ಕೆ ಪುನಶ್ಚೇತನ ನೀಡುವುದು. ಇದು ಚರ್ಮದಲ್ಲಿನ ಕೊಲಾಜಿನ್‌ ಉತ್ಪತ್ತಿಯನ್ನು ಹೆಚ್ಚಿಸಿ ನೆರಿಗೆ ನಿವಾರಣೆ ಮಾಡುತ್ತದೆ.

ಸ್ನಾನಕ್ಕೆ ತೆಂಗಿನೆಣ್ಣೆ
ಪ್ರತಿದಿನ ಸ್ನಾನ ಮಾಡುವ ಅರ್ಧ ಗಂಟೆ ಮೊದಲು ಮುಖಕ್ಕೆ ತೆಂಗಿನ ಎಣ್ಣೆ ಹಚ್ಚಿಕೊಂಡು ಅನಂತರ ಸ್ನಾನ ಮಾಡುವುದರಿಂದ ಮುಖ ನಯವಾಗಿರುವುದಲ್ಲದೆ ಒರಟಾಗುವುದನ್ನು ತಡೆಯುತ್ತದೆ. ತೆಂಗಿನ ಎಣ್ಣೆಯ ಜತೆಗೆ ಹರಳೆಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ರಾತ್ರಿ ಮಲಗುವಾಗ ಹಚ್ಚಿಕೊಂಡು 15 ನಿಮಿಷ ಚೆನ್ನಾಗಿ ಮಸಾಜ್‌ ಮಾಡಿಕೊಳ್ಳಿ ಅನಂತರ ಬೆಳಗ್ಗೆ ಎದ್ದ ಅನಂತರ ಮುಖ ತೊಳೆಯಿರಿ. ಇದು ನೆರಿಗೆ ನಿವಾರಣೆ ಮಾಡಲು ಸಹಾಯ ಮಾಡುತ್ತದೆ.

ಜೇನುತುಪ್ಪ ಮತ್ತು ತೆಂಗಿನೆಣ್ಣೆ ಮಿಶ್ರಣ ಚರ್ಮದ ಆರೋಗ್ಯಕ್ಕೆ ಪೂರಕ. ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇರುವುದರಿಂದ ಇದು ಚರ್ಮದ ರಕ್ಷಣೆ ಮಾಡುತ್ತದೆ. ಮತ್ತು ಪುನಶ್ಚೇತನ ನೀಡುತ್ತದೆ. ಅದಲ್ಲದೆ ತೆಂಗಿನೆಣ್ಣೆಯಲ್ಲಿ ವಿಟಮಿನ್‌ ಇ ಇರುವುದರಿಂದ ಚರ್ಮದ ರಕ್ಷಣೆ ಮತ್ತು ಪೋಷಣೆ ಮಾಡುವುದಲ್ಲದೆ ಆರೋಗ್ಯಕಾರಿ ಚರ್ಮ ನಿಮ್ಮದಾಗಲು ಸಹಾಯ ಮಾಡುತ್ತದೆ. ತೆಂಗಿನೆಣ್ಣೆಗೆ ಅರಿಶಿನ ಸೇರಿಸುವುದರಿಂದ ಕೊಲಾಜಿನ್‌ ಉತ್ಪತ್ತಿಗೆ ನೆರವಾಗುತ್ತದೆ. ಇದರಿಂದ ಚರ್ಮದ ಸ್ಥಿತಿಸ್ಥಾಪಕತ್ವ ಉತ್ತಮವಾಗುತ್ತದೆ ಮತ್ತು ಅದು ಚರ್ಮವನ್ನು ಬಿಗಿಗೊಳಿಸುತ್ತದೆ. ಇದರಿಂದ ನೆರಿಗೆ ನಿವಾರಣೆಗೆ ಸಹಾಯವಾಗುತ್ತದೆ.

- ಪ್ರೀತಿ ಭಟ್‌ ಗುಣವಂತೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮರೆವು ಒಂದು ರೀತಿಯ ಮೆದುಳಿನ ನ್ಯೂನತೆ. ಭೌತಿಕ ಅಥವಾ ಮಾನಸಿಕ ಆಘಾತದಿಂದ ಉಂಟಾಗುವ ರೋಗವಿದು. ಮನಸ್ಸಿಗೆ ತೀವ್ರ ರೀತಿಯ ಆಘಾತವಾದಾಗ ಅದರಿಂದ ಘಾಸಿಯಾಗಿ ಜ್ಞಾಪಕ...

  • ಸಾಮಾನ್ಯವಾಗಿ ಹುಡುಗಿಯರಷ್ಟೇ ಸೌಂದರ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ ಎಂಬ ಮಾತಿದೆ. ಅಂತೆಯೇ ಪುರುಷರು ಕೂಡ ಇತ್ತೀಚೆಗೆ ಹೆಚ್ಚು ಸೌಂದರ್ಯ ಕಾಳಜಿ ವಹಿಸುತ್ತಿರುವುದು...

  • ನಮ್ಮ ಮನೆಯ ಅಡುಗೆ ಮನೆಯಲ್ಲಿ ಹಲವಾರು ಔಷಧ ಗುಣಗಳಿರುವ ಮತ್ತು ಆರೋಗ್ಯದಾಯಕ ವಸ್ತುಗಳಿವೆ. ಅವುಗಳ ಪ್ರಯೋಜನವನ್ನು ತಿಳಿದು ಬಳಸಿದರೆ ರೋಗ ನಿಯಂತ್ರಣಕಾರಿಯಾಗಿ...

  • ಉಪ್ಪು ಆಹಾರ ತಯಾರಿಕೆಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆಹಾರ ಎಷ್ಟೇ ಚೆನ್ನಾಗಿದ್ದರೂ ಉಪ್ಪಿನಂಶಇಲ್ಲದಿದ್ದರೆ ಅದರ ರುಚಿ ಕೆಟ್ಟು ಹೋಗುತ್ತದೆ. ಉಪ್ಪು...

  • ಆಫೀಸ್‌ನಲ್ಲಿ ಒಂದೇ ಕಡೆ ಕುಳಿತು ಕೆಲಸ ಮಾಡುತ್ತಿದ್ದೀರಾ?ಹಾಗಾದರೆ ಕೆಲವೊಮ್ಮೆ ಸೊಂಟ ನೋವು, ಕುತ್ತಿಗೆ ನೋವು ಕಾಡಿದ ಅನುಭವ ನಿಮಗೂ ಆಗಿರಬಹುದಲ್ಲ?ಇದಕ್ಕೇನು...

ಹೊಸ ಸೇರ್ಪಡೆ