ಅರಿಶಿನ ಟೀ ನಿಮಗೆಷ್ಟು ಗೊತ್ತು ?

Team Udayavani, Jan 21, 2020, 5:49 AM IST

ಅರಿಶಿನವು ಹಲವು ಕಾಯಿಲೆಗಳಿಗೆ ಮದ್ದು. ಹೀಗಾಗಿ ಆಯುರ್ವೇದದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ನಾವು ಸಾಮಾನ್ಯವಾಗಿ ಲೆಮನ್‌ ಟೀ, ಪುದೀನಾ ಟೀ ಸಹಿತ ಇನ್ನಿತರ ಮಾದರಿಯ ಟೀ ಗಳನ್ನು ಕುಡಿದಿರುತ್ತೇವೆ. ಅದರಲ್ಲಿ ಈಗ ಅರಿಶಿನ ಟೀ ಕೂಡ ಸೇರಿಸಿಕೊಳ್ಳಿ.

ಅರಿಶಿನ ಟೀ ಮಾಡಲು 3- 4 ಕಪ್‌ ನೀರನ್ನು ಬಿಸಿ ಮಾಡಿ ಅದಕ್ಕೆ 2 ಚಮಚ ಅರಿಶಿನ ಹುಡಿಯನ್ನು ಸೇರಿಸಿ 5ರಿಂದ 10 ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ. ಬಳಿಕ ಸೋಸಿ ಅಗತ್ಯವಿದ್ದಷ್ಟು ಜೇನುತುಪ್ಪ, ನಿಂಬೆ ಅಥವಾ ಕಿತ್ತಳೆ ಹಣ್ಣಿನ ಜ್ಯೂಸ್‌ ಬೇಕಿದ್ದರೆ ಬಾದಾಮಿ ಹಾಲು ಅಥವಾ ತೆಂಗಿನ ಹಾಲು ಸೇರಿಸಿ ಕುಡಿಯಬಹುದು. ಅರಸಿನ ಟೀ ಕುಡಿಯುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ.
– ಮಧ್ಯ ವಯಸ್ಸಿನಲ್ಲಿ ಕಾಡುವ ಸಂಧಿ ವಾತವನ್ನು ತಡೆಗಟ್ಟುವಲ್ಲಿ ಅರಿಶಿನ ಟೀ ಪ್ರಯೋಜನಕಾರಿಯಾಗಿದೆ.
– ಅರಿಶಿನವು ಕ್ಯಾನ್ಸರ್‌ ವಿರುದ್ಧ ಹೋರಾಡುತ್ತದೆ. ದೇಹವನ್ನು ಚೈತನ್ಯ ಶೀಲ ಗೊಳಿಸುತ್ತದೆ ಎಂಬುದು ಸಂಶೋಧನೆ ಯಿಂದ ತಿಳಿದು ಬಂದಿದೆ.
– ರಕ್ತದೊತ್ತಡ ಹೆಚ್ಚಾದಾಗ ಹೃದಯಾ ಘಾತವಾಗುವ ಸಾಧ್ಯತೆ ಇರುತ್ತದೆ. ಆದರೆ ಅರಿಶಿನ ಟೀ ರಕ್ತದೊತ್ತಡವನ್ನು ನಿಯಂತ್ರಣ ಮಾಡುವುದರಿಂದ ಹೃದಯದ ಆರೋಗ್ಯಕ್ಕೂ ಇದು ಲಾಭದಾಯಕವಾಗಿದೆ.
– ಅನಾರೋಗ್ಯಕರ ಜೀವನ ಶೈಲಿ ಮತ್ತು ಆಹಾರ ಸೇವನೆಯಿಂದ ಕಿಡ್ನಿ ಸಮಸ್ಯೆ ಉಂಟಾಗುತ್ತದೆ. ಅರಿಶಿನ ಟೀಯು ಕಿಡ್ನಿಯ ಹಲವು ತೊಂದರೆಗಳಿಗೆ ಔಷಧವಾಗಿದೆ.
– ಅರಿಶಿನ ಟೀ ಸೇವನೆಯಿಂದ ಮಧು ಮೇಹವನ್ನೂ ನಿಯಂತ್ರಣದಲ್ಲಿ ಇರಿಸಬಹುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹವಾಮಾನ ಬದಲಾವಣೆಯಿಂದ ಆರೋಗ್ಯದಲ್ಲಾಗುವ ಏರುಪೇರಿನ ಜತೆಗೆ ಕೆಲವೊಂದು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಉತ್ತಮ ಆರೋಗ್ಯಕ್ಕೆ ಡ್ರ್ಯಾಗನ್‌...

  •   ಬಿಸಿಲಿನ ತಾಪಮಾನ ಏರಿಕೆಯಿಂದಾಗಿ ಸಾಮಾನ್ಯವಾಗಿ ಹಲವು ಚರ್ಮ ಸಂಬಂಧಿ ರೋಗಗಳು ಹುಟ್ಟಿಕೊಳ್ಳುತ್ತಿವೆ. ಚರ್ಮ ತುರಿಕೆ, ಹಿಮ್ಮಡಿ ಒಡೆಯುವುದು ಸಹಿತ ಹಲವು...

  • ಮದುವೆ ಒತ್ತಡದಲ್ಲಿ ವಧು ಸೌಂದರ್ಯದ ಕಡೆ ಗಮನ ಹರಿಸಲು ಮರೆತು ಬಿಡುತ್ತಾಳೆ. ಆದರೆ ಮದುವೆ ಇನ್ನೇನು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ನೀವು ಬ್ಯೂಟಿ ಪಾರ್ಲರಿಗೆ...

  • ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಲ್ಲಿ ಅನೇಕ ಔಷಧ ಗುಣಗಳಿವೆ. ಬಿಲ್ವಪತ್ರೆ ಚರ್ಮರೋಗ, ಬಾಯಿಹುಣ್ಣು, ಕೂದಲು ಉದುರುವಿಕೆ ಮೊದಲಾದ ಅನೇಕ ಸಮಸ್ಯೆಗಳಿಗೆ ರಾಮಬಾಣ....

  • ನೀವು ಜಿಮ್‌ಗೆ ಹೋಗಬೇಕು ಅಂದುಕೊಂಡಿರುತ್ತೀರಿ. ನಾಳೆಯಿಂದ ಹೋಗೋಣ ಎಂದು ನಿರ್ಧರಿಸಿ ಮಲಗಿರುತ್ತೀರಿ. ಆದರೆ ಮಾರನೇ ದಿನವೇ ಎಚ್ಚರವಾದಾಗ ಇವತ್ತು ಬೇಡ ನಾಳೆ...

ಹೊಸ ಸೇರ್ಪಡೆ