ಮಾವಿನ ಎಲೆಯಲ್ಲೂ ಔಷಧೀಯ ಗುಣ


Team Udayavani, Aug 6, 2019, 7:05 AM IST

mavina-ele

ಮಾವು ಎಂದರೆ ಎಲ್ಲರಿಗೂ ಇಷ್ಟ. ಎಪ್ರಿಲ್‌, ಮೇಯಲ್ಲಿ ಮಾವಿಗೆ ಎಲ್ಲಿಲ್ಲದ ಬೇಡಿಕೆ. ಹಬ್ಬ ಹರಿದಿನಗಳಲ್ಲಿ ಮಾವಿನ ಎಲೆಯನ್ನು ತೋರಣವಾಗಿ ಬಳಕೆ ಮಾಡುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಇದರಲ್ಲಿರುವ ಆರೋಗ್ಯ ಗುಣ ಜನಸಾಮಾನ್ಯರಿಗೆ ತಿಳಿದಿಲ್ಲ. ಹಿಂದೆ ಹಲ್ಲಿನ ಆರೋಗ್ಯಕ್ಕೆ ಮಾವಿನ ಎಲೆಯ ಕಡ್ಡಿ ಒಳ್ಳೆಯದು ಎಂಬ ಕಾರಣಕ್ಕೆ ಅದನ್ನು ಹಲ್ಲುಜ್ಜಲು ಬಳಸುತ್ತಿದ್ದರು. ಅಂತೆಯೇ ಮಾವಿನ ಎಲೆ ಕೂಡ ಆರೋಗ್ಯಕ್ಕೆ ಪೂರಕವಾಗಿದೆ.

ಮಾವಿನ ಎಲೆ ವಿಟಮಿನ್‌ ಎ, ಬಿ, ಸಿ, ತಾಮ್ರದ ಅಂಶ, ಪೊಟ್ಯಾಷಿಯಂ ಹಾಗೂ ಮೆಗ್ನೇಷಿಯಂ ಪೋಷಕಾಂಶಗಳ ಜತೆಗೆ ಬಹಳಷ್ಟು ಔಷಧ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲಿ ಇದರ ಕಷಾಯ ಸೇವನೆ ಕುರಿತಾಗಿ ಹೇಳಲಾಗಿದೆ. ಮಾವಿನ ಎಲೆಯನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಮರುದಿನ ಆ ನೀರನ್ನು ಸೇವಿಸಿದರೆ ಅಧಿಕ ರಕ್ತದೊತ್ತಡ ಹಾಗೂ ಮಾನಸಿಕ ಒತ್ತಡದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಆರೋಗ್ಯ ಪ್ರಯೋಜನಗಳು
- ಬಿಸಿ ನೀರಿಗೆ ಮಾವಿನ ಎಲೆಯನ್ನು ಹಾಕಿ ಸ್ನಾನ ಮಾಡುವುದರಿಂದ ಚರ್ಮ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.

- ಮಾವಿನ ಎಲೆ ಕಷಾಯಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿದರೆ ಶ್ವಾಸಕೋಶ ಸಂಬಂಧಿ ಸಮಸ್ಯೆ , ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಲು ಸಹಕಾರಿ

- ಚಿಗುರು ಮಾವಿನ ಎಲೆಯ ಕಷಾಯ ಸೇವನೆಯಿಂದ ಕೆಮ್ಮು, ಗಂಟಲು ನೋವು ಕಡಿಮೆಯಾಗುತ್ತದೆ.

- ಹೊಟ್ಟೆ ಸಂಬಂಧಿ ಸಮಸ್ಯೆ ನಿವಾರಣೆಗೂ ಇದು ಸಹಾಯಕ. ರಾತ್ರಿ ಬಿಸಿಯಾದ ನೀರಿಗೆ ಮಾವಿನ ಎಲೆಯನ್ನು ಹಾಕಿ ಮರುದಿನ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ಹೊಟ್ಟೆ ಸಂಬಂಧಿ ಸಮಸ್ಯೆ ನಿವಾರಣೆಯಾಗುತ್ತದೆ.

- ಸುಟ್ಟ ಕಲೆಗಳು ಹೋಗದಿದ್ದಲ್ಲಿ ಮಾವಿನ ಎಲೆಯನ್ನು ಸುಟ್ಟು ಅದರ ಬೂದಿಯನ್ನು ಸುಟ್ಟ ಕಲೆಯ ಮೇಲೆ ಹಚ್ಚಿದರೆ ಕಲೆ ನಿವಾರಣೆಯಾಗುತ್ತದೆ.

- ರಕ್ತಭೇದಿ ಉಂಟಾದಾಗ ಮಾವಿನ ಎಲೆಯನ್ನು ಒಣಗಿಸಿ ಅದರ ಪುಡಿಯಿಂದ ಚಹಾ ತಯಾರಿಸಿ 3 ದಿನ ಸೇವಿಸಿದರೆ ಉಪಶಮನವಾಗುತ್ತದೆ.

- ಎಲೆಯ ರಸವನ್ನು ಮಂದ ಬಿಸಿಮಾಡಿ ಕಿವಿಗೆ ಹಾಕಿದರೆ ಕಿವಿ ನೋವು ನಿವಾರಣೆಯಾಗುತ್ತದೆ.

- ಮಾವಿನ ಎಲೆಯ ಚಹಾ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದ್ದು, ಜ್ವರ , ಅಸ್ತಮಾ, ಉಬ್ಬಿರುವ ರಕ್ತನಾಳ ಮತ್ತು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ಒಳ್ಳೆಯ ಔಷಧವಾಗಿದೆ.

- ಮಾವಿನ ಎಲೆ ಪುಡಿಯನ್ನು ನಿತ್ಯ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

-  ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.