ಸಕಾರಾತ್ಮಕವಾಗಿ ಚಿಂತಿಸಿ ಆರೋಗ್ಯ ಕಾಪಾಡಿಕೊಳ್ಳಿ

Team Udayavani, Sep 10, 2019, 5:07 AM IST

ನಮ್ಮ ಜೀವನವು ನಮ್ಮ ಕೈಯಲ್ಲಿದೆ. ನಾವು ಎಲ್ಲಿದ್ದರೂ, ಹೇಗಿದ್ದರೂ ನಮ್ಮ ಜೀವನದಲ್ಲಿ ನಾವು ಪ್ರಜ್ಞಾಪೂರ್ವಕವಾಗಿ ಆಲೋಚನೆಗಳನ್ನು ಸಕಾರಾತ್ಮಕವಾಗಿ ಆಯ್ಕೆ ಮಾಡಲು ಪ್ರಾರಂಭಿಸಿದರೆ, ನಾವು ಬದಲಾಗಬಹುದು. ಪ್ರತಿಯೊಂದು ಸಂದರ್ಭಗಳಲ್ಲಿ ಸಕಾರಾತ್ಮಕವಾಗಿ ಚಿಂತಿಸುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ನಾವು ಸಂಪೂರ್ಣವಾಗಿ ಹೊಸ ಪ್ರಪಂಚವನ್ನು ಅನುಭವಿಸಬಹುದು. ಸಕಾರಾತ್ಮಕ ಯೋಜನೆಗಳು ನಮ್ಮ ಆರೋಗ್ಯಕರ ಜೀವನಕ್ಕೂ ಸಹಕಾರಿಯಾಗಿವೆ.

ಮನುಷ್ಯನೆಂದ ಮೇಲೆ ಸುಖ, ದು:ಖ, ಧೈರ್ಯ, ಭಯ, ಕೋಪ, ಪ್ರೀತಿ, ದ್ವೇಷ, ತೃಪ್ತಿ -ಅತೃಪ್ತಿ , ಕೀಳರಿಮೆ ಅಹಂಕಾರ ಇದ್ದೇ ಇರುತ್ತದೆ. ಕಷ್ಟ -ನೋವು ಮತ್ತು ಲಾಭ- ನಷ್ಟದ ಜತೆಗೆ ಸೋಲು- ಗೆಲುವು ಮತ್ತು ಯಶಸ್ಸು ನಿರಾಶೆಗಳೂ ಇದೆ. ಈ ನಕಾರಾತ್ಮಕ ಭಾವನೆಗಳನ್ನು ಸರಿಯಾಗಿ ನಿಭಾಯಿಸದಿದ್ದರೆ ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇವುಗಳಿಂದ ಹೊರಬರಲು ಸಕಾರಾತ್ಮಕ ಚಿಂತನೆಯೇ ದಾರಿ. ಸಣ್ಣಪುಟ್ಟ ಸಂಗತಿಗಳಿಗೆ. ಅನುಕೂಲತೆಗಳಿಗೆ ಸಂತೋಷಪಡಿ. ನಕಾರಾತ್ಮಕ ಆಲೋಚನೆಗಳನ್ನು ಹಾಗೂ ಅನುಭವಗಳನ್ನು ಬದಲಿಸಿ ಸಕಾರಾತ್ಮಕವಾಗಿ ಆಶಾವಾದಿಯಾಗಿ ಯೋಚಿಸಿ ಮತ್ತು ಕಾರ್ಯಪ್ರವೃತ್ತರಾಗಿ ವಾಸ್ತವಿಕತೆಯನ್ನು , ಸತ್ಯವನ್ನು ಒಪ್ಪಿಕೊಳ್ಳಿ ಮತ್ತು ಅದಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸಿ. ಎಲ್ಲರಿಗೆ ಪ್ರೀತಿ , ವಾತ್ಸಲ್ಯ, ಸ್ನೇಹವನ್ನು ಕೊಡಿ. ನಾನು ಏನೂ ಅಲ್ಲ ನಾನೇ ಎಲ್ಲಾ ಎಂಬುವುದನ್ನು ಬಿಟ್ಟು ನನ್ನಿಂದಲೂ ಸಾಧ್ಯವಿದೆ ಎಂದು ಮುಂದುವರಿಯುವುದೇ ಸಕಾರಾತ್ಮಕ ಚಿಂತನೆ. ಈ ಸಕಾರಾತ್ಮಕ ಮನೋಭಾವನೆ ಕುರಿತು ಮಕ್ಕಳಲ್ಲೂ ಅರಿವು ಮೂಡಿಸಬೇಕು.

ಸಕಾರಾತ್ಮಕ ಚಿಂತನೆಯ ಪ್ರಭಾವಗಳು
·  ಆತ್ಮವಿಶ್ವಾಸ ಹೆಚ್ಚಿಸುವುದು
·  ಮಾನಸಿಕ ಒತ್ತಡ ಕಡಿಮೆಯಾಗುವುದು
·  ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಲು
·  ಸಂಶೋಧನೆಗಳ ಪ್ರಕಾರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
·  ಸುದೀರ್ಘ‌ ಮತ್ತು ಸಂತೋಷದ ಜೀವನವನ್ನು ಅನುಭವಿಸಬಹುದು.
·  ಶಾಂತ ಚಿತ್ತ ಮನಸ್ಸು ಮತ್ತು ನಿದ್ರೆ
·  ನಾವು ಸಕಾರಾತ್ಮಕವಾಗಿ ಯೋಚಿಸಿದಾಗ ನಮ್ಮ ಮಿದುಳಿನಿಂದ ಎಂಡಾರ್ಫಿನ್‌ ಎಂಬ ಹಾರ್ಮೋನ್‌ ಅನ್ನು ಬಿಡುಗಡೆ ಮಾಡುತ್ತದೆ. ಅದು ನಮ್ಮ ದೇಹದ ಉತ್ತಮ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.

-  ಡಾ| ರೇಷ್ಮಾ ಭಟ್‌, ಬೆಂಗಳೂರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮರೆವು ಒಂದು ರೀತಿಯ ಮೆದುಳಿನ ನ್ಯೂನತೆ. ಭೌತಿಕ ಅಥವಾ ಮಾನಸಿಕ ಆಘಾತದಿಂದ ಉಂಟಾಗುವ ರೋಗವಿದು. ಮನಸ್ಸಿಗೆ ತೀವ್ರ ರೀತಿಯ ಆಘಾತವಾದಾಗ ಅದರಿಂದ ಘಾಸಿಯಾಗಿ ಜ್ಞಾಪಕ...

  • ಸಾಮಾನ್ಯವಾಗಿ ಹುಡುಗಿಯರಷ್ಟೇ ಸೌಂದರ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ ಎಂಬ ಮಾತಿದೆ. ಅಂತೆಯೇ ಪುರುಷರು ಕೂಡ ಇತ್ತೀಚೆಗೆ ಹೆಚ್ಚು ಸೌಂದರ್ಯ ಕಾಳಜಿ ವಹಿಸುತ್ತಿರುವುದು...

  • ನಮ್ಮ ಮನೆಯ ಅಡುಗೆ ಮನೆಯಲ್ಲಿ ಹಲವಾರು ಔಷಧ ಗುಣಗಳಿರುವ ಮತ್ತು ಆರೋಗ್ಯದಾಯಕ ವಸ್ತುಗಳಿವೆ. ಅವುಗಳ ಪ್ರಯೋಜನವನ್ನು ತಿಳಿದು ಬಳಸಿದರೆ ರೋಗ ನಿಯಂತ್ರಣಕಾರಿಯಾಗಿ...

  • ಉಪ್ಪು ಆಹಾರ ತಯಾರಿಕೆಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆಹಾರ ಎಷ್ಟೇ ಚೆನ್ನಾಗಿದ್ದರೂ ಉಪ್ಪಿನಂಶಇಲ್ಲದಿದ್ದರೆ ಅದರ ರುಚಿ ಕೆಟ್ಟು ಹೋಗುತ್ತದೆ. ಉಪ್ಪು...

  • ಆಫೀಸ್‌ನಲ್ಲಿ ಒಂದೇ ಕಡೆ ಕುಳಿತು ಕೆಲಸ ಮಾಡುತ್ತಿದ್ದೀರಾ?ಹಾಗಾದರೆ ಕೆಲವೊಮ್ಮೆ ಸೊಂಟ ನೋವು, ಕುತ್ತಿಗೆ ನೋವು ಕಾಡಿದ ಅನುಭವ ನಿಮಗೂ ಆಗಿರಬಹುದಲ್ಲ?ಇದಕ್ಕೇನು...

ಹೊಸ ಸೇರ್ಪಡೆ