ಫ‌ಲ್ಗುಣಿ ನದಿ ಸ್ವಚ್ಛವಾಗಲಿ

Team Udayavani, Sep 30, 2018, 12:53 PM IST

30-sepctember-10.gif

ಒಂದೆಡೆ ಸ್ವಚ್ಛ ಭಾರತ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದರೆ, ಬುದ್ಧಿವಂತರ ಜಿಲ್ಲೆ ಎಂದು ಗುರುತಿಸಿ ಕೊಂಡಿರುವ ಮಂಗಳೂರಿನಲ್ಲಿ ಕಸದ ಸಮಸ್ಯೆಗೆ ಮುಕ್ತಿ ದೊರಕಿಲ್ಲ. ಪ್ರವಾಸಿಗರು ಆಗಮಿಸುತ್ತಿರುವ, ಸದಾ ಸ್ವಚ್ಛವಾಗಿರಬೇಕಾಗಿದ್ದ ನಗರದ ಸುಲ್ತಾನ್‌ ಬತ್ತೇರಿ ಬಳಿ ಇರುವ ಫ‌ಲ್ಗುಣಿ ನದಿ ದಡವೀಗ ಕಲುಷಿತಗೊಂಡಿದೆ. ನದಿಯ ತುಂಬೆಲ್ಲ ಕಸ, ಪ್ಲಾಸ್ಟಿಕ್‌ ಬಾಟಲಿಗಳ ಸಹಿತ ಕಾರ್ಖಾನೆಗಳ ತ್ಯಾಜ್ಯ ನೀರು ನದಿಯನ್ನು ಸೇರುತ್ತಿದೆ.ಮತ್ತೊಂದೆಡೆ ಇದೇ ನೀರನ್ನು ದೈನಂದಿನ ಕೆಲಸ ಕಾರ್ಯಗಳಿಗೆ ಹೆಚ್ಚಿನ ಮಂದಿ ಉಪಯೋಗಿಸುತ್ತಿದ್ದಾರೆ. 

ಒಂದು ಕಾಲದಲ್ಲಿ ಮೈದುಂಬಿ ಹರಿಯುತ್ತಿದ್ದ ಫ‌ಲ್ಗುಣಿ ನದಿ ಈಗ ಸಂಪೂರ್ಣ ಕಲುಷಿತಗೊಂಡಿದ್ದು ಸುತ್ತಮುತ್ತಲಿನ ಮಂದಿ ಮೂಗುಮುಚ್ಚಿಕೊಂಡು ಓಡಾಡುವಂತಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳಿಗೂ ಇದು ಕಾರಣ ಆಗುತ್ತಿದೆ.

ನಗರದ ಕೂಳೂರು, ತೋಕೂರು, ಮೇಲ್‌ಕೊಪ್ಪಲು, ಅತ್ರೆಬೈಲು, ಮರವೂರು ಸಹಿತ ಸುತ್ತಮುತ್ತಲಿನ ಅನೇಕ ಭಾಗದ ಜನರು ಈ ನೀರನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇದೇ ಕಾರಣಕ್ಕೆ ಈ ನದಿಗೆ ಮರವೂರಿನಲ್ಲಿ ಅಣೆಕಟ್ಟು ನಿರ್ಮಿಸಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲಾಗುತ್ತಿದೆ. ಇಲ್ಲಿನ ತೋಕೂರು ಹಳ್ಳವಂತೂ ಸಂಪೂರ್ಣ ಮಲಿನಗೊಂಡಿದ್ದು, ಇದರಿಂದಾಗಿ ಸ್ಥಳೀಯರು ತರಕಾರಿ ಬೆಳೆ ಬೆಳೆಯುವುದನ್ನು ನಿಲ್ಲಿಸಿದ್ದಾರೆ.

ಈ ನದಿಯಲ್ಲಿ ಕೆಲವು ವರ್ಷಗಳ ಹಿಂದೆ ಮೀನುಗಳು ಯಥೇಚ್ಛವಾಗಿ ಸಿಗುತ್ತಿತ್ತು. ಆದರೆ ಕೊಳೆತ ತ್ಯಾಜ್ಯಗಳು, ಕಾರ್ಖಾನೆಯ ತ್ಯಾಜ್ಯದಿಂದ ಕೂಡಿದ ನೀರು ನದಿಗೆ ಸೇರುತ್ತಿರುವುದರಿಂದ ನದಿಯಲ್ಲಿರುವ ಜಲಚರಗಳೂ ಸಾವನ್ನಪ್ಪುತ್ತಿವೆ. ರಾತ್ರಿ ಹೊತ್ತಿನಲ್ಲಿ ಕೆಲವರು ಕೂಳೂರು ಸೇತುವೆಯಿಂದ ನದಿಗೆ ತ್ಯಾಜ್ಯಗಳನ್ನು ಹಾಕುತ್ತಿದ್ದಾರೆ. ಹೀಗಾಗಿ ತ್ಯಾಜ್ಯ ಹಾಕುವವರನ್ನು ತಡೆಯಲು ಸಂಬಂಧಪಟ್ಟವರು ಗಮನಹರಿಸಿ ಕಠಿನ ಕ್ರಮಕೈಗೊಳ್ಳಬೇಕು ಹಾಗೂ ನದಿ ಸ್ವಚ್ಛತೆ ಗಾಗಿಯೂ ಆಡಳಿತ ವರ್ಗ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕಿದೆ.

. ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.