ಸೇಟ್‌ಬ್ಯಾಂಕ್  ಬಸ್‌ನಿಲ್ದಾಣಕ್ಕೆ  ಹೈಟೆಕ್‌ ಟಚ್‌ ಸಿಗಲಿ


Team Udayavani, Nov 18, 2018, 2:47 PM IST

18-november-10.gif

ನಗರದ ಕೇಂದ್ರ ಸ್ಥಾನವಾದ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಇದೀಗ ಅವ್ಯವಸ್ಥೆಯಿಂದ ಮತ್ತು ಅಪಾಯದಿಂದ ಕೂಡಿದೆ. ಒಂದೆಡೆ ನಿಲ್ದಾಣಕ್ಕೆ ಹಾಸಿದ ಶೀಟುಗಳು ತೂತಾದರೆ ಮತ್ತೊಂದೆಡೆ ಅಲ್ಲೇ ಪಕ್ಕದಲ್ಲಿರುವ ವಿದ್ಯುತ್‌ ಬಾಕ್ಸ್‌ ಬಾಯ್ದೆರೆದುಕೊಂಡಿದ್ದು, ಸಾರ್ವಜನಿಕರಿಗೆ ಅಪಾಯ ಸೂಚಿಸುತ್ತಿದೆ. ಇಷ್ಟಾದರೂ, ಸಂಬಂಧಪಟ್ಟ ಇಲಾಖೆ ಕಣ್ಮುಚ್ಚಿ ಕುಳಿತಿದೆ.

ಹೆಚ್ಚಿನ ಭಾಗಗಳಿಗೆ ಸಂಚಾರ ಆರಂಭವಾಗುವುದು ಸ್ಟೇಟ್‌ಬ್ಯಾಂಕ್‌ನಿಂದ. ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಕಾಲಿಡುತ್ತಿದ್ದಂತೆ ದುರ್ನಾತ, ರಸ್ತೆಯ ಗುಂಡಿಗಳು, ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌, ಸಾರ್ವಜನಿಕ ಸ್ಥಳದಲ್ಲೇ ಮೂತ್ರ ವಿಸರ್ಜನೆ ಹೀಗೆ ಇಲ್ಲಿನ ಸಮಸ್ಯೆಗಳು ನೂರಾರು. ಆಡಳಿತ ವ್ಯವಸ್ಥೆ ಕಂಡರೂ ಕಾಣದಂತೆ ಮೌನವಾಗಿದೆ. ಖಾಸಗಿ ಬಸ್‌ ನಿಲ್ದಾಣಕ್ಕೆ ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ಹೊರ ಜಿಲ್ಲೆಯ ಜನರು ಆಗಮಿಸುತ್ತಿದ್ದು, ಸ್ವಚ್ಛ  ಮಂಗಳೂರು ಪರಿಕಲ್ಪನೆ ಮಾಯವಾಗಿದೆ.

ಸ್ವಚ್ಛತೆಯನ್ನು ಕಡೆಗಣಿಸಲಾಗಿದೆ. ಎಲ್ಲೆಂದರಲ್ಲಿ ಕಸಕಡ್ಡಿಗಳನ್ನು ಎಸೆಯಲಾಗುತ್ತಿದೆ. ಬಸ್‌ ನಿಲ್ದಾಣದ ಬಳಿ ಶೌಚಾಲಯದ ವ್ಯವಸ್ಥೆ ಇದ್ದರೂ ಬಸ್‌ ಸಿಬಂದಿ ಸೇರಿದಂತೆ ಸಾರ್ವಜನಿಕರು ಇದರ ಉಪಯೋಗ ಪಡೆಯುತ್ತಿಲ್ಲ.

ಬಸ್‌ ನಿಲ್ದಾಣದ ಒಳಭಾಗದಲ್ಲಿರುವ ಛಾವಣಿ ಸಮರ್ಪಕ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದ ಸ್ಥಿತಿಯಲ್ಲಿದೆ. ಅದರೊಂದಿಗೆ ಬಸ್ಸಿಗಾಗಿ ಕಾಯುವ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲ. ಇರುವ ಆಸನದಲ್ಲಿ ಕೆಲವರು ಮಲಗಿಕೊಂಡಿರುತ್ತಾರೆ. ಇದರಿಂದ ಮುದುಕರು ಹಾಗೂ ಮಗುವನ್ನು ಹಿಡಿದು ನಿಲ್ಲುವ ಮಹಿಳೆಯರಿಗೆ ಕಷ್ಟವಾಗುತ್ತಿದೆ.

ಬಸ್‌ ನಿಲ್ದಾಣದ ಒಳಗೆ ಜನರು ತುಂಬಿಸಿಕೊಂಡ ಬಸ್ಸುಗಳು ಅಲ್ಲಲ್ಲಿ ನಿಂತು ಜನರನ್ನು ಹತ್ತಿಸಿಕೊಳ್ಳುವ ಕಾರಣ ಬಸ್‌ ನಿಲ್ದಾಣದ ಹೊರಭಾಗದಲ್ಲಿ ದಿನನಿತ್ಯ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿದೆ. ಕಮಿಷನರ್‌ ಕಚೇರಿ ಮುಂಭಾಗದ ರಸ್ತೆ, ಲೇಡಿಗೋಷನ್‌ ರಸ್ತೆ, ಸ್ಟೇಟ್‌ಬ್ಯಾಂಕ್‌-ಬೇಬಿ ಅಲಾಬಿ ರಸ್ತೆ, ಸ್ಟೇಟ್‌ಬ್ಯಾಂಕ್‌ -ಹೊಗೆಬಜಾರ್‌ ರಸ್ತೆ, ಸ್ಟೇಟ್‌ಬ್ಯಾಂಕ್‌-ಬಂದರು ರಸ್ತೆ, ಸ್ಟೇಟ್‌ಬ್ಯಾಂಕ್‌-ನೆಲ್ಲಿಕಾಯಿ ರಸ್ತೆ ಸೇರಿದಂತೆ ಉಳಿದ ಭಾಗಗಳಲ್ಲಿ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿದೆ.

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.