ರಸ್ತೆ ದುರಸ್ತಿ ಶೀಘ್ರವಾಗಲಿ

Team Udayavani, Nov 24, 2019, 4:47 AM IST

mm-18

ಇಲ್ಲಿಯವರೆಗೆ ನಗರಾಡಳಿತದಲ್ಲಿ ಜನಪ್ರತಿನಿಧಿಗಳಿರಲಿಲ್ಲ ಮತ್ತು ಮಳೆಗಾಲದ ಕಾರಣಕ್ಕೆ ನಗರದ ಅಭಿವೃದ್ಧಿ ಸ್ಥಗಿತಗೊಂಡಿತ್ತು. ಆದರೆ ಈಗ ಚುನಾವಣೆ ನಡೆದು ಫಲಿತಾಂಶವೂ ಹೊರಬಿದ್ದು, ಆಡಳಿತ ವ್ಯವಸ್ಥೆಗೆ ಹೊಸ ದಿಕ್ಕು ಸಿಕ್ಕಿದೆ. ಹಾಗಾಗಿ ಆಡಳಿತ ವ್ಯವಸ್ಥೆಯಡಿ ಅಭಿವೃದ್ಧಿ ಕಾಮಗಾರಿಗಳಿಗೂ ವೇಗ ಸಿಗಬೇಕಿದೆ.

ನಗರದಲ್ಲಿ ಪ್ರಮುಖವಾಗಿ ಆಗಬೇಕಾದದ್ದು ರಸ್ತೆಗಳ ಅಭಿವೃದ್ಧಿ. ಒಳ ರಸ್ತೆಗಳು ಮಾತ್ರವಲ್ಲ ಮುಖ್ಯ ರಸ್ತೆಗಳು ಕೂಡ ಹೊಂಡಗುಂಡಿಯಿಂದ ಕೂಡಿವೆ. ನಂತೂರು ಸರ್ಕಲ್‌ ಬಳಿಯ ರಸ್ತೆಯ ಸ್ಥಿತಿ ಹೇಳ ತೀರದಾಗಿದೆ. ಸರ್ಕಲ್‌ ಸುತ್ತಲೂ ತುಂಬಿದ ಹೊಂಡ-ಗುಂಡಿಗಳಿಂದಾಗಿ ವಾಹನ ಸಂಚಾರವೇ ದುಸ್ಸಾಹಸವೆಂಬಂತಾಗಿದೆ. ನಂತೂರಿನಿಂದ ಬಿಕರ್ನಕಟ್ಟೆಗೆ ತೆರಳುವ ರಸ್ತೆಯಲ್ಲಿ ಸರ್ಕಲ್‌ ಮುಂದೆ ರಸ್ತೆ ಎದ್ದು ಹೋಗಿ ಸಂಚಾರ ದುಸ್ತರವಾಗಿದೆ. ಇನ್ನು ಬಿಕರ್ನಕಟ್ಟೆಯಿಂದ ಕುಲಶೇಖರದವರೆಗಿನ ಮುಖ್ಯರಸ್ತೆ ದೇವರಿಗೇ ಪ್ರೀತಿ. ಇದು ಕಿರಿದಾದ ರಸ್ತೆಯಾಗಿರುವುದರಿಂದ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುವುದು ತೀರಾ ಸಮಸ್ಯೆಯಾಗಿ ಪರಿಣಮಿಸಿದೆ. ಎದುರಿನಿಂದ ಬರುವ ವಾಹನಗಳಿಗೆ ಸೈಡ್‌ ಕೊಡಲು ಹೋದಾಗ ಸ್ವಲ್ಪ ಎಚ್ಚರ ತಪ್ಪಿದರೂ ಕೆಳಗಿನ ಗುಂಡಿಗೆ ಬೀಳುವ ಸಾಧ್ಯತೆ ಇದೆ. ದ್ವಿಚಕ್ರ ವಾಹನ ಸವಾರರಿಗೆ ಈ ರಸ್ತೆ ನರಕ ಮಯವಾಗಿ ಪರಿಣಮಿಸಿದೆ.

ಇನ್ನು ನಗರದ ಒಳ ರಸ್ತೆಗಳೂ ಇದೇ ರೀತಿ ಹೊಂಡಗುಂಡಿಗಳಿಂದ ತುಂಬಿದ್ದು ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಆಡಳಿತ ವ್ಯವಸ್ಥೆಯಡಿ ಹೊಸದಾಗಿ ಆಯ್ಕೆಗೊಂಡ ಜನಪ್ರತಿನಿಧಿಗಳು ಮೊದಲಾಗಿ ಮಾಡಬೇಕಾದದ್ದು ಸುಗಮ ಸಂಚಾರ ವ್ಯವಸ್ಥೆಗೆ ಗುಟ್ಟದ ರಸ್ತೆಗಳ ನಿರ್ಮಾಣ.

ಎತ್ತರ ತಗ್ಗು
ಇನ್ನು ಕೆಲವು ಮುಖ್ಯ ರಸ್ತೆಗಳು ಸಂಚಾರಕ್ಕೆ ಸರಿಯಾಗಿದ್ದರೂ, ರಸ್ತೆಗಳಲ್ಲಿರುವ ಉಬ್ಬು-ತಬ್ಬುಗಳು ಗಮನಕ್ಕೆ ಬಾರದೇ ಅಪಾಯಗಳಾಗುವ ಸಂಭವವಿದೆ. ಉರ್ವಸ್ಟೋರ್‌ನಿಂದ ಲೇಡಿಹಿಲ್‌ಗೆ ಬರುವ ಮಾರ್ಗದಲ್ಲಿ ಉರ್ವಸ್ಟೋರ್‌ ಬಸ್‌ ಸ್ಟಾಂಡ್‌ ಬಳಿ ಕಾಂಕ್ರೀಟ್‌ ರಸ್ತೆ ಎತ್ತರ ತಗ್ಗು ಇದ್ದು ದ್ವಿಚಕ್ರ ವಾಹನ ಸವಾರರು ತಿಳಿಯದೇ ತೊಂದರೆ ಅನುಭವಿಸುವಂತಾಗಿದೆ. ಇದೇ ರಸ್ತೆಯಲ್ಲಿ ಚಿಲಿಂಬಿ ಬಳಿಯೂ ಇದೇ ರೀತಿ ಎತ್ತರ ತಗ್ಗು ಇದ್ದು, ಒಮ್ಮೆಗೆ ಅಧಿಕ ಜಂಪ್‌ ಆದ ಅನುಭವವಾಗುತ್ತದೆ. ಮುಂದೆ ಎಂ.ಜಿ. ರಸ್ತೆಯಲ್ಲಿಯಲ್ಲಿಯೂ ಇದೇ ರೀತಿಯಲ್ಲಿ ರಸ್ತೆ ಎತ್ತರ ತಗ್ಗು ಇದೆ. ಇಲ್ಲಿ ಒಮ್ಮೆ ರಿಪೇರಿ ಮಾಡಿಸಲಾಗಿತ್ತಾದರೂ ಮತ್ತೆ ಅದೇ ರೀತಿ ಎತ್ತರ ತಗ್ಗು ಇದ್ದು ಸಮಸ್ಯೆ ಉಂಟಾಗುತ್ತಿದೆ.

ಸಾರ್ವಜನಿಕರಿಗೆ ಎಲ್ಲ ಮೂಲಸೌಲಭ್ಯ ಕಲ್ಪಿಸಿಕೊಡುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು, ರಸ್ತೆ ವ್ಯವಸ್ಥೆಯನ್ನೂ ಸಮರ್ಪಕ ರೀತಿಯಲ್ಲಿ ಮಾಡಿಕೊಡುವತ್ತ ಗಮನ ಹರಿಸಬೇಕು.

- ಡಿಬಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.