ಅಂಗಡಿ ಬದಿಗಳ ರಸ್ತೆ ಕಸ ಮುಕ್ತವಾಗಲಿ

Team Udayavani, Oct 13, 2019, 4:57 AM IST

e-12

ಮಂಗಳೂರು ನಗರವು ಶುಚಿತ್ವಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡ ನಗರವಾಗಿದೆ. ಆದರೆ, ನಗರದ ಒಳಹೊಕ್ಕು ನೋಡಿದರೆ, ಅಲ್ಲಲ್ಲಿ ಕಸದ ರಾಶಿ ಇನ್ನೂ ಗೋಚರಿಸುವುದು ಸ್ಪಷ್ಟ. ಪ್ರಮುಖವಾಗಿ ಸಣ್ಣ ಪುಟ್ಟ ಅಂಗಡಿಗಳ ಎದುರು ಅನಗತ್ಯವಾಗಿರುವ ಕಸಗಳನ್ನು ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಎಸೆಯುವುದನ್ನು ಕಾಣಬಹುದು. ಪ್ಲಾಸ್ಟಿಕ್‌ನಲ್ಲಿ ಪ್ಯಾಕ್‌ ಮಾಡಲಾಗಿರುವ ವಸ್ತುಗಳನ್ನು ತಿಂದು ಅಲ್ಲಲ್ಲಿಯೇ ಬಿಸಾಡುವುದರಿಂದ ಮಣ್ಣಿನಲ್ಲಿ ಕೊಳೆತು ಹೋಗದೆ, ಹಾಗೇ ಉಳಿದು ಬಿಡುತ್ತದೆ. ಇದರಿಂದ ನಗರದ ಸೌಂದರ್ಯಕ್ಕೂ ಧಕ್ಕೆಯಾಗುತ್ತದೆ. ಮುಖ್ಯರಸ್ತೆಗಳ ಬದಿಯಲ್ಲೇ ಇರುವ ಹಲವಾರು ಅಂಗಡಿಗಳ ಎದುರಿನ ರಸ್ತೆ ಬದಿಗಳಲ್ಲಿ ಈ ರೀತಿ ಕಸ ಎಸೆಯುವುದನ್ನು ಕಾಣಬಹುದು.

ಪ್ರಮುಖವಾಗಿ ಆಯಾ ಅಂಗಡಿಯವರು ತಮ್ಮ ಅಂಗಡಿಗಳಲ್ಲಿ ಗ್ರಾಹಕರು ಕಸ ಹಾಕಲು ಪೂರಕವಾಗುವಂತೆ ಡಸ್ಟ್‌ಬಿನ್‌ಗಳನ್ನು ಇಡಬೇಕು. ಪಾಲಿಕೆಯೂ ಹೀಗೆ ಕಸ ಎಸೆಯುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಡಸ್ಟ್‌ಬಿನ್‌ ಇಟ್ಟು ಕಸವನ್ನು ಅದಕ್ಕೆ ಹಾಕುವಂತೆ ಎಲ್ಲ ಅಂಗಡಿ ಮಾಲಕರಿಗೆ ಸೂಚಿಸಿದೆ. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದೆ. ಆದರೆ, ಈ ಹೇಳಿಕೆ ಕೇವಲ ಹೇಳಿಕೆಯಾಗಿ ಉಳಿಯದೆ, ಕಸ ಎಸೆಯುವವರ ಮೇಲೆ ಕಠಿನ ಕ್ರಮ ಕೈಗೊಂಡರಷ್ಟೇ ಸುಧಾರಣೆ ಸಾಧ್ಯವಾಗುತ್ತದೆ.

ಹೆದ್ದಾರಿ ಸುಧಾರಣೆಯಾಗಲಿ

ಮಂಗಳೂರಿನಿಂದ ಪುತ್ತೂರಿಗೆ ತೆರಳುವ ರಸ್ತೆಯಲ್ಲಿ ಮಾಣಿವರೆಗಿನ ರಸ್ತೆ ದುಃಸ್ಥಿತಿಯಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್‌ ಜಾಂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಜನಸಾಮಾನ್ಯರಿಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪರಿಸ್ಥಿತಿ ಅಯ್ಯೋ ಎನಿಸದೆ ಇರದು. ಬಿಸಿಲಿನಲ್ಲಿ ಕಾದ ಕಬ್ಬಿಣದಂತಾದ ಹೊಂಡ ಗುಂಡಿ ರಸ್ತೆಯಲ್ಲಿ ಟ್ರಾಫಿಕ್‌ ಜಾಂ ನಡುವೆ ಸಿಕ್ಕಿ ಹಾಕಿಕೊಳ್ಳಬೇಕಾದ ಸ್ಥಿತಿ ಜನಸಾಮಾನ್ಯರದ್ದಾಗಿದೆ. ಕಳಪೆ ರಸ್ತೆ ಕಾಮಗಾರಿಯಿಂದಾಗಿ ಮಳೆಗಾಲದಲ್ಲಿ ರಸ್ತೆ ಎದ್ದು ಹೋಗಿ ಈ ದುಃಸ್ಥಿತಿ ಉಂಟಾಗಿರುವುದು ತಿಳಿದ ವಿಚಾರವೇ. ಸರಾಗ ಮತ್ತು ಸುಗಮ ಸಂಚಾರಕ್ಕೆ ಹೆದ್ದಾರಿಯೂ ಇಲ್ಲದಿದ್ದರೆ, ಮೂಲಭೂತ ಸೌಕರ್ಯ ಕಲ್ಪಿಸಿಯೂ ಅರ್ಥವೇನು? ಹೆದ್ದಾರಿಯ ಅಲ್ಲಲ್ಲಿ ಹೊಂಡಗುಂಡಿ ಉಂಟಾಗಿರುವುದರಿಂದ ದ್ವಿಚಕ್ರ ಮಾತ್ರವಲ್ಲದೆ, ಕಾರು ಚಾಲಕರಿಗೂ ರಸ್ತೆ ಗಮನಕ್ಕೆ ಸಿಗದೆ, ಹೊಂಡಗುಂಡಿಗೆ ಸಿಲುಕಿಕೊಂಡೇ ಕಾರು ಓಡಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ಕಾರಿಗೂ ಪೆಟ್ಟು ಬಿದ್ದು, ಮತ್ತೂಂದಷ್ಟು ರಿಪೇರಿಗಾಗಿ ಖರ್ಚು ಮಾಡಬೇಕಾದ ಅನಿವಾರ್ಯತೆಯಲ್ಲಿ ಸಾಮಾನ್ಯ ನಾಗರಿಕನಿದ್ದಾನೆ. ಸಂಬಂಧಪಟ್ಟವರು ಸುಧಾರಿತ ರಸ್ತೆ ವ್ಯವಸ್ಥೆಯನ್ನು ಕಲ್ಪಿಸಿಕೊಡುವಲ್ಲಿ ಆದ್ಯ ಗಮನ ಹರಿಸಬೇಕು.

  ಡಿಬಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.