ಅಸ್ತಂಗತರಾದ ಅಗರಿ ಶೈಲಿಯ ರಘುರಾಮ ಭಾಗವತರು


Team Udayavani, Feb 1, 2019, 12:30 AM IST

x-4.jpg

ತೆಂಕುತಿಟ್ಟಿನ ಹಿರಿಯ ಹಾಗೂ ಪ್ರಸಿದ್ಧ ಭಾಗವತರಾಗಿದ್ದ ಅಗರಿ ರಘುರಾಮ ಭಾಗವತರ ನಿಧನ ಯಕ್ಷರಂಗಕ್ಕೊಂದು ದೊಡ್ಡ ನಷ್ಟ . ಅಗರಿ ಶೈಲಿಯ ಸಮರ್ಥ ಪ್ರತಿನಿಧಿಗಳಾಗಿದ್ದ ರಘುರಾಮ ಭಾಗವತರು ಪ್ರಸಂಗಗಳ ನಡೆ ಅರಿತಿದ್ದ , ಹೊಸ ಪ್ರಸಂಗಗಳಿಗೆ ನಿರ್ದೇಶನ ನೀಡುತ್ತಿದ್ದ , ಪರಂಪರೆ ಹಾಗೂ ಸಂಗೀತ ಶೈಲಿ – ಎರಡನ್ನೂ ಅರಿತಿದ್ದ ಅಪರೂಪದ ಭಾಗವತರೆನಿಸಿಕೊಂಡಿದ್ದರು .

ಸರಕಾರಿ ನೌಕರರಾದರೂ ಮೇಳದ ಪೂರ್ಣಕಾಲಿಕ ತಿರುಗಾಟದ ಭಾಗವತರಾದುದು ಒಂದು ಆಕಸ್ಮಿಕ ಘಟನೆಯಿಂದಾಗಿ . 1965 – 66ರ ಕಾಲ . ಅಗರಿ ಶ್ರೀನಿವಾಸ ಭಾಗವತರು ಕಸ್ತೂರಿ ಪೈ ಸಹೋದರರ ಸುರತ್ಕಲ್‌ ಮೇಳದ ಪ್ರಧಾನ ಭಾಗವತರಾಗಿದ್ದ ಸಮಯದಲ್ಲಿ ಮೇಳಗಳ ಪೈಪೋಟಿಯಿಂದಾಗಿ ಸುರತ್ಕಲ್‌ ಮೇಳಕ್ಕೂ ತುಳು ಪ್ರಸಂಗಗಳಿಗೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಯಿತು. ಆದರೆ ಪ್ರಧಾನ ಭಾಗವತರಾದ ಅಗರಿಯವರು ತಾವು ತುಳು ಪ್ರಸಂಗಗಳಿಗೆ ಭಾಗವತಿಕೆ ಮಾಡಲಾರೆ ಎಂದು ಪೈ ಸಹೋದರರಲ್ಲಿ ಖಡಾ ಖಂಡಿತವಾಗಿ ತಿಳಿಸಿದರು . ಪ್ರಸಿದ್ಧಿಯ ತುತ್ತ ತುದಿಯಲ್ಲಿದ್ದ ಅಗರಿ ಶ್ರೀನಿವಾಸ ಭಾಗವತರು ಇಲ್ಲದಿದ್ದರೆ ಕಲೆಕ್ಷನ್‌ಗೆ ತೊಂದರೆ , ಹಾಗೆಂದು ತುಳು ಪ್ರಸಂಗ ಆಡಿಸದಿದ್ದರೆ ಕಂಟ್ರಾಕುrದಾರರನ್ನು ಕಳೆದುಕೊಳ್ಳುವ ಅಪಾಯ . ಕೊನೆಗೆ ಅಗರಿಯವರ ಸಲಹೆಯಂತೆ ಪೌರಾಣಿಕ ಪ್ರಸಂಗಗಳಿಗೆ ತಾನೇ ಭಾಗವತಿಕೆ ಮಾಡುವುದು , ತುಳು ಪ್ರಸಂಗಗಳು ಇದ್ದ ದಿನ ತನ್ನ ಮಗನಾದ ಅಗರಿ ರಘುರಾಮ ಭಾಗವತರನ್ನು ಬರ ಹೇಳುವುದು , ಹೀಗೆ ಆರು ತಿಂಗಳ ಕಾಲ ರಘುರಾಮರು ವೃತ್ತಿಗೆ ರಜೆ ಹಾಕಿ ಸುರತ್ಕಲ್‌ ಮೇಳದ ತಿರುಗಾಟ ನಡೆಸಿದರು . ಮುಂದಿನ ವರ್ಷ ಅಗರಿಯವರು ಕೂಡ್ಲು ಮೇಳ ಸೇರಿದಾಗ , ರಘುರಾಮ ಭಾಗವತರು ಪೈಗಳ ಒತ್ತಾಯಕ್ಕೆ ಮಣಿದು , ಸರಕಾರಿ ನೌಕರಿಗೆ ರಾಜೀನಾಮೆ ಕೊಟ್ಟು ಸುರತ್ಕಲ್‌ ಮೇಳಕ್ಕೆ ಪ್ರಧಾನ ಭಾಗವತರಾಗಬೇಕಾಯಿತು . ಹೀಗೆ ತೆಂಕು ತಿಟ್ಟಿಗೆ ಒಬ್ಬ ಪ್ರತಿಭಾವಂತ , ದಕ್ಷ ಭಾಗವತರ ಪ್ರವೇಶ ಮುಂದೆ ಯಕ್ಷರಂಗಕ್ಕೆ ದೊಡ್ಡ ಲಾಭ ತಂದು ಕೊಟ್ಟಿತು .

 ಅಗರಿ ರಘುರಾಮ ಭಾಗವತರು ಶುದ್ಧ ಅಗರಿ ಶೈಲಿಯ , ಪರಂಪರೆಯ ಭಾಗವತರು . ತಂದೆಯವರಂತೆಯೇ ಆಶು ಕವಿಗಳು . ಹೆಚ್ಚಿನ ಎಲ್ಲಾ ಪ್ರಸಂಗಗಳ ಪದ್ಯ ಕಂಠಪಾಠವಿದ್ದ ಕಾರಣ ಪ್ರಸಂಗ ನೋಡದೇ ಪದ್ಯ ಹೇಳುವುದು ರಘರಾಮರಿಗೆ ಸಿದ್ದಿಸಿತ್ತು. ಹೊಸ ಪ್ರಸಂಗಗಳ ರಂಗ ನಡೆ , ಪಾತ್ರ ಚಿತ್ರಣ , ನಿರ್ದೇಶನ ಇವೆಲ್ಲದರಲ್ಲಿ ರಘುರಾಮರು ಅಗ್ರಗಣ್ಯರಾಗಿದ್ದರು . 

ರಘುರಾಮರ ಭಾಗವತಿಕೆಯು ಅಗರಿ ಶ್ರೀನಿವಾಸ ಭಾಗವತರದ್ದೇ ಶೈಲಿ . ಸತ್ಯ ಹರಿಶ್ಚಂದ್ರ , ನಳದಮಯಂತಿ , ಶನೀಶ್ವರ ಮಹಾತೆ¾ ಮುಂತಾದ ಪೌರಾಣಿಕ ಪ್ರಸಂಗಗಳನ್ನು ರಘುರಾಮರ ನಿರ್ದೇಶನದಲ್ಲಿ ಪ್ರಥಮವಾಗಿ ತುಳು ಭಾಷೆಯಲ್ಲಿ ಆಡಿಸಿದಾಗ ಇದೊಂದು ಹೊಸತನದ ಪ್ರಯೋಗ ಎನಿಸಿತ್ತು . ಕಲಾವಿದರ ಮನೋಧರ್ಮವನ್ನರಿತು , ಪಾತ್ರಗಳ ಸಂದರ್ಭಕ್ಕನುಗುಣವಾಗಿ ,ರಸೋತ್ಕರ್ಷವಾಗುವ ವಾತಾವರಣ ನಿರ್ಮಿಸುವಲ್ಲಿ ರಘುರಾಮರು ಪರಿಣತರಾಗಿದ್ದರು . ರಘುರಾಮರು ಶೃಂಗಾರ , ಕರುಣ , ಶಾಂತ , ಹಾಸ್ಯರಸಗಳಲ್ಲಿ ಹಾಡುವಾಗ ಒಂದು ಅಲೌಕಿಕ ವಾತಾವರಣವೇ ಸೃಷ್ಟಿಯಾಗುತ್ತಿತ್ತು . ರಂಗದ ನಡೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ರಘುರಾಮರು , ಈ ವಿಚಾರದಲ್ಲಿ ಮಾತ್ರ ತಂದೆಯವರಂತೆ ಬಿಗು ನಿರ್ಧಾರ ತಾಳುತ್ತಿದ್ದರು . ಅಗರಿ ರಘುರಾಮ ಭಾಗವತರು ಶುದ್ಧ ಅಗರಿ ಶೈಲಿಯ ,  ಪರಂಪರೆಯ ಭಾಗವತರು . ತಮ್ಮ ತಂದೆಯವರಂತೆಯೇ ಆಶು ಕವಿಗಳು . ಹೆಚ್ಚಿನ ಎಲ್ಲಾ ಪ್ರಸಂಗಗಳ ಪದ್ಯ ಕಂಠ ಪಾಟವಿದ್ದ ಕಾರಣ  ಪ್ರಸಂಗ ನೋಡದೇ ಪದ್ಯ ಹೇಳುವುದು ರಘರಾಮರಿಗೆ ಸಿದ್ದಿಸಿತ್ತು. ಉತ್ತಮ ಸ್ಮರಣ ಶಕ್ತಿ , ಕವಿತಾ ಶಕ್ತಿ ಹೊಂದಿದ್ದು , ಛಂದಸ್ಸು , ರಾಗ – ತಾಳಗಳ ಕುರಿತು ಆಳವಾದ ಜ್ಞಾನ ಹೊಂದಿದ್ದರು .  ಹೊಸ ಪ್ರಸಂಗಗಳ  ರಂಗ ನಡೆ , ಪಾತ್ರ ಚಿತ್ರಣ , ನಿರ್ದೇಶನ ಇವೆಲ್ಲದರಲ್ಲಿ  ರಘುರಾಮರು ಅಗ್ರಗಣ್ಯರಾಗಿದ್ದರು .

 ಅಗರಿ ರಘುರಾಮ ಭಾಗವತರ ವಿದ್ವತ್ತನ್ನು ಲಕ್ಷಿಸಿ ನೂರಾರು ಕಡೆ ಸಮ್ಮಾನ ನಡೆದಿವೆ . ವಿಟ್ಲ ಜೋಷಿ ಪ್ರಶಸ್ತಿ , ಕುರಿಯ ಪ್ರಶಸ್ತಿ , ಉಳ್ಳಾಲ ಶ್ರೀನಿವಾಸ ಮಲ್ಯ ಪ್ರಶಸ್ತಿ , ತ್ರಿಕಣ್ಣೇಶ್ವರ ಪ್ರಶಸ್ತಿ ,ಪದ್ಯಾಣ ಪ್ರಶಸ್ತಿ , ಪೊಲ್ಯ ದೇಜಪ್ಪ ಶೆಟ್ಟಿ ಪ್ರಶಸ್ತಿ , ಯಕ್ಷಸಂಗಮ ಮೂಡುಬಿದಿರೆ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ .

 ಎಂ.ಶಾಂತರಾಮ ಕುಡ್ವ 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.