ಕೃಷ್ಣನ ಸನ್ನಿಧಿಯಲ್ಲಿ ಚಿಣ್ಣರ ಕಲರವ

Team Udayavani, Dec 27, 2019, 12:42 AM IST

48

ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಾಷ್ಟಮಿ ಸಮಯದಲ್ಲಿ ಒಂದೇ ದಿನ ಕೃಷ್ಣ ವೇಷಧಾರಿಗಳು ಸೇರಿದಾಗ ಚಿಣ್ಣರ ಕಲರವ ಕಂಡುಬಂದರೆ ಅದೇ ಕೃಷ್ಣ ನ ನಾಡಿನಲ್ಲಿ ಚಿಣ್ಣರ ಮಾಸಾಚರಣೆ ಸಂದರ್ಭ ನಿತ್ಯ ಚಿಣ್ಣರ ಕಲರವ ಕಂಡುಬಂತು.

2002ರಲ್ಲಿ ಪರ್ಯಾಯದ ಅವಧಿ ಶ್ರೀಕೃಷ್ಣಮಠದಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದೂಟ ಯೋಜನೆಯನ್ನು ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಆರಂಭಿಸಿದಾಗ ಅದೇ ವರ್ಷ ಗ್ರಾಮೀಣ ಭಾಗದ ಮಕ್ಕಳಿಗೆ ಸಾಂಸ್ಕೃತಿಕ ಪ್ರತಿಭೆ ತೋರಿಸಲು ಅವಕಾಶ ಸಿಗಬೇಕೆಂದು ಚಿಣ್ಣರ ಸಂತರ್ಪಣೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ “ಚಿಣ್ಣರ ಮಾಸ’ವನ್ನು ಆರಂಭಿಸಿದರು. ಅಂದಿನಿಂದ ಪ್ರತಿವರ್ಷ ಚಿಣ್ಣರ ಮಾಸಾಚರಣೆ ನಡೆಯುತ್ತಿದೆ. ಈಗ ಪಲಿಮಾರು ಶ್ರೀಪಾದರ ಎರಡನೆಯ ಪರ್ಯಾಯದ ಕೊನೆಯ ಹಂತದಲ್ಲಿ ಮತ್ತೆ ಚಿಣ್ಣರ ಮಾಸಾಚರಣೆ ಸಂಪನ್ನಗೊಂಡಿತು. ಹೀಗೆ ಚಿಣ್ಣರ ಮಾಸಾಚರಣೆಗೂ ಒಂದು ಪರ್ಯಾಯ ಚಕ್ರ ಮುಗಿದಿದೆ.

ಒಟ್ಟು 130 ಶಾಲೆಗಳು ಯೋಜನೆಯಲ್ಲಿದ್ದರೂ ಅದರಲ್ಲಿರುವ ಹಾಸ್ಟೆಲ್‌ಗ‌ಳು, ವಿಶೇಷ ಶಾಲೆ, ಕಡಿಮೆ ಸಂಖ್ಯೆಯ ಶಾಲೆಗಳನ್ನು ಹೊರತುಪಡಿಸಿ 53 ಶಾಲೆಗಳ ಮಕ್ಕಳು ಚಿಣ್ಣರ ಮಾಸಾಚರಣೆಯಲ್ಲಿ ಪಾಲ್ಗೊಂಡರು.

ಕಂಗೀಲು ನೃತ್ಯ, ಕೋಲಾಟ, ಜನಪದ ನೃತ್ಯ, ಯಕ್ಷಗಾನ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಿಕ್ಕ ಚಿಕ್ಕ ಮಕ್ಕಳು ಆಡಿ ತೋರಿಸಿದರು. ನ. 14ರಂದು ಆರಂಭಗೊಂಡ ಮಾಸಾಚರಣೆ ಡಿ. 6ರ ವರೆಗೆನಡೆಯಿತು. ಪ್ರತಿನಿತ್ಯ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗುತ್ತಿತ್ತು. ಸುಮಾರು 40 ನಿಮಿಷಗಳವರೆಗೆ ಒಂದೊಂದು ಶಾಲೆಗಳಂತೆ ನಿತ್ಯ ಮೂರು ಶಾಲೆಗಳ ಮಕ್ಕಳು ನಲಿದು ತಮ್ಮ ಪ್ರತಿಭೆಗಳನ್ನು ತೋರಿಸಿದರು. ದೂರದೂರದ ಸುಮಾರು 2,500 ಮಕ್ಕಳು ಈ ಕಾರ್ಯಕ್ರಮದ ಮೂಲಕ ತಮ್ಮ ಸಾಮರ್ಥ್ಯವನ್ನು ಕೃಷ್ಣಾರ್ಪಣಗೊಳಿಸಿದರು. ಪ್ರತಿಯೊಂದು ಶಾಲೆಗಳ ವಿದ್ಯಾರ್ಥಿಗಳಿಗೆ ಬಂದು ಹೋಗುವ ಖರ್ಚು, ಪ್ರಸಾದ, ಪ್ರಮಾಣಪತ್ರವಲ್ಲದೆ ಪೆನ್ನು, ಪೆನ್ಸಿಲ್‌, ನೋಟ್‌ ಪುಸ್ತಕ, ಕಟ್ಟರ್‌ ಒಳಗೊಂಡ ಕಿಟ್‌ ನೀಡಲಾಯಿತು. ಉತ್ತಮ ಪ್ರದರ್ಶನ ನೀಡಿದ ಶಾಲೆಗಳಿಗೆ ವಿಶೇಷ ಬಹುಮಾನವನ್ನೂ ನೀಡಲಾಗುತ್ತಿದೆ. ಕಲಾವಿದರಾದ ರಮೇಶ್‌ ಮತ್ತು ಅಜಿತ್‌ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.