ಚಿಣ್ಣರ ಕೈಯಲ್ಲರಳಿದ ಜಾನಪದ ಮೃಣ್ಕಲೆ

Team Udayavani, Jun 14, 2019, 4:00 AM IST

u-4

ಚಿಣ್ಣರ ಪ್ರತಿಭೆಗಳನ್ನು ಒರೆಗೆ ಹಚ್ಚಿ ಮಾರ್ಗದರ್ಶನ ನೀಡುವ ಕೆಲಸ ಅನೇಕ ಕಲಾಶಿಬಿರಗಳಲ್ಲಿ ನಡೆಯುತ್ತದೆ. ಅನುಕರಣೆ ಕಡಿಮೆಯಾಗಿ ಸೃಜನಶೀಲತೆಯ ಅನಾವರಣವೇ ಶಿಬಿರಗಳ ಉದ್ದೇಶವಾಗಬೇಕು. ಆಗ ಮಕ್ಕಳು ಬಹುಮುಖವಾಗಿ ಬೆಳೆಯುತ್ತಾರೆ. ಇಲ್ಲದಿದ್ದಲ್ಲಿ ಮಕ್ಕಳ ಪ್ರತಿಭೆ ದುವ್ಯìಸನದ ಕಡೆಗೆ ತಿರುಗಿ ಭವಿಷ್ಯ ಮಸುಕಾಗಬಹುದು. ಆದರೆ ಇಂದಿನ ಕಂಪ್ಯೂಟರ್‌ ಯುಗದಲ್ಲಿ ಮೊಬೈಲ್‌, ಇಂಟರ್‌ನೆಟ್‌ನ ಆಕರ್ಷಣೆಯಿಂದ ಮಕ್ಕಳ ಮನಸ್ಸನ್ನು ವಿಕರ್ಷಿಸಿ ಅವರ ಸೃಜನಶೀಲತೆ ಬೆಳೆಸಲು ಸೂಕ್ತ ತರಬೇತಿಯನ್ನು ನೀಡುವುದೆಂದರೆ ಸುಲಭದ ಕೆಲಸವಲ್ಲ. ಉತ್ಸಾಹಿ ಸಂಪನ್ಮೂಲ ವ್ಯಕ್ತಿಗಳು, ಪ್ರೋತ್ಸಾಹಿಕ ಸಂಘ ಸಂಸ್ಥೆಗಳು, ಆಕರ್ಷಕ ಶಿಬಿರಗಳು ನಡೆದಾಗ ಮಾತ್ರ ಅದು ಸಾಧ್ಯ. ಅಂತಹ ವಿಶಿಷ್ಟ ಕಾರ್ಯಕ್ರಮವೊಂದು ಇತ್ತೀಚೆಗೆ ಉಡುಪಿ ತೆಂಕಪೇಟೆಯಲ್ಲಿನ ಸಂಸ್ಕೃತ ಭಾರತಿ ಕಾರ್ಯಾಲಯದ ಸಭಾಂಗಣದಲ್ಲಿ ಸದ್ಭಾವನಾ ಸೇವಾ ಟ್ರಸ್ಟ್‌(ರಿ.) ಶೃಂಗೇರಿ ಇದರ ಉಡುಪಿ ವಲಯದ ಆಶ್ರಯದಲ್ಲಿ ನಡೆಯಿತು. ಖ್ಯಾತ ಮೃಣ್ಕಲೆ ಕಲಾವಿದ ವೆಂಕಿ ಪಲಿಮಾರ್‌ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳೊಂದಿಗೆ ಮಣ್ಣಿನಲ್ಲಿ ಆಡುತ್ತಾ ಅವರಿಂದ ಸೃಜನಾತ್ಮಕ ಮೃಣ್ಕಲೆ ಕಲಾಕೃತಿಗಳನ್ನು ಹೊರತಂದರು.

ಸುಮಾರು ನಲ್ವತ್ತಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದ ಈ ಶಿಬಿರದಲ್ಲಿ ಕೆಲ ಹಿರಿಯರೂ ಭಾಗವಹಿಸಿ ತಮ್ಮ ಕೈಚಳಕವನ್ನು ಪ್ರದರ್ಶಿಸಿ ಪುಳಕಿತಗೊಂಡರು. ವೆಂಕಿ ಪಲಿಮಾರ್‌ ಅವರವರ ವಯಸ್ಸಿಗೆ ಅನುಗುಣವಾಗಿ ಮಾರ್ಗದರ್ಶನ ನೀಡಿ ಕಲಾಕೃತಿಗಳನ್ನು ರಚಿಸಿಕೊಂಡರು. ಭಾರತೀಯ ಸಂಸ್ಕೃತಿ ಮತ್ತು ಜಾನಪದ ಲೋಕಕ್ಕೆ ಸಂಬಂಧಿಸಿದ ವಿಷಯಗಳನ್ನು ಆಯ್ದುಕೊಂಡು ಆವೆಮಣ್ಣಿನ ಕಲಾಕೃತಿಗಳನ್ನು ರೂಪಿಸಲಾಯಿತು. ಯಕ್ಷಗಾನ ಮತ್ತು ಭೂತದ ಮುಖವಾಡಗಳು ಹೆಚ್ಚು ರಚನೆಯಾದವು. ಭಯಾನಕ, ಭೀಭತ್ಸ, ರೌದ್ರರಸಗಳು ಕಲಾಕೃತಿಗಳಲ್ಲಿ ಮೂಡಿಬಂದವು. ಶಿಬಿರದ ಕೊನೆಯಲ್ಲಿ ರಚನೆಗೊಂಡ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ವೀಕ್ಷಕರು ಇದನ್ನು ಕಂಡು ವಿದ್ಯಾರ್ಥಿ ಪ್ರತಿಭೆಗೆ ಮನದೂಗಿದರು.

– ಉಪಾಧ್ಯಾಯ ಮೂಡುಬೆಳ್ಳೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.