ಪರಂಪರೆಯ ಕಲಾವಿದ ಕೋಟ ಉದಯ ನಾಯ್ಕ

Team Udayavani, May 18, 2018, 6:00 AM IST

k-4.jpg

ಮಾರಣಕಟ್ಟೆ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟದ ಉದಯ ನಾಯ್ಕ ಪರಂಪರೆಯ ಕಲಾವಿದ. ಯಕ್ಷರಂಗದ ಶಿಸ್ತು, ಸಂಪ್ರದಾಯ, ಪ್ರಸಂಗಗಳ ಅಧ್ಯಯನ, ಪುರಾಣದ ಜ್ಞಾನ, ಹಿರಿಯ ಕಲಾವಿದರ ಜೊತೆಗಿನ ಅನುಸಂಧಾನದ ಮೂಲಕ ಕರಗತ ಮಾಡಿಕೊಂಡ ಯಕ್ಷಕೌಶಲ್ಯದ ಮೂಲಕವೇ ಪ್ರಬುದ್ಧ ಕಲಾವಿದರಾಗಿ ರೂಪುಗೊಂಡವರು. ಬಡಗುತಿಟ್ಟಿನ ಕೇದಗೆ ಮುಂಡಾಸುಗಳಿಗೆ ಹೆಸರುವಾಸಿಯಾಗಿದ್ದಾರೆ. ಇವರ ತಂದೆ ದಿ| ಹೆರಿಯ ನಾಯ್ಕರು ಯಕ್ಷಗಾನದಲ್ಲಿ ದೊಡ್ಡ ಹೆಸರು ಸಂಪಾದಿಸಿದವರು. ತಂದೆಯ ಮೂಲಕ ಯಕ್ಷಗಾನದ ಆಸಕ್ತಿ ಮೂಡಿಸಿಕೊಂಡ ಬಾಲಕ ಉದಯ ಮುಂದೆ ಬಣ್ಣದ ಬದುಕನ್ನೇ ತನ್ನ ವೃತ್ತಿ ಜೀವನವನ್ನಾಗಿ ಆರಿಸಿಕೊಂಡರು. 6ನೇ ತರಗತಿಗೆ ಶಾಲೆಗೆ ವಿರಾಮ ಹೇಳಿ ಕಲೆಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡರು. ಇವರಿಗೆ ತಂದೆಯೇ ಮಾರ್ಗದರ್ಶಕ ಮತ್ತು ಗುರುವಾದರು.ಪ್ರಥಮವಾಗಿ ಮಂದರ್ತಿ ಮೇಳದಲ್ಲಿ ಗೆಜ್ಜೆ ಕಟ್ಟುವ ಮೂಲಕ ಯಕ್ಷಗಾನ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದರು. ನಂತರ ಹಂತ ಹಂತವಾಗಿ ಕಲೆಯಲ್ಲಿ ಸಿದ್ಧಿ ಸಂಪಾದಿಸಿಕೊಂಡು ಹಿರಿಯ ಕಲಾವಿದರ ಒಟನಾಟ, ಸತತ ಪರಿಶ್ರಮ, ಆಸಕ್ತಿಯ ಮೂಲಕ ಪ್ರವರ್ಧಮಾನಕ್ಕೆ ಬಂದರು. ಮಂದರ್ತಿ, ಸೌಕೂರು, ಕಮಲಶಿಲೆ, ಅಮೃತೇಶ್ವರಿ ಮೇಳಗಳಲ್ಲಿ ಸೇವೆ ಸಲ್ಲಿಸಿ ಮೆಚ್ಚುಗೆ ಪಡೆದುಕೊಂಡರು. ಲವಕುಶ, ಕೃಷ್ಣ, ಮತ್ಸ್ಯ, ಹನುಮಂತ, ಕೌಂಡ್ಲಿಕ, ವಿದ್ಯುನ್ಮಾಲಿ, ನೇತ್ರಾಸುರ, ದಮನ, ಬಂಡಾಸುರ, ಚಂದ್ರಸೇನ, ದುರ್ಮುಕ, ಚಂಡಾ, ಚಂದಯ್ಯ ಶೆಟ್ಟಿ ಮುಂತಾದ ಪಾತ್ರಗಳು ಇವರಿಗೆ ಖ್ಯಾತಿ ತಂದುಕೊಟ್ಟಿವೆ. ಕೆಂಪು ಮುಂಡಾಸಿನ ಖಳ ಪಾತ್ರಗಳನ್ನು ನಿರ್ವಹಿಸಿದಷ್ಟೇ ಸುಲಲಿತವಾಗಿ ಕೃಷ್ಣ, ಲವ, ಕುಶದಂತಹ ಕಥಾನಾಯಕರ ಪಾತ್ರಗಳನ್ನು ನಿರ್ವಹಿಸುತ್ತಾರೆ. ಹಿಂದೆ ಜೋಡಾಟದ ಸಂದರ್ಭದಲ್ಲಿ ವೀರರಸದ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ಎದುರಾಳಿಗಳಲ್ಲಿ ನಡುಕ ಹುಟ್ಟಿಸುತ್ತಿದ್ದ ಪಟುಭಟರಂತಹ ಕಲಾವಿದರೆಂದೆ ಖ್ಯಾತಿ ಪಡೆದಿದ್ದರು. ಕಲೆಯನ್ನು ಪ್ರೀತಿಸುವ ಮನಸ್ಸು, ಸಂಪ್ರದಾಯದ ಚೌಕಟ್ಟಿಗೆ ಚ್ಯುತಿ ಬಾರದಂತೆ ತನ್ನ ಇತಿಮಿತಿಯೊಳಗೆ ಕಥೆಯ ಸಾರವನ್ನು ಪಾತ್ರದ ಮೂಲಕ ಸಚೇತನಗೊಳಿಸುವ ಚಾಕಚಕ್ಯತೆ ಇವರಿಗೆ ಸಿದ್ಧಿಸಿದೆ. ನೃತ್ಯ, ವಾಗ್‌ ಸಾಮರ್ಥ್ಯ, ಪಾತ್ರೋಚಿತ ವೇಷಗಾರಿಕೆ, ರಸಾಭಿವ್ಯಕ್ತಿಯನ್ನು ಸರಾಗವಾಗಿ ಹೊರಹೊಮ್ಮಿಸುವ ರಂಗಸೂಕ್ಷ್ಮತೆ ಇವರಿಗಿದೆ. 

ನಾವಂಬ ಗೇರುಕಟ್ಟೆ 

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.