ಯಕ್ಷೋಲ್ಲಾಸದಲ್ಲಿ ಯಕ್ಷಗಾನ -ಪ್ರಶಸ್ತಿ ಪ್ರದಾನ


Team Udayavani, Jul 12, 2019, 5:00 AM IST

Udayavani Kannada Newspaper

ಕಾಂತಾವರದಲ್ಲಿ ಯಕ್ಷ ಗುರುಗಳಾದ ಮಹಾವೀರ ಪಾಂಡಿಯವರಿಂದ ಜನ್ಮ ತಳೆದ ಯಕ್ಷದೇಗುಲ ಕಾರ್ಕಳ ಹಾಗೂ ಮೂಡುಬಿದಿರೆ ತಾಲೂಕಿನ ಹಲವು ಕೇಂದ್ರಗಳಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿಯನ್ನು ನೀಡುತ್ತಿದೆ. ಹೀಗೆ ತರಬೇತಿ ಪಡೆದ ಇಲ್ಲಿನ ಮಕ್ಕಳು ಪ್ರತೀ ವರ್ಷ ಶಾಲಾ ವಾರ್ಷಿಕೋತ್ಸವ ಮತ್ತು ಕಾಂತಾವರ ಜಾತ್ರೋತ್ಸವ ಸಂದರ್ಭದಲ್ಲಿ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸುತ್ತಾರೆ. ಇದೇ ಮಕ್ಕಳ ತಂಡ ತಾಲೂಕು, ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿಯೂ ಭಾಗವಹಿಸಿ ಬಹುಮಾನಗಳನ್ನು ಮಾತ್ರವಲ್ಲದೆ ಕಲಾರಸಿಕರ ಮೆಚ್ಚುಗೆಯನ್ನು ಗಳಿಸಿಕೊಂಡಿವೆ.

ಕಾಂತಾವರದಲ್ಲಿ ಪ್ರತೀ ವರ್ಷ ಬೇಸಿಗೆ ರಜೆಯಲ್ಲಿ ಮಕ್ಕಳಿಗಾಗಿ ಊಟೋಪಚಾರದ ಜೊತೆಗೆ ಉಚಿತ ತರಬೇತಿ ಶಿಬಿರವನ್ನು ಯಕ್ಷದೇಗುಲವು ಹಮ್ಮಿಕೊಳ್ಳುತ್ತಿದ್ದು ಆಯ್ಕೆಗೊಂಡ ಎಂಬತ್ತಕ್ಕೂ ಹೆಚ್ಚಿನ ಮಕ್ಕಳು ಇಲ್ಲಿ ಹದಿನೈದು ದಿನಗಳ ಕಾಲದ ತರಬೇತಿಯನ್ನು ಪಡೆದುಕೊಳ್ಳುತ್ತಾರೆ. ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರು ಸಂಪನ್ಮೂಲ ವ್ಯಕ್ತಿಗಳಾಗಿ ಬಂದು ವಿದ್ಯಾರ್ಥಿಗಳಿಗೆ ತರಬೇತಿಯ ಜೊತೆ ಅವರಲ್ಲಿ ಕಲಾಸಕ್ತಿಯನ್ನು ತುಂಬುತ್ತಾರೆ.

ಪ್ರತೀ ವರ್ಷ ಜುಲೈ ತಿಂಗಳಲ್ಲಿ ಯಕ್ಷದೇಗುಲವು ತನ್ನ ವಾರ್ಷಿಕೋತ್ಸವವನ್ನು ಕಲಾವಿದರ ಮತ್ತು ಮಕ್ಕಳ ಯಕ್ಷಗಾನ ಪ್ರದರ್ಶನ, ಪ್ರಸಿದ್ಧ ಕಲಾವಿದರಿಂದ ತಾಳಮದ್ದಳೆ ಕೂಟ, ಸಾಧಕರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮಗಳೊಂದಿಗೆ ನಡೆಸುತ್ತಾ ಬಂದಿದೆ. ಈ ವರ್ಷದ ವಾರ್ಷಿಕೋತ್ಸವವು ಜು.14ರಂದು ಕಾಂತಾವರದ ಕಾಂತೇಶ್ವರ ಸಭಾ ಭವನದಲ್ಲಿ ನೇರವೇರಲಿದೆ. ಹಿರಿಯ ಕಲಾವಿದರಿಂದ “ಕೃಷ್ಣ ಪಾರಿಜಾತ’ ಯಕ್ಷಗಾನ ಪ್ರದರ್ಶನ, ಪ್ರಸಿದ್ಧ ಕಲಾವಿದರಿಂದ “ಅಂಗಾಧ ಸಂಧಾನ – ಅತಿಕಾಯ ಕಾಳಗ’ ತಾಳಮದ್ದಳೆ, ಬಾಲ ಕಲಾವಿದರಿಂದ “ರತ್ನಪ್ರಭಾ ಪರಿಣಯ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮಗಳ ಮಧ್ಯೆ ಹಿರಿಯ ಕಲಾವಿದರಾದ ಕುಂಬ್ಳೆ ಸುಂದರ್‌ ರಾವ್‌ ಮತ್ತು ಬಂಟ್ವಾಳ ಜಯರಾಮ ಆಚಾರ್ಯರವರಿಗೆ ಯಕ್ಷದೇಗುಲ ಗೌರವ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು.ಎಳವೆಯಲ್ಲಿಯೇ ಮಕ್ಕಳಲ್ಲಿ ಯಕ್ಷಗಾನ ಕಲಾಸಕ್ತಿಯನ್ನು ಬೆಳೆಸಿ ಕಲಾವಿದರನ್ನು ರೂಪಿಸುವಲ್ಲಿ ಮತ್ತು ಯಕ್ಷಗಾನ ಯಕ್ಷದೇಗುಲದ ಕಾರ್ಯವು ಪ್ರಶಂಸನೀಯವಾಗಿದೆ.

– ಸದಾನಂದ ನಾರಾವಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.