ಮತ ಹಾಕಿದವರಿಗೆ ಉಚಿತ ದಿನಸಿ ಸಾಮಗ್ರಿ


Team Udayavani, Apr 13, 2019, 3:00 AM IST

mata-hakio

ಚುನಾವಣಾ ಆಯೋಗ ನಾಗರಿಕರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ನಾನಾ ವಿಧಾನಗಳನ್ನು ಅನುಸರಿಸುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ಅಂಗಡಿ ಮಳಿಗೆಯವರೂ ಆಫ‌ರ್‌ ನೀಡುವ ಮೂಲಕ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಯುವಕರೇ ಈ ದೇಶದ ಶಕ್ತಿ ಎಂದಿದ್ದರು ವಿವೇಕಾನಂದರು. ಅವರನ್ನು ಭವಿಷ್ಯಕ್ಕೆ ಸಜ್ಜುಗೊಳಿಸುವ ಜವಾಬ್ದಾರಿ ಹಿರಿಯರ ಮೇಲಿನದು. ಈ ಗುರುತರ ಜವಾಬ್ದಾರಿ ಹೊತ್ತವರಲ್ಲಿ ಸಿ.ವಿ. ಕೃಷ್ಣಮೂರ್ತಿಯವರೂ ಒಬ್ಬರು. ದೇಶದ ಭವಿಷ್ಯವನ್ನೇ ರೂಪಿಸುವ ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮದೇ ಆದ ರೀತಿಯಲ್ಲಿ ನಾಗರಿಕರನ್ನು ಹುರಿದುಂಬಿಸುತ್ತಿದ್ದಾರೆ.

ಏಪ್ರಿಲ್‌ 19ರಂದು ತಮ್ಮ ಅಂಗಡಿಗೆ ಬರುವ ಗ್ರಾಹಕರು ಮತದಾನದಲ್ಲಿ ಪಾಲ್ಗೊಂಡಿದ್ದರೆ ಅವರಿಗೆ ಆಯ್ದ ದಿನಸಿ ವಸ್ತುಗಳನ್ನು ಉಚಿತವಾಗಿ ನೀಡುವ ಮೂಲಕ ಮತದಾನದ ಮಹತ್ವವನ್ನು ಸಾರುತ್ತಿದ್ದಾರೆ. ಒಬ್ಬರಿಗೆ ಕಮ್ಮಿಯೆಂದರೂ ಮೂರು ವಸ್ತುಗಳನ್ನು ಅವರು ನೀಡಲಿದ್ದಾರೆ. ಟೂತ್‌ಪೇಸ್ಟ್‌, ಬ್ರಶ್‌, ಸೋಪ್‌ ಅದೇನೇ ಇರಬಹುದು. ಗ್ರಾಹಕರು ಮತ ಹಾಕಿದ ಬೆರಳ ಗುರುತು ತೋರಿಸಬೇಕಷ್ಟೆ.

80 ವರ್ಷದ ಈ ಹಿರಿಯರು ಕಳೆದ 60 ವರ್ಷಗಳಿಂದ ಕೆ.ಆರ್‌ ಮಾರ್ಕೆಟ್‌ ಬಳಿಯ ಅವೆನ್ಯೂ ರಸ್ತೆಯಲ್ಲಿ ಕುಸುಮಾ ಜನರಲ್‌ ಸ್ಟೋರ್ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದರೂ ಕೃಷ್ಣಮೂರ್ತಿಯವರು ಮೂಲತಃ ಕೋಲಾರದವರು. ಮಿನರ್ವ ಬಳಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ವಿಜಯಾ ಕಾಲೇಜಿನಲ್ಲಿ ಇಂಟರ್‌ಮೀಡಿಯೇಟ್‌ವರೆಗೂ(ಪಿ.ಯು.ಸಿ ತತ್ಸಮಾನ) ಓದಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೂ ಕನ್ನಡ ಭಾಷೆಯ ಬಗೆಗಿನ ಕಾಳಜಿ ಅವರಿಗೆ. ಇವತ್ತೂ ಅವರ ಜನರಲ್‌ ಸ್ಟೋರ್ಗೆ ಭೇಟಿ ನೀಡಿದರೆ ಕನ್ನಡ ಪರ ಘೋಷಣೆಗಳ ಪೋಸ್ಟರ್‌ಗಳನ್ನು ತೋರಣದಂತೆ ಕಟ್ಟಿರುವುದನ್ನು ಕಾಣಬಹುದು. ಕೃಷ್ಣಮೂರ್ತಿಯವರಿಗೆ ಮತದಾನದ ಬಗೆಗೆ ಇರುವ ಕಾಳಜಿ ಕಂಡು ಕೆಲ ದಿನಬಳಕೆ ವಸ್ತುಗಳ ಕಂಪನಿಯವರೂ ಅವರೊಂದಿಗೆ ಕೈಜೋಡಿಸಿದ್ದಾರೆ.

ನಮ್ಮಂಗಡಿಗೆ ಬರೋ ಮತದಾರ ಗ್ರಾಹಕರಿಗೆ ಉಚಿತವಾಗಿ ಕೊಟ್ರೂ ಗೌರವಪೂರ್ವಕವಾಗಿಯೇ ಕೊಡ್ತೀನಿ. ಯಾಕಂದ್ರೆ ಸರ್ಕಾರ ಹೀಗ್‌ ಮಾಡಬೇಕಿತ್ತು ಹಾಗ್‌ ಮಾಡಬೇಕಿತ್ತು ಅಂತ ಕೇಳ್ಳೋ ಹಕ್ಕು ಇರೋದು ಮತ ಹಾಕಿದವರಿಗೆ ಮಾತ್ರ. ಅಂಥ ಮತದಾರರಿಗೆ ಗೌರವ ತೋರಿಸೋಕೆ ನನ್ನದೊಂದು ಪುಟ್ಟ ಪ್ರಯತ್ನವಿದು.
-ಸಿ.ವಿ. ಕೃಷ್ಣಮೂರ್ತಿ, ಕುಸುಮಾ ಜನರಲ್‌ ಸ್ಟೋರ್‌ ಮಾಲೀಕ

ಎಲ್ಲಿ?: ಕುಸುಮಾ ಜನರಲ್‌ ಸ್ಟೋರ್, ಅವೆನ್ಯೂ ರಸ್ತೆ
ಯಾವಾಗ?: ಏಪ್ರಿಲ್‌ 19

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.