ಲೆನ್ಸು ಮಾತಾಡಿತು…ಶಿವ ಗಾಂಧಿ ಛಾಯಾಚಿತ್ರ ಪ್ರದರ್ಶನ

Team Udayavani, Feb 2, 2019, 2:46 AM IST

ಲ್ಯಾಂಡ್‌ಸ್ಕೇಪ್‌ ಛಾಯಾಗ್ರಹಣಕ್ಕೆ ಅದರದ್ದೇ ಆದ ಮಹತ್ವವಿದೆ. ಸವಿಸ್ತಾರವಾಗಿ, ಕಣ್ತುಂಬುವಂತೆ ದೃಶ್ಯಗಳನ್ನು ಸೆರೆಹಿಡಿಯುವುದರಿಂದಲೇ ಈ ಛಾಯಾಗ್ರಹಣವೆಂದರೆ ಪ್ರಕೃತಿ ಪ್ರೇಮಿಗಳಿಗೆ ಒಲವು ಹೆಚ್ಚು. ಭಾರತದಾದ್ಯಂತ ಓಡಾಡಿ ಸೆರೆಹಿಡಿಯಲಾದ ಸುಂದರ ಭೂದೃಶ್ಯಗಳ ಛಾಯಾಚಿತ್ರ ಪ್ರದರ್ಶನ ‘ಲ್ಯಾಂಡ್‌ಸ್ಕೇಪ್ಸ್‌ ಆಫ್ ಇಂಡಿಯಾ’ ನಗರದಲ್ಲಿ ಏರ್ಪಾಡಾಗಿದೆ. ಛಾಯಾಗ್ರಾಹಕ ಶಿವ ಗಾಂಧಿ ಅವರು ಸೆರೆಹಿಡಿದ ಅತ್ಯುದ್ಭುತ, ವಿಶಿಷ್ಟ ನಿಸರ್ಗ ಚಿತ್ರಣ, ಪರ್ವತಗಳು, ನದಿಗಳು, ಪ್ರವಾಸದ ಸ್ಮರಣೀಯ ಛಾಯಾಚಿತ್ರಗಳನ್ನು ಈ ಪ್ರದರ್ಶನದಲ್ಲಿ ನೋಡಬಹುದಾಗಿದೆ. ಒಂದು ಚಿತ್ರವನ್ನು ಸೆರೆಹಿಡಿಯುವಾಗ ಅದರ ಸ್ಕೆಚ್, ಫ್ರೇಮ್‌ವರ್ಕ್‌ ತಲೆಯಲ್ಲಿ ನಡೆದಿರುತ್ತೆ. ಅದಕ್ಕೆ ಸಂಬಂಧಿಸಿದ ಅನೇಕ ಸರಣಿ ಆಲೋಚನೆಗಳು, ಕ್ರಿಯಾಶೀಲ ತಂತ್ರಗಳು ನಂತರ ಹೊಳೆಯುತ್ತವೆ. ಈ ಪ್ರಕ್ರಿಯೆಯಲ್ಲಿ ಕಾಲ್ಪನಿಕ ಚಿತ್ರಣ ಮನಸ್ಸಿನಲ್ಲಿ ಮೂಡುತ್ತದೆ. ಅದನ್ನು ಕ್ಯಾಮೆರಾದ ಲೆನ್ಸಿನ ಸಹಾಯದಿಂದ ಫೋಟೋಗ್ರಾಫ‌ರ್‌ ಸೆರೆಹಿಡಿಯುತ್ತಾನೆ ಎನ್ನುತ್ತಾರೆ ಶಿವ ಗಾಂಧಿ. ಅವರ ನೆರಳು ಬೆಳಕಿನ ಕತೆ ಹೇಳುವ ಚಿತ್ರಗಳು ಪ್ರದರ್ಶನದಲ್ಲಿವೆ.•

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಕರಾವಳಿಯ ಕಂಬಳದ ಕಹಳೆ ಜಗದಗಲ ಮೊಳಗಿದೆ. ಕಂಬಳ ಓಟಗಾರನಿಗೆ ಬಹುಪರಾಕ್‌ ಸಿಗುತ್ತಲೇ ಇದೆ. ರಾಜ್ಯಕ್ರೀಡಾಕೂಟದಲ್ಲೂ ಕಂಬಳ ಪ್ರವೇಶಿಸುವ ಮಾತುಗಳು ಕೇಳಿಬರುತ್ತಿವೆ....

  • ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಈಗಾಗಲೇ ಆಸೆ- ನಿರೀಕ್ಷೆಗಳ ತೋರಣ ಕಟ್ಟಿದೆ. ಫೆ.26ರಿಂದ ಮಾ.4ರ ವರೆಗೆ, 7 ದಿನಗಳ ಕಾಲ, ವಿಶ್ವದ ಅನೇಕ ದೇಶಗಳಲ್ಲಿ ಪ್ರಸಿದ್ಧಿ...

  • ಕೈಗಳೇ ಇಲ್ಲದವರು ಕಲಾವಿದರಾಗಬಹುದಾ? ಕಾಲಿನಲ್ಲೋ, ಬಾಯಿಯಲ್ಲೋ ಬ್ರಷ್‌ ಕಚ್ಚಿಕೊಂಡು ಗೆರೆ ಎಳೆಯಲು, ಕಲ್ಪನೆಗೆ ಬಣ್ಣ ತುಂಬಲು ಸಾಧ್ಯವಾ? ಸಿಕೆಪಿಯಲ್ಲಿ ಇದಕ್ಕೆ...

  • ಕನ್ನಡ, ಹಿಂದಿ ಚಿತ್ರಭೂಮಿಕೆಗಳಲ್ಲಿ ನಟಿಸಿದ್ದ, ಹಿರಿಯ ಅಭಿನೇತ್ರಿ ಕಿಶೋರಿ ಬಲ್ಲಾಳ್‌ ಇತ್ತೀಚೆಗಷ್ಟೇ ಇಹವನ್ನು ಅಗಲಿದರು. ಆಪ್ತ ಬಳಗದಲ್ಲಿ ಅವರು ಬಿತ್ತಿದ...

  • ರಾವಣ, ಸೀತೆಯನ್ನು ಅಪಹರಿಸಿ, ಲಂಕೆಗೆ ಕರೆತಂದಿದ್ದಾನೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾಮ ಬಳಗದಲ್ಲಿ ಮುಂದಿನ ಪ್ರಶ್ನೆ ಎದ್ದು ಕುಳಿತಿತ್ತು: ಲಂಕೆಗೆ ಹೋಗುವುದು...

ಹೊಸ ಸೇರ್ಪಡೆ