ರೈತರಿಗೆ ಲಾಭದ ಪ್ರಸಾದ ; ಪೊಳಲಿ ಜಾತ್ರೇಲಿ ಕಲ್ಲಂಗಡಿಯೇ ಪ್ರಸಾದ

Team Udayavani, May 13, 2019, 6:20 AM IST

Isiri–Watermelon-726

ಪೊಳಲಿಯಲ್ಲಿ ದುರ್ಗಾಪರಮೇಶ್ವರಿ ಜಾತ್ರೆ ನಡೆದರೆ ಸುತ್ತಮುತ್ತಲ ರೈತರಿಗೆ ಖುಷಿ ಮತ್ತು ಲಾಭ. ಏಕೆಂದರೆ, ಈ ದೇವಾಸ್ಥಾನಕ್ಕೆ ಬರುವ ಭಕ್ತಾದಿಗಳು ಪ್ರಸಾದ ಎಂಬಂತೆ ಇಲ್ಲಿ ಸಿಗುವ ಕಲ್ಲಂಗಡಿಯನ್ನು ಕೊಂಡು ಹೋಗುತ್ತಾರೆ. ಹೀಗಾಗಿ, ಪೊಳಲಿ, ಮಳಲಿ ಪ್ರದೇಶ ರೈತರು ಬಹಳ ಭಕ್ತಿಯಿಂದ ಬೆಳೆದ ಕಲ್ಲಂಗಡಿಯನ್ನು ಇಲ್ಲಿ ತಂದು ಮಾರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ. ಇಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಬಂದರೆ ಸುತ್ತಮುತ್ತಲ ರೈತರಿಗೆಲ್ಲಾ ಖುಷಿಯೋ ಖುಷಿ. ಕಾರಣ ಇಷ್ಟೇ, ಸುಮಾರು ಒಂದು ತಿಂಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯುವ ಜಾತ್ರೆಗೆ ಬರುವ ಭಕ್ತಾದಿಗಳು ಪುರಲ್ದ ಪ್ರಸಾದ ಎಂದೇ ಕರೆಯಲ್ಪಡುವ, ತುಳು ಭಾಷೆಯ ಬಚ್ಚಂಗಾಯಿ ಅಥವಾ ಕಲ್ಲಂಗಡಿ ಹಣ್ಣನ್ನು ಖರೀದಿಸದೇ ಬರಿಗೈಯಲ್ಲಿ ವಾಪಸ್‌ ತೆರಳುವುದಿಲ್ಲ.

ಹೀಗಾಗಿ, ಪೊಳಲಿ ಜಾತ್ರೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಭಾರೀ ಬೇಡಿಕೆ ಇದೆ. ಕಡು ಹಸಿರು ಬಣ್ಣದ ಕಲ್ಲಂಗಡಿ ಹಣ್ಣಿನೊಳಗೆ ಇಷ್ಟು ಕಡು ಕೆಂಪು ಬಣ್ಣದ ತಿರುಳಿರುವ ಹಣ್ಣು ಬೇರೆಲ್ಲೂ ಸಿಗುವುದಿಲ್ಲ ಎನ್ನುತ್ತಾರೆ. ಈ ವಿಧದ ಕಲ್ಲಂಗಡಿ ಹಣ್ಣನ್ನು ಪೊಳಲಿ ಹಾಗೂ ಮಳಲಿ ಗ್ರಾಮಗಳ ರೈತರು ಪೊಳಲಿ ಜಾತ್ರಾ ಮಹೋತ್ಸವಕ್ಕಾಗಿಯೇ ಬೆಳೆಯುತ್ತಾರೆ. ಹೀಗೆ, ಈ ಗ್ರಾಮಗಳ ರೈತರು ತಾವು ಬೆಳೆದ ಕಲ್ಲಂಗಡಿ ಹಣ್ಣನ್ನು ಪೊಳಲಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇಲ್ಲಿನ ಅಂಗಡಿಗಳಲ್ಲಿ ಇಟ್ಟು ಮಾರಾಟ ಮಾಡುತ್ತಾರೆ.

ಕಲ್ಲಂಗಡಿಯ ವಿಶೇಷತೆ
ಇಲ್ಲಿ ಸಿಗುವ ಕಲ್ಲಂಗಡಿಯನ್ನು ಸಾವಯವ ಗೊಬ್ಬರದಿಂದ ಬೆಳೆಸುವುದರಿಂದ ಸಂಪೂರ್ಣ ರಾಸಾಯನಿಕ ಮುಕ್ತವಾಗಿರುತ್ತದೆ. ಯಾವುದೇ ಕಾರಣಕ್ಕೂ ಪೊಳಲಿ ಜಾತ್ರಾ ಮಹೋತ್ಸವದಲ್ಲಿ ಹೊರಗಿನ ಊರುಗಳಿಂದ ಆಗಮಿಸುವ ವ್ಯಾಪಾರಿಗಳಿಗೆ ಕಲ್ಲಂಗಡಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ. ಇಲ್ಲಿಗೆ ಅವಶ್ಯವಿರುವಷ್ಟು ಕಲ್ಲಂಗಡಿ ಹಣ್ಣು‌ ಮಳಲಿ, ಪೊಳಲಿ ಆಸುಪಾಸಿನ ಪ್ರದೇಶಗಳಲ್ಲಿ ರೈತರೇ ಬೆಳೆದು ತರುತ್ತಾರೆ. ಮಳಲಿ ಗ್ರಾಮವೊಂದರಲ್ಲೇ ಸುಮಾರು ಹತ್ತಾರು ಎಕರೆಗಳಿಗಿಂತಲೂ ಹೆಚ್ಚಿನ ಜಮೀನಿನಲ್ಲಿ ಜಾತ್ರೋತ್ಸವ­ಕ್ಕಾಗಿಯೇ ಕಲ್ಲಂಗಡಿ ಬೆಳೆ ಇಟ್ಟಿರುತ್ತಾರೆ.

ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಭತ್ತ ಕಟಾವು ಮಾಡುತ್ತಾರೆ. ಈ ಅವಧಿಯಲ್ಲಿ ಭೂಮಿಯಲ್ಲಿ ಹೆಚ್ಚು ತೇವಾಂಶವಿರುವುದರಿಂದ ಕಲ್ಲಂಗಡಿ ಬೆಳೆಯಲು ಸೂಕ್ತ. ಹೀಗಾಗಿ, ಗದ್ದೆಯಲ್ಲೇ ಪಾತಿಗಳನ್ನು ಮಾಡುತ್ತಾರೆ. ಮಕರ ಸಂಕ್ರಮಣ ಕಳೆದು ಹತ್ತನೇ ದಿನದಂದು ಪೊಳಲಿ ದೇವರಿಗೆ ವಿಶೇಷವಾದ ಪ್ರಾರ್ಥನೆ ಸಲ್ಲಿಸಿ, ಹೈಬ್ರಿಡ್‌ ಕಲ್ಲಂಗಡಿ ಹಣ್ಣಿನ ಬೀಜವನ್ನು ಈ ಪಾತಿಯಲ್ಲಿ ಬೀಜದಿಂದ ಬೀಜಕ್ಕೆ ಒಂದು ಅಡಿ ಅಂತರದಲ್ಲಿ ಬಿತ್ತನೆ ಮಾಡುತ್ತಾರೆ. ಈ ಬೆಳೆಗೆ ಸುಡುಮಣ್ಣು, ಹಟ್ಟಿ­ಗೊಬ್ಬರ­ವನ್ನು ಹಾಕಿ ನಾಲ್ಕು ದಿನಗಳಿಗೊಮ್ಮೆ ನೀರುಣಿ­ಸುತ್ತಾರೆ. ಬೀಜವನ್ನು ಬಿತ್ತಿದ ನಂತರ ಕಟಾವು ಆಗುವವರೆಗೂ ಆ ಜಮೀನಿಗೆ ಪಾವಿತ್ರ್ಯತೆಯ ದೃಷ್ಟಿಯಿಂದ ಪಾದರಕ್ಷೆಯನ್ನು ಹಾಕಿಕೊಂಡು ಹೋಗುವುದಿಲ್ಲ.

ಕಲ್ಲಂಗಡಿ ಎಂದರೆ ಭಕ್ತಿ
ಈ ಹಿಂದೆ, ಜಾತ್ರೆಗೆ ಆಗಮಿಸುತ್ತಿದ್ದ ಭಕ್ತಾದಿಗಳು ಕಲ್ಲಂಗಡಿ ತಿಂದು ಬಿಸಾಕಿದ ಬೀಜವನ್ನು, ಜಾತ್ರೆ ಮುಗಿದ ನಂತರ ಗುಡಿಸಿ ತೆಗೆದಿಡುತ್ತಿದ್ದರು. ಮರುವರ್ಷ ಅದೇ ಬೀಜವನ್ನು ಬಿತ್ತನೆಗೆ ಬಳಸುತ್ತಿದ್ದರಂತೆ. ಈಗ ಆಪದ್ಧತಿ ಇಲ್ಲ. ಹೀಗೆ ಬೆಳೆದ ಕಲ್ಲಂಗಡಿಯನ್ನು ಜಾತ್ರೆಯ ಒಂದನೇ ಚೆಂಡಿನ ದಿನ ಬೆಳಗ್ಗೆ, ಕಟಾವಿಗೂ ಮೊದಲು ಒಂದು ಕಲ್ಲಂಗಡಿ ಹಣ್ಣನ್ನು ದೇವಸ್ಥಾನಕ್ಕೆ ಸಮರ್ಪಿಸುತ್ತಾರೆ. ಆ ನಂತರ ಉಳಿದ ಕಲ್ಲಂಗಡಿ ಕಟಾವು ಮಾಡಿ ವಾಹನದಲ್ಲಿ ಪೊಳಲಿ ದೇವಸ್ಥಾನಕ್ಕೆ ತರುತ್ತಾರೆ. ಹೀಗೆ ಜಾತ್ರೆಗೆ ತರುವಲ್ಲಿಯವರೆಗೂ ಹಣ್ಣುಗಳನ್ನು ಮಣ್ಣಿನ ಮಡಕೆಯಷ್ಟೇ ಜಾಗರೂಕವಾಗಿ ನೋಡಿಕೊಳ್ಳುತ್ತಾರೆ.

ಪೊಳಲಿ ಜಾತ್ರೆಯಲ್ಲಿ ಮಾರಾಟವಾಗುವ ಸಾಮಾನ್ಯ ಗಾತ್ರದ ಕಲ್ಲಂಗಡಿ ಹಣ್ಣಿಗೆ 30 ರೂಪಾಯಿಯಿಂದ 50ರೂಪಾಯಿ ದರವಿದೆ. ದೊಡ್ಡ ಗಾತ್ರದ ಕಲ್ಲಂಗಡಿ ಹಣ್ಣಿಗೆ 200 ರೂಪಾಯಿಯಿಂದ 300 ರೂ. ಪೊಳಲಿ ಜಾತ್ರೊತ್ಸವದ ಸಂದರ್ಭದಲ್ಲಿ ಕಲ್ಲಂಗಡಿ ಹಣ್ಣು ವ್ಯಾಪಾರಿಗಳಿಗಾಗಿ ನಿರ್ದಿಷ್ಟವಾದ ಸ್ಥಳವನ್ನು ದೇವಸ್ಥಾನದ ಆಡಳಿತ ಮಂಡಳಿಯು ಗುರುತು ಹಾಕಿಕೊಡುತ್ತದೆ. ಅಲ್ಲಿ ತಂದು ಮಾರಾಟ ಮಾಡುತ್ತಾರೆ.

— ಸಂತೋಷ್‌ ರಾವ್‌ ಪೆರ್ಮುಡ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.