ಡ್ರೋನ್‌ ಮೂಲಕ ಕೀಟನಾಶಕ ಸಿಂಪಡಣೆ

Team Udayavani, Nov 4, 2019, 4:00 AM IST

drone-moo

ಬೆಳೆಗಳಿಗೆ ಕೀಟ ಬಾಧೆ ಉಂಟಾದಾಗ ಸಕಾಲದಲ್ಲಿ ಕೀಟ ನಿಯಂತ್ರಕಗಳನ್ನು ಸಿಂಪಡಣೆ ಮಾಡಬೇಕು. ಈ ಕಾರ್ಯವನ್ನು ಬ್ಯಾಕ್‌ಪ್ಯಾಕ್‌ (ಬೆನ್ನಿಗೆ ಕಟ್ಟಿಕೊಳ್ಳುವ ಕ್ಯಾನ್‌)ಗೆ ನಿಯಂತ್ರಕ ದ್ರವ ತುಂಬಿ ಸಿಂಪಡಣೆ ಮಾಡಲಾಗುತ್ತದೆ. ಇದರಲ್ಲಿ ಮಾನವಚಾಲಿತ, ಯಂತ್ರ ಆಧಾರಿತ ಸಾಧನಗಳಿವೆ. ಆದರೆ ಈ ಎರಡರಲ್ಲಿಯೂ ಸಿಂಪಡಣೆ ಕಾರ್ಯಕ್ಕೆ ತಗುಲುವ ಸಮಯ ಹೆಚ್ಚು.

ಮಾನವ ಆಧಾರಿತ ಪಂಪ್‌ ಆದರೆ ತೆಗೆದುಕೊಳ್ಳುವ ದಿನಗಳು ಹೆಚ್ಚು. ರಾಸಾಯನಿಕಗಳ ಸಿಂಪಡಣೆ ಸಂದರ್ಭದಲ್ಲಿ ಅಪಾಯ ಸಂಭವಿಸುವ ಸಾಧ್ಯತೆಗಳೂ ಇವೆ. ಇತ್ತೀಚಿಗಷ್ಟೆ ಬೆಂಗಳೂರಿನಲ್ಲಿ ನಡೆದ ಕೃಷಿಮೇಳದಲ್ಲಿ ಡ್ರೋನ್‌ ಬಳಸಿ ಕೀಟ ನಿಯಂತ್ರಕ ದ್ರವಾಂಶಗಳನ್ನು ಸಿಂಪಡಣೆ ಮಾಡುವ ಕಾರ್ಯದ ಪ್ರಾತ್ತಕ್ಷಿಕೆ ನಡೆಯಿತು. ಇದರ ಮುಖಾಂತರ, ಒಂದು ಎಕರೆಗೆ 15 ನಿಮಿಷದಲ್ಲಿ ಕೀಟ ನಿಯಂತ್ರಕ ಸಿಂಪಡಿಸಬಹುದು.

ಈ ಯಂತ್ರವನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದೆ. ಈ ಡ್ರೋನ್‌ ಸಹಾಯದಿಂದ ನೀರು ನಿಲ್ಲಿಸಿರುವಂಥ ಭತ್ತದ ಗದ್ದೆಗಳು, ಎತ್ತರದ ತೋಟಗಾರಿಕೆ ಬೆಳೆಗಳು, ಹತ್ತಿ, ತೊಗರಿ ಇತ್ಯಾದಿ ಬೆಳೆಗಳ ಮೇಲೆ ಸಿಂಪಡಿಸಬಹುದು. ನಿರ್ದಿಷ್ಟ ಎತ್ತರದಲ್ಲಿ, ನಿರ್ದಿಷ್ಟ ವೇಗದಲ್ಲಿ ದ್ರವಗಳನ್ನು ಸಿಂಪಡಿಸಬಹುದು. ಇನ್ನೊಂದು ವಿಶೇಷ ಸಂಗತಿಯೆಂದರೆ ಈ ಯಂತ್ರಕ್ಕೆ ಜಿಪಿಎಸ್‌ ವ್ಯವಸ್ಥೆ ಅಳವಡಿಸಲಾಗಿದೆ.

ಇದರಲ್ಲಿ ಹೊಲದ ನಕ್ಷೆ ಸೇರಿಸಿದರೆ ಬೇಕಾದ ಭಾಗಗಳಿಗೆ ಮಾತ್ರ ಸಿಂಪಡಣೆ ನಡೆಯುತ್ತದೆ. ರಿಮೋಟ್‌ ಕಂಟ್ರೋಲ್‌ ಇರುವುದರಿಂದ ನಿರ್ದಿಷ್ಟ ಜಾಗದಲ್ಲಿ ಕುಳಿತು ಇದರ ಚಲನವಲನಗಳನ್ನೂ ನಿಯಂತ್ರಿಸಬಹುದು. ಆದರೆ, ನೆನಪಿಟ್ಟುಕೊಳ್ಳಬೇಕಾದ ಸಂಗತಿಯೆಂದರೆ, ಇದನ್ನು ಹೊಲ- ತೋಟಗಳಲ್ಲಿ ಹಾರಾಡಿಸಲು ಸ್ಥಳೀಯ ಆಡಳಿತದ ಪೂರ್ವಾನುಮತಿ ಅಗತ್ಯ.

ಹೆಚ್ಚಿನ ಮಾಹಿತಿಗೆ: ಡಾ. ಎಂ. ವೀರನಗೌಡ, ಡೀನ್‌, ಕೃಷಿ ತಾಂತ್ರಿಕತೆ, ರಾಯಚೂರು ಕೃಷಿ ವಿಶ್ವವಿದ್ಯಾಲಯ, 9448303282

* ಕುಮಾರ ರೈತ

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.